Home News Viral Post: ‘ಹೆಣ ಬಿದ್ದ ಕೂಡಲೇ ಬಿಜೆಪಿ ಕ್ರಿಮಿನಲ್ ಗಳನ್ನು ಮಹಾತ್ಮರಂತೆ ಬಿಂಬಿಸುತ್ತದೆ’- ಪೋಸ್ಟ್ ಹಾಕಿ...

Viral Post: ‘ಹೆಣ ಬಿದ್ದ ಕೂಡಲೇ ಬಿಜೆಪಿ ಕ್ರಿಮಿನಲ್ ಗಳನ್ನು ಮಹಾತ್ಮರಂತೆ ಬಿಂಬಿಸುತ್ತದೆ’- ಪೋಸ್ಟ್ ಹಾಕಿ ದ. ಕ ಜಿಲ್ಲೆಯ ಜನತೆಯನ್ನು ಎಚ್ಚರಿಸಿದ ಸಚಿವ ದಿನೇಶ್ ಗುಂಡೂರಾವ್

Hindu neighbor gifts plot of land

Hindu neighbour gifts land to Muslim journalist

Viral Post: ಕರಾವಳಿಯಲ್ಲಿ ಭೀಕರ ಹತ್ಯೆಗೆ ಒಳಗಾದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ. ಜೊತೆಗೆ ಬಿಜೆಪಿ ಹಾಗೂ ಕಾಂಗ್ರೆಸ್ ಹೆಸರೆರಚಾಟಕ್ಕೆ ನಾಂದಿ ಹಾಡಿದೆ. ಇದರ ನಡುವೆಯೇ ಕಾಂಗ್ರೆಸ್ನ ಪ್ರಭಾವಿ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ‘ಹೆಣ ಬಿದ್ದ ಕೂಡಲೇ ಬಿಜೆಪಿ ಕ್ರಿಮಿನಲ್ ಗಳನ್ನು ಮಹಾತ್ಮರಂತೆ ಬಿಂಬಿಸುತ್ತದೆ’ ಎಂದು ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.

ಪೋಸ್ಟ್ ನಲ್ಲಿ ಏನಿದೆ?

ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಸಚಿವ ದಿನೇಶ್ ಗುಂಡೂರಾವ್ ಅವರು ‘ಅಮಾಯಕರ ತಲೆಯಲ್ಲಿ ಮತಾಂಧತೆಯ ಅಮಲು‌ ತುಂಬಿ ಕಂಡವರ ಮಕ್ಕಳನ್ನು ಬಾವಿಗೆ ತಳ್ಳುತ್ತಿರುವ BJP ನಾಯಕರ ಗಮನಕ್ಕೆ. ಇದು ಇತ್ತೀಚೆಗೆ ಹತ್ಯೆಯಾದ ಸುಹಾಶ್ ಶೆಟ್ಟಿ ವಿರುದ್ದ ರೌಡಿ ಶೀಟರ್ ತೆರೆಯಲು ಪೊಲೀಸ್ ಇಲಾಖೆ ನೀಡಿದ್ದ ಆದೇಶದ ಪ್ರತಿ ಎಂದು ಆದೇಶ ಪ್ರತಿಯನ್ನು ಹಂಚಿಕೊಂಡಿದ್ದಾರೆ.

