ಬೆಳ್ತಂಗಡಿ, ಜೂ. ೨೭: ರಾಜ್ಯ ಒಕ್ಕಲಿಗರ ಸಂಘ, ಬೆಂಗಳೂರು, ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘ ಮಂಗಳೂರು, ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ಹಾಗೂ ವಾಣಿ ಶಿಕ್ಷಣ ಸಂಸ್ಥೆಗಳು, ಹಳೆಕೋಟೆ ಇವರ ಸಂಯುಕ್ತ ಆಶ್ರಯದಲ್ಲಿ ನಾಡಪ್ರಭು ಕೆಂಪೇಗೌಡರ ೫೧೭ನೇ ಜನ್ಮದಿನಾಚರಣೆಯನ್ನು ಶನಿವಾರ ವಾಣಿ ಶಿಕ್ಷಣ ಸಂಸ್ಥೆಯ ಸಭಾಭವನದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.
Sponsoredಜಿಲ್ಲಾ ಮಾತೃ ಸಂಘದ ಪ್ರಧಾನ ಕಾರ್ಯದರ್ಶಿ ದಿನೇಶ್ ಮಡಪ್ಪಾಡಿ ಕೆಂಪೇಗೌಡರ ಹಾಗೂ ಕಾರ್ಯಕ್ರಮದ ಕುರಿತು ಪ್ರಸ್ತಾವಿಕ ಮಾತುಗಳನ್ನು ಆಡಿದರು.
ಕಾರ್ಯಕ್ರಮವನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ಹರೀಶ್ ಇಂಜಾಡಿ ಉದ್ಘಾಟಿಸಿ ಮಾತನಾಡಿ, ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ದೂರದೃಷ್ಟಿ, ಆಡಳಿತ ವೈಖರಿ ಹಾಗೂ ಸಮಾಜಮುಖಿ ಚಿಂತನೆಗಳು ಇಂದಿನ ಪೀಳಿಗೆಗೆ ದಾರಿದೀಪವಾಗಿದ್ದು, ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘ ಮಂಗಳೂರು ಅಧ್ಯಕ್ಷ ಲೋಕಯ್ಯ ಗೌಡ ಕೆ. ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದ ಆರಂಭದಲ್ಲಿ ನಾಡಪ್ರಭು ಕೆಂಪೇಗೌಡ ಹಾಗೂ ಕೆದಂಬಾಡಿ ರಾಮಯ್ಯ ಗೌಡ ಅವರ ಭಾವಚಿತ್ರಗಳಿಗೆ ಅತಿಥಿಗಳು ಪುಷ್ಪಾರ್ಚನೆ ಸಲ್ಲಿಸಿದರು. ಸರಕಾರಿ ಪದವಿ ಪೂರ್ವ ಕಾಲೇಜು, ನಡದ ಉಪನ್ಯಾಸಕ ಮೋಹನ ಗೌಡ ಅವರು ನಾಡಪ್ರಭು ಕೆಂಪೇಗೌಡರ ಜೀವನ, ಸಾಧನೆ, ಆಡಳಿತ ವೈಖರಿ ಹಾಗೂ ಸಮಾಜಮುಖಿ ಚಿಂತನೆಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಇದೇ ಸಂದರ್ಭದಲ್ಲಿ ಶಿಕ್ಷಣ, ಸಹಕಾರಿ, ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಸಲ್ಲಿಸಿದ ಅನನ್ಯ ಸೇವೆಯನ್ನು ಪರಿಗಣಿಸಿ ವಾಣಿ ವಿದ್ಯಾಸಂಸ್ಥೆಯ ಗೌರವಾಧ್ಯಕ್ಷ ಹಾಗೂ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ಗೌರವಾಧ್ಯಕ್ಷ ಹೆಚ್. ಪದ್ಮ ಗೌಡ ಅವರಿಗೆ ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘದ ವತಿಯಿಂದ “ಕೆಂಪೇಗೌಡ ಪ್ರಶಸ್ತಿ” ಪ್ರದಾನ ಮಾಡಿ ಸನ್ಮಾನಿಸಲಾಯಿತು.
ಮುಖ್ಯ ಅತಿಥಿಯಾಗಿ ಕಿರಣ್ ಚಂದ್ರ ಪುಷ್ಪಗಿರಿ ಭಾಗವಹಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ವಾಣಿ ವಿದ್ಯಾಸಂಸ್ಥೆಯಲ್ಲಿ ನಾಡಪ್ರಭು ಕೆಂಪೇಗೌಡರ ಕುರಿತು ಏರ್ಪಡಿಸಿದ್ದ ಭಾಷಣ ಸ್ಪರ್ಧೆಯಲ್ಲಿ ವಿಜೇತರಾಗಿದ್ದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಪ್ರೌಢಶಾಲಾ ವಿಭಾಗದಲ್ಲಿ ಸೃಷ್ಟಿ ಪ್ರಥಮ, ನಿಶಾ ಮತ್ತು ಬಿಂದುಶ್ರೀ ದ್ವಿತೀಯ, ಮಾನ್ವಿ ತೃತೀಯ ಸ್ಥಾನ ಪಡೆದರೆ, ಪಿಯು ವಿಭಾಗದಲ್ಲಿ ಅಮೋಘ ಪ್ರಥಮ, ಕೀರ್ತನ ಹಾಗೂ ಜೋವಿಟ ದ್ವಿತೀಯ ಮತ್ತು ಶರಣ್ಯ ತೃತೀಯ ಸ್ಥಾನ ಪಡೆದರು.
