ಸೋಮವಾರ, 26 ಅಕ್ಟೋಬರ್ 2026
Trending

‘ವಂದೇ ಮಾತರಂ’ ಮೊದಲ 2 ಚರಣ ಮಾತ್ರ: ನಿಲುವು ಬದಲಿಸಲ್ಲ ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು : ‘ವಂದೇ ಮಾತರಂ’ ಗೀತೆಯ ವಿಚಾರದಲ್ಲಿ ತಮ್ಮ ಹಿಂದಿನ ಹೇಳಿಕೆಗೆ ಬದ್ಧವಾಗಿರುವುದಾಗಿ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ. ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವ ನಿರ್ಧಾರ ಮುಂದುವರಿಯಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Sponsored

ಸಚಿವ ಬಿ. ನಾಗೇಂದ್ರಗೆ ಮತ್ತೊಂದು ರಿಲೀಫ್; ರಾಜ್ಯದ ಹೊರಗೆ ಪ್ರಯಾಣಕ್ಕೆ ಗ್ರೀನ್ ಸಿಗ್ನಲ್

ಮಾಧ್ಯಮಗಳೊಂದಿಗೆ ಮಾತನಾಡಿದ ಹರಿಪ್ರಸಾದ್, ಈ ಕುರಿತು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಕೈಗೊಂಡಿರುವ ನಿರ್ಧಾರವನ್ನು ಸ್ವಾಗತಿಸುವುದಾಗಿ ತಿಳಿಸಿದರು. ‘ವಂದೇ ಮಾತರಂ’ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದ ಅವರು, ದೇಶಪ್ರೇಮದ ಹೆಸರಿನಲ್ಲಿ ರಾಜಕೀಯ ಲಾಭ ಪಡೆಯುವ ಪ್ರಯತ್ನ ನಡೆಯುತ್ತಿದೆ ಎಂದು ಟೀಕಿಸಿದರು. ಇದೇ ವೇಳೆ ಬಿಜೆಪಿ ಹಾಗೂ ಆರ್‌ಎಸ್‌ಎಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ತಮ್ಮ ಸಿದ್ಧಾಂತ ಮತ್ತು ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ಸಚಿವ ಬಿ. ನಾಗೇಂದ್ರಗೆ ಮತ್ತೊಂದು ರಿಲೀಫ್; ರಾಜ್ಯದ ಹೊರಗೆ ಪ್ರಯಾಣಕ್ಕೆ ಗ್ರೀನ್ ಸಿಗ್ನಲ್