Home News Bugs killed man in US Jail: ಅಮೆರಿಕಾದ ಜೈಲಿನಲ್ಲಿ ಕೈದಿಯನ್ನ ಜೀವಂತವಾಗಿ ತಿಂದು ಮುಗಿಸಿದ...

Bugs killed man in US Jail: ಅಮೆರಿಕಾದ ಜೈಲಿನಲ್ಲಿ ಕೈದಿಯನ್ನ ಜೀವಂತವಾಗಿ ತಿಂದು ಮುಗಿಸಿದ ಕೀಟಗಳು !

Bugs killed man in US Jail

Hindu neighbor gifts plot of land

Hindu neighbour gifts land to Muslim journalist

Bugs killed man in US Jail: ಸಿನಿಮಾಗಳಲ್ಲಿ ವಿವಿಧ ರೀತಿಯ ಕೀಟಗಳು ಮನುಷ್ಯನನ್ನು ಭೀಕರವಾಗಿ ತಿನ್ನುವುದನ್ನು ತೋರಿಸುವಂತೆ ಸಿನಿಮೀಯ ಮಾದರಿಯಲ್ಲಿ ಕೀಟಗಳು ಮತ್ತು ತಿಗಣೆಗಳು ಕೈದಿಯೊಬ್ಬನನ್ನ ಜೀವಂತವಾಗಿ ತಿಂದುಹಾಕಿರುವ ಭೀಭತ್ಸ ಘಟನೆ ನಡೆದಿದೆ. ಡೇಂಜರಸ್ ಫಾರೆಸ್ಟ್‌ನಂತಹ (Dangerous Forest) ನಂತಹಾ ಇಂಗ್ಲೀಷ್ ಸಿನಿಮಾ ಅಥವಾ ತಮಿಳಿನ ಅನ್ನಿಯನ್ ಮಾದರಿಯಲ್ಲಿ ಕ್ರಿಮಿಗಳು ಮಾನವ ಭಕ್ಷಣೆ ಮಾಡಿವೆ.

ಅಮೆರಿಕದ ಅಟ್ಲಾಂಟಾದ ಜೈಲಿನಲ್ಲಿದ್ದ (US Atlanta Jail) 35 ವರ್ಷದ ಕೈದಿಯೊಬ್ಬನನ್ನು ಕೀಟಗಳು ಮತ್ತು ತಿಗಣೆ ತಿಂದು ಹಾಕಿವೆ (Bugs killed man) ಎಂದು ಸಂತ್ರಸ್ತರ ಕುಟುಂಬದ ವಕೀಲರು ಆರೋಪಿಸಿದ್ದಾರೆ.

2022ರ ಜೂನ್ 12 ರಂದು ಲಾಶಾನ್ ಥಾಂಪ್ಸನ್ ಎಂಬ ವ್ಯಕ್ತಿಯನ್ನು ಅಮೆರಿಕಾದ ಅಟ್ಲಾಂಟಾದಲ್ಲಿ ಬಂಧಿಸಿ, ಫುಲ್ಟನ್ ಕೌಂಟಿ ಎಂಬ ಜೈಲಿಗೆ ಕರೆದೊಯ್ಯಲಾಗಿತ್ತು. ಆದರೆ ವಿಚಾರಣೆಯ ನಂತರ ಆತನನ್ನ ಮಾನಸಿಕ ಅಸ್ವಸ್ಥ ಎಂದು ಪರಿಗಣಿಸಿ ವಿಶೇಷ ಮನೋವೈದ್ಯಕೀಯ ವಿಭಾಗದಲ್ಲಿರಿಸಲಾಗಿತ್ತು. ಈ ನಡುವೆ ಪೊಲೀಸರು ತನಿಖೆ ಪ್ರಕ್ರಿಯೆ ಆರಂಭಿಸಿದ್ದರು. 3 ತಿಂಗಳ ನಂತರ ಆತ ಕೊಠಡಿಯಲ್ಲೇ ಮೃತಪಟ್ಟಿರುವುದು ಕಂಡುಬಂದಿದೆ.

ಈ ಕುರಿತು ಸಂತ್ರಸ್ತ ಕುಟುಂಬ ಪರ ವಕೀಲರು ಪ್ರತಿಕ್ರಿಯಿಸಿ, ಥಾಂಪ್ಸನ್ ಅವರನ್ನ ಕೊಳಕು ತುಂಬಿದ ಕೋಣೆಯಲ್ಲಿ ಇರಿಸಲಾಗಿತ್ತು. ಹಾಗಾಗಿ ತಾನು ಮಲಗುತ್ತಿದ್ದ ಹಾಸಿಗೆಯಲ್ಲಿ ಕೀಟಗಳು ಹೆಚ್ಚಾಗಿ, ಮೂರು ತಿಂಗಳ ನಂತರ ಕೀಟಗಳಿಂದ ಜೀವಂತವಾಗಿ ತಿನ್ನಲ್ಪಟ್ಟಿದ್ದಾರೆ. ಇದಕ್ಕೆ ಯಾರು ಹೊಣೆಗಾರರು ಎಂದು ಅವರು ಪ್ರಶ್ನಿಸಿದ್ದಾರೆ.

