ಸೋಮವಾರ, 26 ಅಕ್ಟೋಬರ್ 2026
Trending

ಅಸ್ಸಾಂನಲ್ಲಿ ಬಿಜೆಪಿ ಭರ್ಜರಿ ಮುನ್ನಡೆ

ಅಸ್ಸಾಂ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸತತ ಮೂರನೇ ಬಾರಿಗೆ ಅಧಿಕಾರಕ್ಕೇರುವತ್ತ ದಾಪುಗಾಲು ಹಾಕಿದೆ. ಒಟ್ಟು 126 ಕ್ಷೇತ್ರಗಳಿರುವ ಅಸ್ಸಾಂನಲ್ಲಿ ಬಹುಮತಕ್ಕೆ 64 ಸ್ಥಾನಗಳ ಅಗತ್ಯವಿದ್ದು, ಮಧ್ಯಾಹ್ನ 11.45 ರ ಸುಮಾರಿಗೆ ಬಿಜೆಪಿ ಬರೋಬ್ಬರಿ 101 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಹ್ಯಾಟ್ರಿಕ್‌ ಗೆಲುವಿನ ಮುನ್ಸೂಚನೆಯಲ್ಲಿ ಬಿಜೆಪಿ ಘಟಕವು ಭಾರೀ ಖುಷಿಯಲ್ಲಿದೆ.

Sponsored

ಈ ಸಂಭ್ರಮವನ್ನು ವ್ಯಕ್ತಪಡಿಸಲು ಅಸ್ಸಾಂ ಬಿಜೆಪಿ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ವಿಶೇಷ ಎಐ ವಿಡಿಯೋವೊಂದನ್ನು ಹಂಚಿಕೊಂಡಿದೆ. ಈ ವಿಡಿಯೋದಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾಶಿಗೆ ಹೋಗಿದ್ದ ಸಂದರ್ಭದಲ್ಲಿ ಒಂದು ಕೈಯಲ್ಲಿ ಡಮರು ಇನ್ನೊಂದು ಕೈಯಲ್ಲಿ ತ್ರಿಶೂಲ ಹಿಡಿದಿದ್ದ ವಿಡಿಯೋವನ್ನು ಎಐ ಮೂಲಕ ಎಡಿಟ್‌ ಮಾಡಿ ಹಂಚಲಾಗಿದೆ.

Advertisement
Advertisement
Advertisement