Home » NEET ಪ್ರತಿಭಟನೆಯಲ್ಲಿ ಬಿಜೆಪಿ ಸರ್ಕಾರದ ಸಚಿವರ ಮಗಳು ಭಾಗಿ!!

NEET ಪ್ರತಿಭಟನೆಯಲ್ಲಿ ಬಿಜೆಪಿ ಸರ್ಕಾರದ ಸಚಿವರ ಮಗಳು ಭಾಗಿ!!

0 comments

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಕುರಿತ CJP ಹೋರಾಟಕ್ಕೆ ಕೊನೆಗೂ ಮೋದಿ ಸರ್ಕಾರ ಮಣಿದಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ ಆಶ್ಚರ್ಯ ಅಂದ್ರೆ ಸಿಜೆಪಿ ನೇತೃತ್ವದಲ್ಲಿ ದೇಶಾದ್ಯಂತ ಯುವಕರು ನಡೆಸಿದ ಪ್ರತಿಭಟನೆಯಲ್ಲಿ ಬಿಜೆಪಿ ಸರ್ಕಾರದ ಸಚಿವರೊಬ್ಬರ ಪುತ್ರಿ ಭಾಗವಹಿಸಿದ್ದಾರೆ. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

ಹೌದು, ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಅಕ್ರಮ ಹೊಣೆಗಾರಿಕೆ ಮತ್ತು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನೇತೃತ್ವದಲ್ಲಿ ದೇಶಾದ್ಯಂತ ಯುವಕರು ಪ್ರತಿಭಟನೆ ನಡೆಸುತ್ತಿದ್ದು, ಅಸ್ಸಾಂನಲ್ಲಿ ರಾಜ್ಯ ಕಂದಾಯ ಸಚಿವ ಕೇಶಬ್ ಮಹಾಂತ ಅವರ ಪುತ್ರಿ ದಿಬಿಶಾ ಮಹಾಂತ ಅವರು ನೀಟ್ ವಿವಾದದ ಕುರಿತು ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಅವರು ಗುವಾಹಟಿಯ ಚಂಚಲ್ ಪ್ರದೇಶದಲ್ಲಿ ಕೇಂದ್ರದ ವಿರುದ್ಧ ವಿದ್ಯಾರ್ಥಿಗಳು ಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ನೀಟ್-ಯುಜಿ ಪರೀಕ್ಷೆಯಲ್ಲಿನ ರಿಗ್ಗಿಂಗ್ ಆರೋಪಗಳಿಗೆ ಕೇಂದ್ರ ಸರ್ಕಾರ ಪ್ರತಿಕ್ರಿಯಿಸಬೇಕು. ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿವೆ. 

 

ಕೇಶಬ್ ಮಹಾಂತ ಅವರು ಅಸ್ಸಾಂ ಗಣ ಪರಿಷತ್ (ಎಜಿಪಿ) ಯ ಹಿರಿಯ ನಾಯಕರಾಗಿದ್ದಾರೆ. ಅವರು 2016ರಿಂದ ಬಿಜೆಪಿ ನೇತೃತ್ವದ ಅಸ್ಸಾಂ ಸರ್ಕಾರದಲ್ಲಿ ಸಚಿವರಾಗಿದ್ದಾರೆ. ಎಜಿಪಿ ಬಿಜೆಪಿಯೊಂದಿಗೆ ಆಡಳಿತಾರೂಢ ಒಕ್ಕೂಟದಲ್ಲಿ ಪಾಲುದಾರರಾಗಿರುವುದರಿಂದ, ಅದೇ ಒಕ್ಕೂಟದ ಕೇಂದ್ರ ಸರ್ಕಾರದ ವಿರುದ್ಧದ ಪ್ರತಿಭಟನೆಯಲ್ಲಿ ಸಚಿವರ ಮಗಳು ಭಾಗವಹಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ.

ಇನ್ನೂ ಈ ವಿಷಯಕ್ಕೆ ಪ್ರತಿಕ್ರಿಯಿಸಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ವಿದ್ಯಾರ್ಥಿಗಳು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುವ ಹಕ್ಕನ್ನು ಸರ್ಕಾರ ಗೌರವಿಸುತ್ತದೆ. ಎಂದಿದ್ದಾರೆ.

You may also like