ಭಾನುವಾರ, 25 ಅಕ್ಟೋಬರ್ 2026
Trending

ಐವನ್ ಡಿಸೋಜಾಗೆ ಸಚಿವ ಸ್ಥಾನ ನೀಡಿ – ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ

ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ನೂತನ ಕೆಪಿಸಿಸಿ ಅಧ್ಯಕ್ಷರಾದ ಬಿ ಕೆ ಹರಿಪ್ರಸಾದ್ ಅವರಿಗೆ ಮಂಗಳೂರಿನಲ್ಲಿ ಮಂಗಳೂರಿನ ಕಥೊಲಿಕ್ ಸಭಾ ಹಾಗೂ ಉಡುಪಿ ಪ್ರದೇಶ ವತಿಯಿಂದ ಮನವಿ ನೀಡಲಾಯಿತು

Sponsored

ಕರಾವಳಿಯಲ್ಲಿ ಕ್ರೈಸ್ತ ಸಮುದಾಯವನ್ನು ಪ್ರತಿನಿಧಿಸುತ್ತಿರುವ ಐವನ್ ಡಿಸೋಜಾ ಅವರು ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿ, ಪರಿಷತ್ ಮುಖ್ಯ ಸಚೇತಕಾರಾಗಿ ಕ್ರೈಸ್ತ ಅಭಿವೃದ್ದಿ ನಿಗಮದಲ್ಲಿ ವಿವಿಧ ರೀತಿಯ ಜವಾಬ್ದಾರಿಯನ್ನು ವಹಿಸಿಕೊಂಡಿರುತ್ತಾರೆ. ಸಮುದಾಯಕ್ಕೆ ಪ್ರತಿ ಬಾರಿ ಉನ್ನತ ಸ್ಥಾನಗಳನ್ನು ನೀಡುವಾಗ ಅವಕಾಶ ವಂಚಿರಾಗುತ್ತಿದ್ದು ಈ ಬಾರಿ ಡಿ ಕೆ ಶಿವಕುಮಾರ್ ಅವರು ಎಲ್ಲಾ ಸಮುದಾಯಗಳನ್ನು ಸಮಾನವಾಗಿ ಅವಕಾಶ ನೀಡುವ ಕೆಲಸವನ್ನು ಮಾಡಬೇಕು. ಈ ಮೂಲಕ ಐವನ್ ಡಿಸೋಜಾ ಅವರಿಗೆ ಸಚಿವ ಸ್ಥಾನವನ್ನು ಅಥವಾ ವಿಧಾನಪರಿಷತ್ ಸಭಾಪತಿಯಾಗಿ ನೇಮಕ ಮಾಡಬೇಕು. ಅವರಿಗೆ ಸಚಿವ ಸ್ಥಾನವನ್ನು ನೀಡಿದ್ದಲ್ಲಿ ಮುಂದಿನ ದಿನಗಳಲ್ಲಿ ಪಕ್ಷದ ಏಳಿಗೆಗೆ ಮತ್ತಷ್ಟು ಸಹಕಾರಿಯಾಗಲಿದೆ. ಈ ನಿಟ್ಟಿನಲ್ಲಿ ಪಕ್ಷದ ಅಧ್ಯಕ್ಷರಾಗಿ ಕ್ರೈಸ್ತ ಸಮುದಾಯಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡುವಂತೆ ಮನವಿ ಮಾಡಲಾಗಿದೆ.

ನಿಯೋಗದಲ್ಲಿ ಕಥೊಲಿಕ್ ಸಭಾ ಮಂಗಳೂರು ಪ್ರದೇಶ ಅಧ್ಯಕ್ಷರಾದ ಸಂತೋಶ್ ಡಿಸೋಜಾ, ಉಪಾಧ್ಯಕ್ಷರಾದ ಸ್ಟೀವನ್ ರೊಡ್ರಿಗಸ್, ಮಾಜಿ ಅಧ್ಯಕ್ಷರಾದ ಸ್ಟ್ಯಾನಿ ಲೋಬೊ ಉಡುಪಿ ಪ್ರದೇಶ ಅಧ್ಯಕ್ಷ ಮೆಲ್ವಿನ್ ಆರಾನ್ಹ ಶಿರ್ವ, ಮಾಜಿ ಅಧ್ಯಕ್ಷರಾದ ವಾಲ್ಟರ್ ಸಿರಿಲ್ ಪಿಂಟೊ, ವಲೇರಿಯನ್ ಫೆರ್ನಾಂಡಿಸ್ ಹಾಗೂ ಇತರರು ಉಪಸ್ಥಿತರಿದ್ದರು.