Home News Mangalore: ಮಂಗಳೂರು: ಬಿಜೆಪಿ ಮಹಿಳಾಮೋರ್ಚಾದ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಕೆದಂಬಾಡಿ ರಾಮಯ್ಯ ಗೌಡರ...

Mangalore: ಮಂಗಳೂರು: ಬಿಜೆಪಿ ಮಹಿಳಾಮೋರ್ಚಾದ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಯ ಸ್ವಚ್ಛತಾ ಮತ್ತು ಗೌರವಾರ್ಪಣೆ!

Hindu neighbor gifts plot of land

Hindu neighbour gifts land to Muslim journalist

Mangalore: ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲ ಮಹಿಳಾಮೋರ್ಚಾದ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ನಮ್ಮ ಜಿಲ್ಲೆಯ ಸ್ವಾತಂತ್ರ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ

ಪ್ರತಿಮೆಯ ಸ್ವಚ್ಛತಾ ಮತ್ತು ಗೌರವಾರ್ಪಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಬಿಜೆಪಿ ಜಿಲ್ಲಾಧಕ್ಷ್ಯರಾದ ಸತೀಶ್ ಕುಂಪಲ ರವರು ಸ್ವಾತಂತ್ರ ಹೋರಾಟಗಾರ ನಮ್ಮ ಜಿಲ್ಲೆಯವರಾದ ಕೆದಂಬಾಡಿ ರಾಮಯ್ಯಗೌಡರ ಸ್ವಾತಂತ್ರ ಹೋರಾಟದ ಬಗ್ಗೆ ಗೌರವ ನುಡಿಗಳನ್ನಾಡಿದರು.

ಈ ಕಾರ್ಯಕ್ರಮದಲ್ಲಿ ನಮ್ಮ ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಮಾಜಿ ವಿಧಾನ ಪರಿಷತ್ ಸದಸ್ಯರಾದ ಮೋನಪ್ಪ ಭಂಡಾರಿ,ಜಿಲ್ಲಾ ಕಾರ್ಯದರ್ಶಿ ಶ್ರೀಮತಿ ಪೂರ್ಣಿಮಾ,ರಾಜ್ಯ ವಕ್ತರರಾದ ಹರಿಪ್ರಕಾಶ್ ಕೋಣಿ ಮನೆ, ರಾಜ್ಯ ಮಾಧ್ಯಮ ಪ್ರಮುಖ್ ರತನ್ ರಾಜೇಶ್ ಪೂಜಾರಿ, ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ಮಂಜುಳಾ ರಾವ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ನಂದನ್ ಮಲ್ಯ, ಮಂಡಲ ಮಹಿಳಾ ಮೋರ್ಚಾದ ಅಧ್ಯಕ್ಷೆ ಪೂರ್ಣಿಮಾ ರಾವ್, ಪಕ್ಷದ ಪ್ರಮುಖರಾದ ನಿತಿನ್ ಕುಮಾರ್, ನಾರಾಯಣಗಟ್ಟಿ, ಮಂಡಲದ ಪ್ರಧಾನ ಕಾರ್ಯದರ್ಶಿ ಲಲ್ಲೆಶ್, ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸಂಧ್ಯಾ ವೆಂಕಟೇಶ್, ಕೆದಂಬಾಡಿ ರಾಮಯ್ಯಗೌಡರ ಸ್ಮಾರಕ ಉಸ್ತುವಾರಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಪುತ್ತಿಲ್ಲ ಮತ್ತು ಸಮಿತಿಯ ಸದಸ್ಯರಾದ ಮಹೇಶ್ ಮೊಂಟಡ್ಕ, ಹಾಗೂ ಜಿಲ್ಲೆಯ ಪದಾಧಿಕಾರಿಗಳು, ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಕಮಲಾಕ್ಷಿ, ಮಹಿಳಾ ಮೋರ್ಚಾದ ಪದಾಧಿಕಾರಿಗಳು ಸದಸ್ಯರು ಮಂಡಲದ ಯುವ ಮೋರ್ಚಾದ ಅಧ್ಯಕ್ಷ ಅಶ್ವಿತ್ ಕೊಟ್ಟಾರಿ, ಮಹಾಶಕ್ತಿ ಕೇಂದ್ರದ ಅಧ್ಯಕ್ಷರುಗಳಾದ ಮೋಹನ್ ಪೂಜಾರಿ, ಪ್ರವೀಣ್ ನಿಡ್ಡೆಲ್, ರವಿ ಚಂದ್ರ, ನಿಕಟಪೂರ್ವ ಮಹಾನಗರ ಪಾಲಿಕೆ ಸದಸ್ಯರು,ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

E-Khata: ಇ-ಖಾತಾ ತಿದ್ದುಪಡಿ ವಿಧೇಯಕದ ಪ್ರಸ್ತಾಪ – ಪದೇ ಪದೇ ಸರ್ವರ್ ಸಮಸ್ಯೆ – ಇದಕ್ಕೆ ಪರಿಹಾರ ಏನು? – ಯತ್ನಾಳ್