Home News Delhi: ದೆಹಲಿಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು – ‘ಈರುಳ್ಳಿಗೆ ಹೋದ ಮಾನ ತೆರಿಗೆಯಿಂದ ಬಂತು’,...

Delhi: ದೆಹಲಿಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು – ‘ಈರುಳ್ಳಿಗೆ ಹೋದ ಮಾನ ತೆರಿಗೆಯಿಂದ ಬಂತು’, 27 ವರ್ಷಗಳ ಹಿಂದೆ ಏನಾಗಿತ್ತು?

Hindu neighbor gifts plot of land

Hindu neighbour gifts land to Muslim journalist

Delhi: ದೆಹಲಿ ಚುನಾವಣಾ ಫಲಿತಾಂಶ ಹೊರ ಬಿದ್ದಿದೆ. 48 ಸ್ಥಾನಗಳಲ್ಲಿ ಬಿಜೆಪಿ ಜಯಗಳಿಸಿದರೆ ಆಪ್ 22 ಸ್ಥಾನಗಳಿಗೆ ಸಮಾಧಾನ ಪಟ್ಟುಕೊಂಡಿದೆ. ಒಟ್ಟಿನಲ್ಲಿ ಬರೋಬ್ಬರಿ 27 ವರ್ಷಗಳ ಬಳಿಕ ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿ ಅಧಿಕಾರ ಹಿಡಿದಿದೆ. ಸರಿ ಸುಮಾರು 27 ವರ್ಷಗಳ ಹಿಂದೆ ಬಿಜೆಪಿ ಈರುಳ್ಳಿ ಕಾರಣದಿಂದ ತನ್ನ ಅಧಿಕಾರ ಕಳೆದುಕೊಂಡಿತ್ತು. ಇದೀಗ ತೆರಿಗೆ ಕಾರಣಕ್ಕೆ ಮರಳಿ ಅಧಿಕಾರ ಬಂದಿದೆ ಎನ್ನಲಾಗುತ್ತಿದೆ. ಒಟ್ಟಿನಲ್ಲಿ ‘ಈರುಳ್ಳಿಗೆ ಹೋದ ಮಾನ ತೆರಿಗೆಯಿಂದ ಬಂತು’ ಎಂದು ಜನರು ವಿಶ್ಲೇಷಿಸುತ್ತಿದ್ದಾರೆ. ಹಾಗಾದರೆ 27 ವರ್ಷಗಳ ಹಿಂದೆ ಏನಾಗಿತ್ತು? ಇಲ್ಲಿದೆ ನೋಡಿ ಡೀಟೇಲ್ಸ್.

ಅದು 1998 ರ ಸಮಯ. ಅಂದು ಸುಷ್ಮಾ ಸ್ಮರಾಜ್ ಕೇಂದ್ರ ಕ್ಯಾಬಿನೆಟ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಅಕ್ಟೋಬರ್ 12, 1998ರಲ್ಲಿ ಸುಷ್ಮಾ ಸ್ವರಾಜ್ ದೆಹಲಿ ಮುಖ್ಯಮಂತ್ರಿಯಾಗುವ ಮೂಲಕ ಹೊಸ ಇತಿಹಾಸ ಬರೆದಿದ್ದರು. ದೆಹಲಿಯ ಮೊದಲ ಮಹಿಳಾ ಮುಖ್ಯಮಂತ್ರಿ ಅನ್ನೋ ಹೆಗ್ಗಳಿಕೆಗೆ ಸುಷ್ಮಾ ಸ್ವರಾಜ್ ಪಾತ್ರರಾಗಿದ್ದರು. ಇದಾದ ಬಳಿಕ ಕಾಂಗ್ರೆಸ್‌ನಿಂದ ಶೀಲಾ ದೀಕ್ಷಿತ್ ದೆಹಲಿ ಮುಖ್ಯಮಂತ್ರಿಯಾಗಿದ್ದಾರೆ. ಆದರೆ ದೆಹಲಿ ಮೊದಲ ಮಹಿಳಾ ಮುಖ್ಯಮಂತ್ರಿ ಸುಷ್ಮಾ ಸ್ವರಾಜ್.

ಆದರೆ ಸುಷ್ಮಾ ಸ್ವರಾಜ್ ದೆಹಲಿ ಮುಖ್ಯಮಂತ್ರಿಯಾಗಿ ಕೇವಲ 52 ದಿನ ಮಾತ್ರ ಆಡಳಿತ ನಡೆಸಿದ್ದರು. ಅತ್ಯಲ್ಪ ಕಾಲದಲ್ಲಿ ಸುಷ್ಮಾ ಸ್ವರಾಜ್ ದಿಢೀರ್ ರಾಜೀನಾಮೆ ನೀಡಬೇಕಾದ ಪರಿಸ್ಥಿತಿ ಎದುರಾಗಿತ್ತು. 1998ರ ದೆಹಲಿ ವಿಧಾನಸಭೆ ಚುನಾವಣೆಗೂ ಮೊದಲೇ ಸುಷ್ಮಾ ಸ್ವರಾಜ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದಕ್ಕೆ ಮುಖ್ಯ ಕಾರಣ 1998ರ ವೇಳೆ ಈರುಳ್ಳಿ ಬೆಲೆ ಗಗನಕ್ಕೇರಿತ್ತು. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿತ್ತು. ಬಿಜೆಪಿ ಪಕ್ಷದೊಳಗೂ ಆತಂರಿಕ ಭಿನ್ನಾಭಿಪ್ರಾಯಗಳು ವ್ಯಕ್ತವಾಗಿತ್ತು. ಇದರ ಪರಿಣಾಮ ಸುಷ್ಮಾ ಸ್ವರಾಜ್ ರಾಜೀನಾಮೆ ನೀಡಿದ್ದದರು. ಪ್ರಮುಖವಾಗಿ ಈರುಳ್ಳಿ ಕಾರಣದಿಂದ 1998ರಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡಿತ್ತು.

ಬಳಿಕ ಅದೇನೇ ಕಸರತ್ತು ಮಾಡಿದರೂ ಬಿಜೆಪಿಗೆ ಅಧಿಕಾರ ಮರಳಿ ಪಡೆಯಲು ಸಾಧ್ಯವಾಗಲಿಲ್ಲ. ಕಾಂಗ್ರೆಸ್ ಶೀಲಾ ದೀಕ್ಷಿತ್ ಬರೋಬ್ಬರಿ 15 ವರ್ಷಗಳ ಕಾಲ ಅಂದರೆ 3 ಅವಧಿಗೆ ಮುಖ್ಯಮಂತ್ರಿಯಾಗಿದ್ದರು. ದೆಹಲಿ ಕಾಂಗ್ರೆಸ್ ಭದ್ರಕೋಟೆಯಾಗಿ ಮಾರ್ಪಾಡು ಮಾಡಿತ್ತು. ಅರವಿಂದ್ ಕೇಜ್ರಿವಾಲ್ ಕಳದ 10 ವರ್ಷ ದೆಹಲಿ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದರು. ಇದರ ನಡುವೆ ಬಿಜೆಪಿ ಪ್ರಯತ್ನಗಳು ಫಲಿಸಲಿಲ್ಲ. ಆದರೆ ಈ ಬಾರಿಯ ಚುನಾವಣೆ ವೇಳೆ ಆಮ್ ಆದ್ಮಿ ಪಾರ್ಟಿ ಮಾಡಿದ ಸ್ವಯಂಕೃತ ಅಪರಾಧಗಳು ಬಿಜೆಪಿಗೆ ವರವಾಯಿತು.