ಈ ಸಂದರ್ಭದಲ್ಲಿ ಜಿಲ್ಲಾ ಮಾತೃ ಸಂಘದ ಕಾರ್ಯದರ್ಶಿ ರಾಮಣ್ಣ ಗೌಡ , ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘದ ಉಪಾಧ್ಯಕ್ಷ ಲಿಂಗಪ್ಪ ಗೌಡ, ಜನಾರ್ಧನ ಗೌಡ, ಸುಳ್ಯ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಪಿ.ಎಸ್. ಗಂಗಾಧರ್, ಜಿಲ್ಲಾ ಮಾತೃ ಸಂಘದ ಪ್ರಧಾನ ಕಾರ್ಯದರ್ಶಿ ದಿನೇಶ್ ಗೌಡ ಮಡಪ್ಪಾಡಿ, ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ಕಾರ್ಯದರ್ಶಿ ಗಣೇಶ್ ಗೌಡ, ವಾಣಿ ವಿದ್ಯಾಸಂಸ್ಥೆಯ ಪ್ರಾಂಶುಪಾಲ ವಿಷ್ಣು ಪ್ರಕಾಶ್, ಮುಖ್ಯಗುರುಗಳಾದ ಲಕ್ಷ್ಮೀನಾರಾಯಣ ಕೆ. ಹಾಗೂ ಸುಹಾಸಿನಿ, ಯುವ ವೇದಿಕೆಯ ಅಧ್ಯಕ್ಷ ಚಂದ್ರಕಾಂತ್ ನಿಡ್ಡಾಜೆ, ರಾಮಣ್ಣ ಗೌಡ, ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಉಪಾಧ್ಯಕ್ಷ ನಾರಾಯಣ ಗೌಡ ದೇವಸ್ಯ, ಡಿ.ಎಂ. ಗೌಡ, ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆ.ಎಂ., ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಗೌಡ ಸವನಾಲು, ಧರಣಪ್ಪ ಗೌಡ ಬಾನಡ್ಕ, ವಾಣಿ ವಿದ್ಯಾಸಂಸ್ಥೆಯ ಆಡಳಿತ ಅಧಿಕಾರಿ ಪ್ರಸಾದ್, ನಿವೃತ್ತ ಪ್ರಾಂಶುಪಾಲ ಯದುಪತಿ ಗೌಡ, ನಿರ್ದೇಶಕರಾದ ವಿಜಯ ಗೌಡ, ಉಷಾ ದೇವಿ, ಭವಾನಿ ಗೌಡ, ದಿನೇಶ್ ಕೊಯ್ಯೂರು, ಮಾಧವ ಗೌಡ, ಬಾಲಕೃಷ್ಣ ಬಿರ್ಮೋಟ್ಟು, ತಾಲೂಕು ಗೌಡ ಸಂಘದ ಮಾಜಿ ನಿರ್ದೇಶಕ ವಿಜಯ್ ಕುಮಾರ್ ಕೊಯ್ಯೂರು, ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕ ಸುರೇಶ್ ಕೌಡಂಗೆ, ಗೋಪಾಲ ಕೃಷ್ಣ ಗುಲ್ಲೋಡಿ, ಯುವ ವೇದಿಕೆಯ ಉಪಾಧ್ಯಕ್ಷ ನಿತಿನ್ ಕಲ್ಮಂಜ, ಸಂಘಟನಾ ಕಾರ್ಯದರ್ಶಿ ಪ್ರದೀಪ್ ನಾಗಾಜೆ,ಉದ್ಯಮಿ ಗಣೇಶ್ ಗೌಡ ಕಲಾಯಿ,ಮಹಿಳಾ ವೇದಿಕೆಯ ಸದಸ್ಯರು, ಜಿಲ್ಲಾ ಮಾತೃ ಸಂಘದ ಸದಸ್ಯರು, ವಿವಿಧ ಗ್ರಾಮ ಸಮಿತಿಗಳ ಅಧ್ಯಕ್ಷರು ಹಾಗೂ ಸದಸ್ಯರು, ಸಮಾಜದ ಗಣ್ಯರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ವಾಣಿ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆ.ಎಂ. ಅತಿಥಿಗಳನ್ನು ಸ್ವಾಗತಿಸಿದರು. ಬೆಳಿಯಪ್ಪ ಕೆ. ಹಾಗೂ ವಿಜೇತ ಕಾರ್ಯಕ್ರಮ ನಿರೂಪಿಸಿದರು. ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಕಾರ್ಯದರ್ಶಿ ಗಣೇಶ್ ಗೌಡ ಧನ್ಯವಾದ ಸಲ್ಲಿಸಿದರು.




