Home News Belthangady: ಬೆಳಾಲು ನೇತ್ರಾವತಿ ನದಿಯಲ್ಲಿ ಮುಳುಗಿದ್ದ ವ್ಯಕ್ತಿ ಶವ ಪತ್ತೆ

Belthangady: ಬೆಳಾಲು ನೇತ್ರಾವತಿ ನದಿಯಲ್ಲಿ ಮುಳುಗಿದ್ದ ವ್ಯಕ್ತಿ ಶವ ಪತ್ತೆ

Hindu neighbor gifts plot of land

Hindu neighbour gifts land to Muslim journalist

Belthangady: ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ನಿನ್ನೆ (ಸೋಮವಾರ ಡಿ.2) ಸಂಜೆ ನೇತ್ರಾವತಿ ನದಿಗೆ ಇಳಿದ ವ್ಯಕ್ತಿ ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆಯೊಂದು ನಡೆದಿತ್ತು. ಇದೀಗ ಇದಕ್ಕೆ ಸಂಬಂಧಪಟ್ಟಂತೆ ರಾತ್ರಿ ಮೃತದೇಹ ದೊರಕಿದ್ದು, ಹೊರತೆಗೆಯಲಾಗಿದೆ.

ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್‌ (38) ಎಂಬುವವರೇ ಮೃತ ವ್ಯಕ್ತಿ. ಇವರು ಸಂಜೆ ಸರಿ ಸುಮಾರು ಐದರಿಂದ ಆರು ಗಂಟೆ ಸುಮಾರಿಗೆ ನದಿಗೆ ಇಳಿದಿದ್ದಾರೆ. ನಂತರ ಮುಳುಗಿ ನಾಪತ್ತೆಯಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ, ಶೌರ್ಯ ವಿಪತ್ತು ನಿರ್ವಹಣೆ ತಂಡದವರು ಭೇಟಿ ನೀಡಿದ್ದಾರೆ.

ಮುಳುಗು ತಜ್ಞ ಬೆಳ್ತಂಗಡಿಯ ಸಂಜಯ ನಗರದ ಇಸ್ಮಾಯಿಲ್‌ ಹಾಗೂ ಅಗ್ನಿಶಾಮಕದಳದವರು ರಾತ್ರಿ 11 ರ ಹೊತ್ತಿಗೆ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ.

ಪಾರ್ಥೀವ ಶರೀರ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿದ್ದು, ಅಂತಿಮ ದರ್ಶನಕ್ಕೆ ಸ್ವಗ್ರಾಮ ಬೆಳಾಲ್‌ನಲ್ಲಿ ಇಂದು (ಮಂಗಳವಾರ) ಬೆಳಗ್ಗೆ 11-1 ಗಂಟೆಯವರೆಗೆ ವ್ಯವಸ್ಥೆ ಕಲ್ಪಿಸಲಾಗಿದೆ.