#SuhasShetty ವಿರುದ್ಧ ರೌಡಿ ಶೀಟರ್ ಓಪನ್ ಆಗಿದ್ದು 2020 ರಲ್ಲಿ. ಆಗ ಅಧಿಕಾರದಲ್ಲಿದ್ದದ್ದು ಅಂದು ಕರ್ನಾಟಕದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರವೇ. ಗೃಹ ಸಚಿವರಾಗಿದ್ದ ಪುಣ್ಯಾತ್ಮ ಬಸವರಾಜ ಬೊಮ್ಮಾಯಿ @BSBommai. ಇಂದು ಸುಹಾಸ್‌ನನ್ನು‌ ಮಹಾತ್ಮ ಎಂದು ಬಿಂಬಿಸುತ್ತಿರುವ ಬಿಜೆಪಿಯವರು ಆಗ ಯಾಕೆ ಸುಹಾಸ್‌ನನ್ನು ರೌಡಿ ಪಟ್ಟಿಗೆ ಸೇರಿಸಿದ್ದರು. ಕರಾವಳಿಯನ್ನು ಕೋಮು‌ ಪ್ರಯೋಗ ಶಾಲೆಯನ್ನಾಗಿ ಮಾಡಿಕೊಂಡಿರುವ ಬಿಜೆಪಿಯವರೇ ಕ್ರಿಮಿನಲ್‌ಗಳ ನಿಜವಾದ ಸೃಷ್ಟಿಕರ್ತರು. ಇವರು‌ ಅಧಿಕಾರದಲ್ಲಿದ್ದಾಗ ಕ್ರಿಮಿನಲ್‌ಗಳನ್ನು ಸೃಷ್ಟಿಸುತ್ತಾರೆ. ಅವರ ಮೇಲೆ ರೌಡಿ ಶೀಟರ್ ತೆರೆಯುತ್ತಾರೆ. ಹೆಣ ಬಿದ್ದ ಕೂಡಲೆ ಅದೇ ಕ್ರಿಮಿನಲ್‌ಗಳನ್ನು‌ ಮಹಾತ್ಮರಂತೆ ಬಿಂಬಿಸಿ ಹುತಾತ್ಮರನ್ನಾಗಿ‌ ಮಾಡುತ್ತಾರೆ ಎಂದು ದೂರಿದ್ದಾರೆ.

ಸುಹಾಸ್ ಹತ್ಯೆ ನಂತರ ಕೂಗುಮಾರಿಗಳಂತೆ ಅರಚುತ್ತಿರುವ ಬಿಜೆಪಿ ಕರ್ನಾಟಕ ನಾಯಕರ‌ ಯಾರ ಮಕ್ಕಳಾದರೂ ಧರ್ಮದ ಅಮಲಿನಲ್ಲಿ ಬೀದಿ‌ ಕಾಳಗ ಮಾಡುತ್ತಿದ್ದಾರೆಯೆ.? ಅಥವಾ ಧರ್ಮಕ್ಕಾಗಿ ಬಡಿದಾಡುತ್ತಿದ್ದಾರೆಯೆ.? ಬಿಜೆಪಿ ನಾಯಕರ‌ ಧರ್ಮಾಂಧತೆಗೆ‌ ಬೀದಿ ಹೆಣವಾಗುತ್ತಿರುವುದು ಬಡವರ ಮಕ್ಕಳು. ಇದು ಸತ್ಯವಲ್ಲವೇ ಎಂದು ಅವರು ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ.

ಬಿಜೆಪಿಯವರ ‌ಕೆಟ್ಟ ರಾಜಕೀಯಕ್ಕೆ ಕರಾವಳಿಯಲ್ಲಿ ಎಷ್ಟೋ ಜನರ‌ ಬಲಿಯಾಗಿದೆ. ಎಷ್ಟೋ ಮನೆಗಳ‌ ದೀಪ ಆರಿ ಹೋಗಿದೆ. ಇಷ್ಟಾದರೂ ಇವರ ರಕ್ತದಾಹ ನಿಂತಿಲ್ಲ. ಕರಾವಳಿಯಲ್ಲಿ ಇನ್ನಷ್ಟು ಹೆಣ ಬೀಳಬೇಕು ಎನ್ನುವ ಉದ್ದೇಶದಿಂದ ‌ದುಷ್ಟ ರಾಜಕಾರಣ ಮಾಡುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಜನ‌ ಪ್ರಜ್ಞಾವಂತಿಕೆಯ ಜೊತೆಗೆ ಸೂಕ್ಷ್ಮತೆಯನ್ನು ಅರಿತುಕೊಂಡವರು. ಇನ್ನಾದರೂ ಕರಾವಳಿಯ ಜನ ಬಿಜೆಪಿಯ ಹುನ್ನಾರ ಅರಿಯಬೇಕಿದೆ. ಇಲ್ಲದಿದ್ದರೆ‌ ಬಿಜೆಪಿಯವರ‌ ಕೆಟ್ಟ ರಾಜಕಾರಣಕ್ಕೆ ಜಿಲ್ಲೆಯ‌ ನೆಮ್ಮದಿಯೇ ಹಾಳಾಗಲಿದೆ ಎಂದೂ ಅವರು ಎಚ್ಚರಿಕೆ ನೀಡಿದ್ದಾರೆ. ಇದೀಗ ಈ ಪೋಸ್ಟ್‌ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ವೈರಲ್ ಆಗುತ್ತಿದೆ.