Home News CM Siddaramaiah : ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಪ್ರಕರಣ – ಹಿಂದೂ ಸಂಘಟನೆಗಳ...

CM Siddaramaiah : ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಪ್ರಕರಣ – ಹಿಂದೂ ಸಂಘಟನೆಗಳ ವಿರುದ್ಧ ಗುಡುಗಿದ ಸಿಎಂ ಸಿದ್ದರಾಮಯ್ಯ!! .

Hindu neighbor gifts plot of land

Hindu neighbour gifts land to Muslim journalist

C M Siddaramaiah : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ರಸ್ತೆಯಲ್ಲಿ ಮಲಗಿದ್ದಂತಹ ಮೂರು ಹಸುಗಳ ಕೆಚ್ಚಲುಗಳನ್ನು ಕಿಡಿಗೇಡಿಗಳು ಕೊಯ್ದಿರುವ ಹೀನ ಕೃತ್ಯ ಬೆಂಗಳೂರು ಜಿಲ್ಲೆಯ ಚಾಮರಾಜಪೇಟೆಯಲ್ಲಿ ನಡೆದಿದೆ. ಸದ್ಯಕ್ಕೆ ಚಾಮರಾಜಪೇಟೆಯ ಬಸವ ಆಸ್ಪತ್ರೆಯಲ್ಲಿ ಮೂರು ಹಸುಗಳಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಇದು ಹಿಂದೂ ನಾಯಕರನ್ನು ಕೆರಳಿಸಿದ್ದು, ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬೆನ್ನಲ್ಲೇ ಇದೀಗ ಹಸುಗಳ ಮೇಲೆ ನಡೆದ ವಿಕೃತ ಕೃತ್ಯದ ಬಗ್ಗೆ ಸಿಎಂ ಸಿದ್ದರಾಮಯ್ಯ(CM Siddaramiah) ಅವರು ಕೂಡ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು ‘ಚಾಮರಾಜಪೇಟೆಯಲ್ಲಿ ದನಗಳಿಗೆ ಹಿಂಸೆ ನೀಡಿರುವ ಘಟನೆ ಅತ್ಯಂತ ಅಮಾನವೀಯ. ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಶಿಕ್ಷೆಗೆ ಒಳಪಡಿಸಲಾಗುವುದು. ಈವರೆಗೆ ಕೃತ್ಯ ಎಸಗಿದವರ ಮಾಹಿತಿ ನಮಗೆ ಸಿಕ್ಕಿಲ್ಲ. ತಪ್ಪಿತಸ್ಥರನ್ನು ಪತ್ತೆ ಹಚ್ಚಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪೊಲೀಸ್ ಕಮೀಷನರ್‌ ಅವರಿಗೆ ಸೂಚಿಸಿದ್ದೇನೆ’ ಎಂದಿದ್ದಾರೆ.

ಅಲ್ಲದೆ ಕಾನೂನು ತನ್ನ ಕಾರ್ಯ ಮಾಡುತ್ತಿರುವ ಹೊರತಾಗಿಯೂ ಹಿಂದೂ ಸಂಘಟನೆಗಳ ಪ್ರತಿಭಟನೆ ಮಾಡುತ್ತಿರುವುದು ರಾಜಕೀಯ ಪ್ರೇರಿತವಾಗಿದೆ. ಹಿಂದೂ ಸಂಘಟನೆಗಳು ರಾಜಕೀಯವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಇದು ಸಲ್ಲದು ಎಂದು ಗುಡುಗಿದ್ದಾರೆ.