ಸೋಮವಾರ, 26 ಅಕ್ಟೋಬರ್ 2026
Trending

11 ಲಕ್ಷ ರೂ ಲಂಚಕ್ಕೆ ಬೇಡಿಕೆ ಇಟ್ಟ ಬಿಜೆಪಿ ಶಾಸಕ, ಲೋಕಾ ಬಲೆಗೆ

ಗದಗ: ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ನಡೆದಿದೆ.

Sponsored

11 ಲಕ್ಷ ರೂ ಲಂಚ ಬೇಡಿಕೆ ಇಡಲಾಗಿದ್ದು, ಮುಂಗಡವಾಗಿ 5 ಲಕ್ಷ ರೂ ಕಮಿಷನ್ ಪಡೆಯುವಾಗ ಶಾಸಕ ಸೇರಿದಂತೆ ಪಿಎಗಳಾದ ಮಂಜುನಾಥ್ ಮತ್ತು ಗುರು ಸಿಕ್ಕಿಬಿದ್ದಿದ್ದು, ಮೂವರನ್ನು ವಶಕ್ಕೆ ಪಡೆದು ಲೋಕಯುಕ್ತ ಪೊಲೀಸರಿಂದ ವಿಚಾರಣೆ ಮಾಡಲಾಗುತ್ತಿದೆ.

ಕಾಮಗಾರಿ ಯೋಜನೆಗೆ ಗುತ್ತಿಗೆದಾರನಿಂದ 11 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಡಲಾಗಿತ್ತು. ಅದರಲ್ಲಿ ಮುಂಗಡವಾಗಿ 5 ಲಕ್ಷ ರೂ. ಕಮಿಷನ್‌ ಪಡೆಯುವಾಗ ಶಾಸಕರು ಸಿಕ್ಕಿಬಿದ್ದಿರುವ ಘಟನೆ ನಡೆದಿದೆ.

ಗದಗ ಜಿಲ್ಲೆಯ ಲಕ್ಷ್ಮೀಶ್ವರ ಪಟ್ಟಣದಲ್ಲಿರುವ ಬಾಲಾಜಿ ಆಸ್ಪತ್ರೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದರು. ಶಾಸಕ ಚಂದ್ರು ಲಾಮಾಣಿ ಸ್ವತಃ ವೈದ್ಯರು ಕೂಡಾ ಆಗಿದ್ದು, ಬಾಲಾಜಿ ಆಸ್ಪತ್ರೆ ಚಂದ್ರು ಲಮಾಣಿ ಅವರ ಒಡೆತನ ಆಸ್ಪತ್ರೆಯಾಗಿದ್ದು, ಲೋಕಾಯುಕ್ತ ಅಧಿಕಾರಿಗಳ ದಾಳಿ ವೇಳೆ ಶಾಸಕ ಚಂದ್ರು ಲಮಾಣಿ ಹಾಗೂ ಅವರ ಇಬ್ಬರು ಪಿಎಗಳಾದ ಮಂಜುನಾಥ್‌ ಹಾಗೂ ಗುರು ಸಹ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಮೂವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.