Home News MP: ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಬಿಜೆಪಿ ಸಚಿವ ಅವಹೇಳನಕಾರಿ ಹೇಳಿಕೆ ! ವಿಡಿಯೋ ವೈರಲ್

MP: ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಬಿಜೆಪಿ ಸಚಿವ ಅವಹೇಳನಕಾರಿ ಹೇಳಿಕೆ ! ವಿಡಿಯೋ ವೈರಲ್

Hindu neighbor gifts plot of land

Hindu neighbour gifts land to Muslim journalist

MP: ಭಯೋತ್ಪಾದಕರ ವಿರುದ್ಧ ನಡೆದ ಆಪರೇಷನ್ ಸಿಂದೂರ್ ಕಾರ್ಯಾಚರಣೆಯಲ್ಲಿ ಕರ್ನಲ್ ಸೋಫಿಯಾ ಖುರೇಶಿ ಅವರು ಪ್ರಮುಖ ಪಾತ್ರವಹಿಸಿ ಭಾರತೀಯರ ಮೆಚ್ಚುಗೆಗೆ ಪಾತ್ರವಾಗಿದ್ದರು. ಆದರೆ ಇದೀಗ ಬಿಜೆಪಿ ಸಚಿವರೊಬ್ಬರು ಸೋಫಿಯಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

ಹೌದು, ಮಧ್ಯಪ್ರದೇಶದ ಸಚಿವ ಮತ್ತು ಬಿಜೆಪಿ ನಾಯಕ ವಿಜಯ್ ಶಾ ಅವರು ಇಂದೋರ್ ಜಿಲ್ಲೆಯ ರೈಕುಂಡ ಗ್ರಾಮದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸೋಫಿಯಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದು ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಅಷ್ಟೇ ಅಲ್ಲದೆ ಕಾಂಗ್ರೆಸ್ ಮತ್ತು ಭಾರತೀಯರು ಈ ಸಚಿವನ ವಿರುದ್ಧ ಅಸಹನೆ ಹೊರಹಾಕಿದ್ದಾರೆ.

ವೀಡಿಯೋದಲ್ಲಿ ಬಿಜೆಪಿ ಸಚಿವ, ಭಯೋತ್ಪಾದಕರು ನಮ್ಮ ಸಹೋದರಿಯರ ಸಿಂಧೂರವನ್ನು ಅಳಿಸುವ ಮೂಲಕ ಅಗೌರವಗೊಳಿಸಿದ್ದಾರೆ. ಅವರಿಗೆ ತಕ್ಕ ಉತ್ತರವನ್ನು ನೀಡಲು ನಾವು ಅವರ ಸ್ವಂತ ಸಹೋದರಿಯನ್ನು ಕಳುಹಿಸಿದ್ದೇವೆ ಎಂದು ಹೇಳಿರುವುದನ್ನು ಗಮನಿಸಬಹುದಾಗಿದೆ.

ಈ ವೀಡಿಯೊವನ್ನು ಹಂಚಿಕೊಂಡ ಕಾಂಗ್ರೆಸ್, ಮಧ್ಯಪ್ರದೇಶದ ಬಿಜೆಪಿ ಸರ್ಕಾರದ ಸಚಿವ ವಿಜಯ್ ಶಾ ಅವರು ಕರ್ನಲ್ ಸೋಫಿಯಾ ಖುರೇಷಿಯನ್ನು ಭಯೋತ್ಪಾದಕರ ಸಹೋದರಿ ಎಂದು ಅವಮಾನಕರ ಹೇಳಿಕೆಯನ್ನು ನೀಡಿದ್ದಾರೆ. ಭಾರತದ ಮಗಳು ಕರ್ನಲ್ ಸೋಫಿಯಾ ಖುರೇಷಿ ಬಗ್ಗೆ ಪ್ರತಿಯೊಬ್ಬ ಭಾರತೀಯನೂ ಹೆಮ್ಮೆಪಡುತ್ತಾನೆ. ಆದರೆ ಇಂತಹ ಗಟ್ಟಿಗಿತ್ತಿ ಮಗಳ ಬಗ್ಗೆ ನಾಚಿಕೆಗೇಡಿನ ಹೇಳಿಕೆಯನ್ನು ನೀಡಲಾಗಿದೆ. ಈ ಮೂಲಕ ಖುರೇಷಿಯವರಿಗೆ ಭಯೋತ್ಪಾದಕರ ಸಹೋದರಿ ಎಂದು ಹಣೆಪಟ್ಟಿ ಕಟ್ಟಲಾಗಿದೆ. ಇದು ನಮ್ಮ ವೀರ ಸಶಸ್ತ್ರ ಪಡೆಗಳಿಗೆ ಮಾಡಿದ ಅವಮಾನ ಎಂದು ಬರೆದುಕೊಳ್ಳುವ ಮೂಲಕ ಕಿಡಿಕಾರಿದೆ.