Home News Delhi Assembly Election 2025: ದೆಹಲಿ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆ; ಅರವಿಂದ್...

Delhi Assembly Election 2025: ದೆಹಲಿ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆ; ಅರವಿಂದ್ ಕೇಜ್ರಿವಾಲ್‌ಗೆ ಸವಾಲು ಹಾಕಲಿದ್ದಾರೆ ಈ ನಾಯಕರು

Hindu neighbor gifts plot of land

Hindu neighbour gifts land to Muslim journalist

Delhi Assembly Election 2025: ದೆಹಲಿ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಯಾಗಿದೆ. 29 ಅಭ್ಯರ್ಥಿಗಳ ಈ ಪಟ್ಟಿಯಲ್ಲಿ ಅರವಿಂದ್ ಕೇಜ್ರಿವಾಲ್ ಮತ್ತು ಸಿಎಂ ಅತಿಶಿ ವಿರುದ್ಧ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ನವದೆಹಲಿ ವಿಧಾನಸಭಾ ಕ್ಷೇತ್ರದಿಂದ ಪ್ರವೇಶ್ ಸಾಹಿಬ್ ಸಿಂಗ್ ವರ್ಮಾ ಮತ್ತು ಕಲ್ಕಾಜಿ ಕ್ಷೇತ್ರದಿಂದ ರಮೇಶ್ ಬಿಧುರಿ ಅವರಿಗೆ ಟಿಕೆಟ್ ನೀಡಲಾಗಿದೆ. ಇದಲ್ಲದೇ ಆಪ್ ವಿರುದ್ಧ ಬಂಡಾಯವೆದ್ದು ಬಿಜೆಪಿ ಸೇರಿದ ಕೈಲಾಶ್ ಗೆಹ್ಲೋಟ್ ಅವರನ್ನು ಬಿಜ್ವಾಸನ್ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ.

ಬೇರೆ ಪಕ್ಷಗಳ ವಿರುದ್ಧ ಬಂಡಾಯವೆದ್ದು ಬಿಜೆಪಿ ಸೇರಿದ ನಾಯಕರಿಗೂ ಪಕ್ಷದ ಹೈಕಮಾಂಡ್ ಅವಕಾಶ ನೀಡಿದೆ. ಇವರಲ್ಲಿ ಕರ್ತಾರ್ ಸಿಂಗ್ ತನ್ವಾರ್, ರಾಜ್‌ಕುಮಾರ್ ಚೌಹಾಣ್, ಕೈಲಾಶ್ ಗೆಹ್ಲೋಟ್ ಮತ್ತು ಅರವಿಂದರ್ ಸಿಂಗ್ ಲವ್ಲಿ ಸೇರಿದ್ದಾರೆ.

29 ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ್ದು, ಇಬ್ಬರು ಮಹಿಳೆಯರು. ಶಾಲಿಮಾರ್ ಬಾಗ್‌ನಿಂದ ರೇಖಾ ಗುಪ್ತಾ ಮತ್ತು ಸೀಮಾಪುರಿ ಎಸ್‌ಸಿ ಸ್ಥಾನದಿಂದ ಕುಮಾರಿ ರಿಂಕು ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ.