Home News Caste Survey : ಜಾತಿ ಸಮೀಕ್ಷೆಗಾಗಿ ಇನ್ನೂ ನಿಮ್ಮ ಮನೆಗೆ ಶಿಕ್ಷಕರು ಬಂದಿಲ್ವಾ? ತಕ್ಷಣ ಹೀಗೆ...

Caste Survey : ಜಾತಿ ಸಮೀಕ್ಷೆಗಾಗಿ ಇನ್ನೂ ನಿಮ್ಮ ಮನೆಗೆ ಶಿಕ್ಷಕರು ಬಂದಿಲ್ವಾ? ತಕ್ಷಣ ಹೀಗೆ ಮಾಡಿ

Hindu neighbor gifts plot of land

Hindu neighbour gifts land to Muslim journalist

Caste Survey : ರಾಜ್ಯದಲ್ಲಿ ರಾಜ್ಯ ಸರ್ಕಾರದ ವತಿಯಿಂದ ಜಾತಿ ಸಮೀಕ್ಷೆಯು ನಡೆಯುತ್ತಿದೆ. ಶಾಲಾ ಶಿಕ್ಷಕರನ್ನು ಬಳಸಿಕೊಂಡು ಈ ಸಮೀಕ್ಷೆ ನಡೆದಿದ್ದು, ಇದೀಗ ಮತ್ತೆ ಸಮೀಕ್ಷೆಯ ಅವಧಿ ಕೂಡ ವಿಸ್ತರಣೆಯಾಗಿದೆ. ಇದರ ನಡುವೆ ಕೆಲವು ಮನೆಗಳಿಗೆ ಇನ್ನೂ ಕೂಡ ಯಾವ ಶಿಕ್ಷಕರು ಸಮೀಕ್ಷೆಗಾಗಿ ಬಂದಿಲ್ಲ ಎಂಬ ಆರೋಪಗಳು ಕೇಳಿ ಬಂದಿವೆ. ಒಂದು ವೇಳೆ ನಿಮ್ಮ ಮನೆಗೆ ಇನ್ನು ಕೂಡ ಜಾತಿ ಸಮೀಕ್ಷೆ ಗಾಗಿ ಶಿಕ್ಷಕರು ಯಾರು ಬಂದಿಲ್ಲ ಎಂದಾದರೆ ತಕ್ಷಣ ಈ ರೀತಿ ಮಾಡಿ.

ಹೌದು, ಈಗಾಗಲೇ ಗುರುತಿಸಲಾಗಿರುವ ಎಲ್ಲಾ ಮನೆಗಳಿಗೆ ಗಣತಿದಾರರು ಭೇಟಿ ನೀಡಿ, ಗಣತಿ ಕಾರ್ಯ ನಡೆಸುತ್ತಿದ್ದಾರೆ. ಆದರೆ ಕೆಲವೊಮ್ಮೆ ಅಕಸ್ಮಾತಾಗಿ ಕೆಲವು ಮನೆಗಳು ಕಣಚಿದಾರರ ಕಣ್ಣಿಗೆ ಬೀಳದೆ ತಪ್ಪಿ ಹೋಗಿರುವುದುಂಟು. ಹೀಗಾಗಿ ಸಾರ್ವಜನಿಕರು ಕೂಡ ಸ್ವಯಂ ಆಗಿ ತಮ್ಮ ಮನೆಯ ಗಣತಿ ಮಾಡಿಕೊಳ್ಳಲು ಅನುಕೂಲವಾಗುವಂತೆ ಸೌಲಭ್ಯವನ್ನು ಸಿದ್ಧಪಡಿಸಲಾಗಿದೆ.

ಸಾರ್ವಜನಿಕರು https://kscbcselfdeclaration.karnataka.gov.in/ ನಲ್ಲಿ ಸ್ವಯಂ ಮಾಹಿತಿಯನ್ನು ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ಲಿಂಕ್ ಅನ್ನು ಕ್ಲಿಕ್ ಮಾಡಿದಾಗ ತೆರೆದುಕೊಳ್ಳುವ ಪುಟದಲ್ಲಿ ʼನಾಗರಿಕʼ ಎಂಬುದನ್ನು ಆಯ್ಕೆ ಮಾಡಿದ್ದಲ್ಲಿ ಲಾಗಿನ್ನಲ್ಲಿ ಮುಂದುವರೆಯಲು ಕೋರಲಾಗುತ್ತದೆ. ನಂತರದಲ್ಲಿ ತಮ್ಮ ಮೊಬೈಲ್ ಸಂಖ್ಯೆಯನ್ನು ನೀಡಿದ್ದಲ್ಲಿ, ಒಟಿಪಿ ಬರಲಿದ್ದು, ಅದನ್ನು ದಾಖಲು ಮಾಡಬೇಕಾಗುತ್ತದೆ.

ನಂತರ ತೆರೆಯುವ ಪುಟದಲ್ಲಿ ತಮ್ಮ ಸಮೀಕ್ಷೆಯ ಸ್ಥಿತಿಗತಿ ಕುರಿತಂತೆ ನಿಮ್ಮ ಸಮೀಕ್ಷೆ ಪೂರ್ಣಗೊಂಡಿದೆ ಅಥವಾ ಬಾಕಿ ಎಂದು ಕಾಣಬಹುದಾಗಿದ್ದು, ಇದುವರೆಗೆ ಸಮೀಕ್ಷೆ ನಡೆಯದೇ ಬಾಕಿ ಇದ್ದಲ್ಲಿ, ಇನ್ನೂ ಯಾವುದೇ ಕುಟುಂಬ ಸದಸ್ಯರನ್ನು ಸೇರಿಸಿಲ್ಲ ಫಾರ್ಮ್ ಭರ್ತಿ ಮಾಡಲು ಆರಂಭಿಸಿ ಎಂಬ ಸಂದೇಶ ಕಾಣಲಿದ್ದು, ಹೊಸ ಸಮೀಕ್ಷೆ ಆರಂಭಿಸಿ ಎಂಬುದನ್ನು ಕ್ಲಿಕ್ ಮಾಡಬೇಕಾಗುತ್ತದೆ.

ಇದನ್ನೂ ಓದಿ;Mangalore: ಜನತಾ ಡಿಲಕ್ಸ್‌ ಪತ್ತುಮುಡಿ ಸೌದ ಹೋಟೆಲ್‌ ಮಾಲಕ ಉದ್ಯಮಿ ಪತ್ತುಮುಡಿ ಸೂರ್ಯನಾರಾಯಣ ರಾವ್‌ ನಿಧನ

ನಂತರದ ಪುಟದಲ್ಲಿ ಈಗಾಗಲೇ ತಮ್ಮ ಮನೆಗೆ ಅಂಟಿಸಲಾಗಿರುವ ಸ್ಟಿಕ್ಕರ್ನಲ್ಲಿರುವ UHID ಸಂಖ್ಯೆಯನ್ನು ದಾಖಲಿಸಿ ಸ್ಕ್ರೀನ್ನಲ್ಲಿ ಕೋರುವ ಮಾಹಿತಿಗಳನ್ನು ದಾಖಲು ಮಾಡಬೇಕಾಗುತ್ತದೆ.ಸದರಿ ಸಮೀಕ್ಷೆಗೆ ದಾಖಲೆಗಳ ಮಾಹಿತಿ ನೀಡುವ ಅವಶ್ಯಕತೆ ಇರುವುದರಿಂದ ತಮ್ಮ ಕುಟುಂಬದ ಸದಸ್ಯರ ರೇಷನ್ ಕಾರ್ಡ್,ಆಧಾರ್ ಕಾರ್ಡ್ ಮತದಾರರ ಗುರುತಿನ ಚೀಟಿ, ವಿಕಲಚೇತನರಾಗಿದ್ದರೆ UID Card ಅಥವಾ ಅಂಗವಿಕಲ ಪ್ರಮಾಣ ಪತ್ರದ ದಾಖಲೆಗಳನ್ನು ತೆಗೆದಿರಿಸಿಕೊಂಡು ಸುಲಭವಾಗಿ ಈ ಸಮೀಕ್ಷೆ ಕಾರ್ಯದಲ್ಲಿ ತಾವೇ ಸ್ವಯಂ ಆಗಿ ಭಾಗವಹಿಸಬಹುದಾಗಿದ್ದು, ಸಮೀಕ್ಷೆ ಯಶಸ್ವಿಯಾದ ನಂತರ ಈ ಬಗ್ಗೆ ಮೊಬೈಲ್ಗೆ ಸಂದೇಶ ಬರಲಿದೆ.