G-GFTHW1YKW0
ಭಾನುವಾರ, 25 ಅಕ್ಟೋಬರ್ 2026
Trending

ಬಿಜೆಪಿ ಎಂಎಲ್‌ಸಿ ಎನ್‌ ರವಿಕುಮಾರ್‌ಗೆ ಜಾಮೀನುರಹಿತ ಬಂಧನ ವಾರಂಟ್‌

ಕಲಬುರಗಿ, ಆ.24: ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ನೀಡಿದ್ದ ಅವಹೇಳನಕಾರಿ ಹಾಗೂ ಕೋಮುಪ್ರಚೋದಕ ಹೇಳಿಕೆ ಪ್ರಕರಣಕ್ಕೆ ಕುರಿತಂತೆ ಗೈರುಹಾಜರಾದ ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಎನ್‌ ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್‌ ಹೊರಡಿಸಿದೆ.

Sponsored

ಕಳೆದ ವರ್ಷ ಕಲಬುರಗಿಯಲ್ಲಿ ನಡೆದ ಪ್ರತಿಭಟನೆ ವೇಳೆ ಜಿಲ್ಲಾಧಿಕಾರಿ ವಿರುದ್ಧ ಎಂಎಲ್‌ಸಿ ಎನ್‌ ರವಿಕುಮಾರ್‌ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಕುರಿತು ಕಲಬುರಗಿಯ ಸ್ಟೇಷನ್‌ ಬಜಾರ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

ತಮ್ಮ ವಿರುದ್ಧದ ಪ್ರಕರಣವನ್ನು ರವಿಕುಮಾರ್‌ ರದ್ದುಗೊಳಿಸಲು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಆದರೆ ಹೈಕೋರ್ಟ್‌ ವಿಚಾರಣೆ ಮಾಡಿದ್ದು, ಪ್ರಕರಣಕ್ಕೆ ಮಧ್ಯಂತರ ತಡೆ ನೀಡಲು ನಿರಾಕರಿಸಿತ್ತು.