Home News Air Show: ಏರ್ ಶೋ ಹೊತ್ತಲ್ಲೇ ಕೆಂಪೇಗೌಡ ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ

Air Show: ಏರ್ ಶೋ ಹೊತ್ತಲ್ಲೇ ಕೆಂಪೇಗೌಡ ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ

Hindu neighbor gifts plot of land

Hindu neighbour gifts land to Muslim journalist

Air Show: ಏರ್ ಶೋ ಸಿದ್ಧತೆ (Air Show) ನಡೆಯುತ್ತಿರುವ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (Kempegowda International Airport) ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಏರ್ ಶೋ ನಡೆಯುತ್ತಿರುವ ಸಂದರ್ಭದಲ್ಲಿ ಬೆದರಿಕೆ ಬಂದ ಹಿನ್ನೆಲೆ ಪೊಲೀಸರು ಭದ್ರತೆ ಹೆಚ್ಚಿಸಿದ್ದು, ದುಷ್ಕರ್ಮಿಗಳ ವಿರುದ್ಧ ಬಿಎನ್‌ಎಸ್ 125, 351, 353 ಆಡಿ ಎಫ್‌ಐಆರ್ ದಾಖಲು ಮಾಡಲಾಗಿದೆ. ಈ ಬಗ್ಗೆ ಬೆಂಗಳೂರು ಏರ್‌ಪೋರ್ಟ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಹೌದು, ಏರ್ ಶೋಗಾಗಿ ತಯಾರಿ ನಡೆಯುತ್ತಿರುವಾಗ ಫೆಬ್ರವರಿ 8 ರಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಮೇಲ್ ಬಂದಿದೆ. mahantesh6699@proton.mi ಇಮೇಲ್ ಐಡಿ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ದುಷ್ಕರ್ಮಿಗಳು ಏರ್‌ಪೋರ್ಟ್‌ಗೆ ಆಗಮಿಸುವ ವಿಮಾನಗಳಿಗೆ ಡ್ರೋನ್ ಮುಖಾಂತರ ಬಾಂಬ್ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿಗೆ ಪತ್ರ ಬರೆದಿದ್ದೇನೆ. ಪತ್ರ ಬರೆದು ಅವರಿಂದ ಪ್ರತಿಕ್ರಿಯೆ ಕೋರಿದ್ದೇನೆ. ನನ್ನ ಪತ್ರಕ್ಕೆ ಪ್ರತಿಕ್ರಿಯೆ ಬರದಿದ್ದರೆ ಡ್ರೋನ್ ಬಾಂಬ್ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.