Dinesh Gundu Rao: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ರಾಜ್ಯದ ಎಲ್ಲಾ ಸರಕಾರಿ ಇಲಾಖೆಗಳ ನೌಕರರು, ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಆರೋಗ್ಯ ಭದ್ರತೆ, 5 ಲಕ್ಷ ರೂ. ವರೆಗೆ ನಗದು ರಹಿತ ಚಿಕಿತ್ಸಾ ಸೌಲಭ್ಯ ಕಲ್ಪಿಸುವ ನಿರ್ಣಯಕ್ಕೆ ಕ್ಯಾಬಿನೆಟ್ ಒಪ್ಪಿಗೆ ನೀಡಿರುವ ಕುರಿತು ತಿಳಿಸಿದ್ದಾರೆ.
Sponsoredಈ ಕುರಿತು ಎಕ್ಸ್ನಲ್ಲಿ ಅವರು ಬರೆದುಕೊಂಡಿದ್ದಾರೆ.
ಕರ್ನಾಟಕ ಕ್ಯಾಬಿನೆಟ್ ಐತಿಹಾಸಿಕ ನಿರ್ಣಯ. ದೇಶದ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ರಾಜ್ಯದ ಎಲ್ಲಾ ಸರ್ಕಾರೀ ಇಲಾಖೆಗಳ ನೌಕರರು, ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಆರೋಗ್ಯ ಭದ್ರತೆ. 5 ಲಕ್ಷ ರೂ.ಗಳವರೆಗೆ ನಗದು ರಹಿತ ಚಿಕಿತ್ಸಾ ಸೌಲಭ್ಯ.
ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ರಾಜ್ಯದ ಯಾವುದೇ ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಮತ್ತು ಗೌರವಧನದ ಆಧಾರದ ಮೇಲೆ ಕೆಲಸ ಮಾಡುವ 3 ಲಕ್ಷಕ್ಕೂ ಹೆಚ್ಚು ಸಿಬ್ಬಂದಿಗಳು ಮತ್ತು ಅವರ ಅವಲಂಬಿತರಿಗೆ 5 ಲಕ್ಷ ರೂ.ಗಳವರೆಗೆ ನಗದು ರಹಿತ ಚಿಕಿತ್ಸೆಯನ್ನು ಒದಗಿಸುವ ಸಲುವಾಗಿ “ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ- ಖಾಯಂ ಅಲ್ಲದ ಸಿಬ್ಬಂದಿಗಳಿಗೆ (KASS-NPE)” ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ.
ಈ ಯೋಜನೆಯು ESIC, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ (AB-ArK), ಯಶಸ್ವಿನಿ ಮುಂತಾದ ಯಾವುದೇ ಸರ್ಕಾರಿ ಪ್ರಾಯೋಜಿತ ಆರೋಗ್ಯ ವಿಮಾ ಯೋಜನೆಗಳಲ್ಲಿ ಒಳಗೊಳ್ಳದ ಸಿಬ್ಬಂದಿಗಳು ಹಾಗು ಅವರ ಅವಲಂಬಿತರನ್ನು ಒಳಗೊಳ್ಳಲಿದೆ. ಈ ಯೋಜನೆಗಾಗಿ ಪ್ರತಿ ತಿಂಗಳು ಸಿಬ್ಬಂದಿಗಳು 100 ರೂಪಾಯಿ ಭರಿಸಿದರೆ, ರಾಜ್ಯ ಸರ್ಕಾರವೂ ಸಹ 100 ರೂಪಾಯಿ ಭರಿಸಲಿದೆ. ರಾಜ್ಯ ಸರ್ಕಾರವು ಈ ಯೋಜನೆಗಾಗಿ 36 ಕೋಟಿ ವೆಚ್ಚ ಮಾಡಲಿದೆ.
ಯಾವುದೇ ಆರೋಗ್ಯ ಯೋಜನೆಗಳ ಲಾಭ ದೊರಕದ ಕೆಳ ಮಧ್ಯಮ ವರ್ಗಕ್ಕೆ ಆರೋಗ್ಯದ ಭದ್ರತೆ ನೀಡುವ ದೃಷ್ಟಿಯಿಂದ ಕಳೆದ ಬಜೆಟ್’ನಲ್ಲಿ ಘೋಷಿಸಿದಂತೆ ರಾಜ್ಯ ಸರ್ಕಾರವು ಈ ಯೋಜನೆಯನ್ನು ಜಾರಿಗೊಳಿಸುತ್ತಿದ್ದು ದೇಶದಲ್ಲೇ ಇದೊಂದು ಮಾದರಿ ಯೋಜನೆಯಾಗಲಿದೆ.
ಕರ್ನಾಟಕ ಕ್ಯಾಬಿನೆಟ್ ಐತಿಹಾಸಿಕ ನಿರ್ಣಯ. ದೇಶದ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ರಾಜ್ಯದ ಎಲ್ಲಾ ಸರ್ಕಾರೀ ಇಲಾಖೆಗಳ ನೌಕರರು, ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಆರೋಗ್ಯ ಭದ್ರತೆ. 5 ಲಕ್ಷ ರೂ.ಗಳವರೆಗೆ ನಗದು ರಹಿತ ಚಿಕಿತ್ಸಾ ಸೌಲಭ್ಯ.
ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ರಾಜ್ಯದ ಯಾವುದೇ ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ,…
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) June 19, 2025




