Home News Sanjana Galrani: ಸಂಜನಾ ಗಲ್ರಾನಿ ಕೇಸ್‌ ಕುರಿತು ಸುಪ್ರೀಂ ಮೊರೆ ಹೋಗಲು ಸಿಸಿಬಿ ಸಜ್ಜು

Sanjana Galrani: ಸಂಜನಾ ಗಲ್ರಾನಿ ಕೇಸ್‌ ಕುರಿತು ಸುಪ್ರೀಂ ಮೊರೆ ಹೋಗಲು ಸಿಸಿಬಿ ಸಜ್ಜು

Hindu neighbor gifts plot of land

Hindu neighbour gifts land to Muslim journalist

Sanjana Galrani: ಡ್ರಗ್ಸ್‌ ಕೇಸ್‌ ವಿಷಯದಲ್ಲಿ ನಟಿ ಸಂಜನಾ ಗಲ್ರಾನಿ ಅವರು ಅರೆಸ್ಟ್‌ ಆಗಿದ್ದಾಗ ಈ ವಿಷಯ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿತ್ತು. ಅನಂತರ ಈ ಕೇಸ್‌ ಹೈಕೋರ್ಟ್‌ನಲ್ಲಿ ವಜಾಗೊಂಡಿತ್ತು. ಇದನ್ನು ಪ್ರಶ್ನೆ ಮಾಡಿ ಅಂದರೆ ಹೈಕೋರ್ಟ್‌ ಆದೇಶವನ್ನು ಪ್ರಶ್ನೆ ಮಾಡಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಸಿಸಿಬಿ ಪೊಲೀಸರು ಸಿದ್ಧತೆ ಮಾಡಿದ್ದಾರೆ ಎಂದು ವರದಿಯಾಗಿದೆ.

ಡ್ರಗ್ಸ್‌ ಕೇಸ್‌ನಲ್ಲಿ ಅರೆಸ್ಟ್‌ ಆಗಿದ್ದ ಸಂಜನಾ ಅವರು ಜಾಮೀನಿನ ಮೇಲೆ ಹೊರಗೆ ಬಂದಿದ್ದು, ಹೈಕೋರ್ಟ್‌ನಲ್ಲಿ ಪ್ರಕರಣ ವಜಾಗೊಂಡಿತ್ತು. ಇದೀಗ ಸಂಜನಾ ಗಲ್ರಾನಿ ವಿರುದ್ಧ ಮೇಲ್ಮನವಿ ಸಲ್ಲಿಕೆ ಮಾಡಲು ತಯಾರಿ ನಡೆದಿದೆ. ಸಂಜನಾಗೆ ಮತ್ತೆ ಸಂಕಷ್ಟ ಎದುರಾಗಲಿದೆಯೇ? ಇದಕ್ಕೆ ಸಂಜನಾ ಅವರು ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎನ್ನುವುದು ಕಾದು ನೋಡಬೇಕಿದೆ.

ಈಗಾಗಲೇ ಸರ್ಕಾರದ ಮಟ್ಟದಲ್ಲಿ ಸಭೆ ನಡೆಸಿ ಅರ್ಜಿ ತಯಾರಿ ಮಾಡಲಾಗಿದೆ. ಪ್ರಾಸಿಕ್ಯೂಷನ್ ಅನುಮತಿ ಬರುತ್ತಾ ಇದ್ದಂತೆ ಅರ್ಜಿ ಸಲ್ಲಿಕೆ ಆಗಲಿದೆ’ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ ಹೇಳಿಕೆ ನೀಡಿದ್ದಾರೆ.