ಸ್ಥಳೀಯ ಮಾಧ್ಯಮಗಳು ವರದಿ ಮಾಡಿದ ಪ್ರಕಾರ, ಮೃತ ವ್ಯಕ್ತಿಯ ಕುಟುಂಬವು ಈಗ ಅವರ ಸಾವಿನ ಬಗ್ಗೆ ಕ್ರಿಮಿನಲ್ ತನಿಖೆಗೆ ಒತ್ತಾಯಿಸಿದ್ದು, ಜೈಲನ್ನು ಮುಚ್ಚಬೇಕು ಮತ್ತು ಅಲ್ಲಿನ ಕೈದಿಗಳನ್ನ ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿದೆ.

ಆದರೆ ಮರಣೋತ್ತರ ಪರೀಕ್ಷಾ ವರದಿ ಸಹ ಅವರ ದೇಹದಲ್ಲಿ ಗಾಯಗಳಿಲ್ಲ ಹಾಗೂ ರೋಗ ಲಕ್ಷಣಗಳೂ ಇರಲಿಲ್ಲ ಎಂಬುದನ್ನು ತಿಳಿಸಿದೆ. ಫುಲ್ಟನ್ ಕೌಂಟಿ ಜೈಲಿನ ಅನೈರ್ಮಲ್ಯ ಪರಿಸ್ಥಿತಿಯೇ ಥಾಂಪ್ಸನ್ ಸಾವಿಗೆ ಕಾರಣ. ಜೈಲಿನ ಕೊಠಡಿಗಳ ಶುಚಿತ್ವ ಗಮನಿಸಿದರೂ ಯಾರೊಬ್ಬರೂ ಖೈದಿಗೆ ಸಹಾಯ ಮಾಡಿಲ್ಲ. ಜೈಲಿನೊಳಗೆ ತೆಗೆದ ಚಿತ್ರಗಳನ್ನು ನೋಡಿದ್ರೆ ಎಷ್ಟು ಕೊಳಕು ತುಂಬಿಕೊಂಡಿತ್ತು ಅನ್ನೋದು ಅರ್ಥವಾಗುತ್ತೆ ಎಂದು ಅವರು ಅಸಮಾಧಾನ ಹೊರಹಾಕಿದ್ದಾರೆ.

ಈ ಬಗ್ಗೆ ಉನ್ನತ ಮೂಲದ ಅಧಿಕಾರಿಗಳು ಪೂರ್ಣ ಸಂಬಂಧಪಟ್ಟ ಅಧಿಕಾರಿಗಳಿಗೆ ತನಿಖೆ ನಡೆಸುವಂತೆ ಸೂಚನೆ ನೀಡಿದ್ದಾರೆ. ಅಲ್ಲದೇ ಎಲ್ಲಾ ಕೈದಿಗಳಿಗೂ ಹಾಸಿಗೆ ಹಾಗೂ ಇತರ ಮೂಲ ಸೌಕರ್ಯಗಳನ್ನು ಕಲ್ಪಿಸುವಂತೆ ಸೂಚನೆ ನೀಡಿದ್ದು, ಅದಕ್ಕಾಗಿ 5 ಲಕ್ಷ ಡಾಲರ್ (ಸುಮಾರು 4 ಕೋಟಿ ರೂ) ಗಳನ್ನ ಮಂಜೂರು ಮಾಡಲಾಗಿದೆ. ಜೊತೆಗೆ ಜೈಲಿನಲ್ಲಿರುವ ಕೈದಿಗಳಿಗೆ ಸೂಕ್ತ ಭದ್ರತೆ ಒದಗಿಸುವಂತೆ ಆದೇಶಿಸಿದೆ.

ಇದನ್ನೂ ಓದಿ: Woman married Bhaiya: ಭಯ್ಯಾ ಭಯ್ಯಾ ಎನ್ನುತ್ತಲೇ ಆತನ ಮಗುವಿಗೆ ಜನ್ಮ ನೀಡಿದ ಮಹಿಳೆ! ವಿಡಿಯೋ ನೋಡಿ ಬೆರಗಾದ ಸೋಷಿಯಲ್ಸ್!