ಭಾನುವಾರ, 25 ಅಕ್ಟೋಬರ್ 2026

ಇಂದು ಮಧ್ಯಾಹ್ನ 3 ಗಂಟೆಗೆ ಕೇಂದ್ರ ಸರ್ಕಾರ, CJP ಪಾರ್ಟಿ ಹೈ ವೋಲ್ಟೇಜ್ ಸಭೆ

CJP ನೇತೃತ್ವದ ಪ್ರತಿಭಟನೆಗೆ ಪರಿಹಾರ ಕಂಡುಹಿಡಿಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮತ್ತು ಕಾಕ್ರೋಚ್ ಜನತಾ ಪಾರ್ಟಿ ನಡುವೆ ಇಂದು (ಶನಿವಾರ) 3ನೇ ಸುತ್ತಿನ ಮಾತುಕತೆ ನಡೆಯಲಿದೆ. ಇದರ ಬೆನ್ನಲ್ಲೇ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುತ್ತಾರೆಯೇ ಎಂಬ ಗುಮಾನಿ ದಟ್ಟವಾಗಿದೆ.

Sponsored

ಇಂದು ಮಧ್ಯಾಹ್ನ 3 ಗಂಟೆ ವೇಳೆಗೆ ಸಭೆ ನಡೆಯಲಿದೆ. ಹಲವು ದಿನಗಳ ಚರ್ಚೆ ಮತ್ತು ಸಂಧಾನದ ಬಳಿಕ ಈ ಸಭೆ ನಿರ್ಣಾಯಕ ಹಂತ ತಲುಪಿದ್ದು, ಕೇಂದ್ರ ಸರ್ಕಾರದ ಮುಂದಿನ ನಿಲುವಿನ ಮೇಲೆ ಎಲ್ಲರ ಗಮನ ನೆಟ್ಟಿದೆ. 

Marriage AdMarriage AdSponsored

ಅಂದಹಾಗೆ ಶುಕ್ರವಾರದ ಸಭೆಯಲ್ಲಿ ಕೇಂದ್ರ ಸರ್ಕಾರ ತನ್ನ ನಿಲುವಿನಲ್ಲಿ ಕೆಲಮಟ್ಟಿಗೆ ಸಡಿಲಿಕೆ ತೋರಿದ್ದು, ಸಿಜೆಪಿ ಮುಂದಿಟ್ಟಿದ್ದ ಮೂರು ಪ್ರಮುಖ ಬೇಡಿಕೆಗಳಲ್ಲಿ 2 ಬೇಡಿಕೆಗಳನ್ನು ಒಪ್ಪಿಕೊಂಡಿದೆ.

* ಜುಲೈ 20ರಂದು ನಡೆದ ‘ಚಲೋ ಸಂಸತ್’ ಶಾಂತಿಯುತ ಪ್ರತಿಭಟನೆಯಲ್ಲಿ ಭಾಗವಹಿಸಿದ್ದವರ ವಿರುದ್ಧ ಯಾವುದೇ ಎಫ್‌ಐಆರ್ ದಾಖಲಿಸಬಾರದು. ಜೊತೆಗೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ 1 ಕೋಟಿ ರೂ. ಪರಿಹಾರ ನೀಡಲು ಒಪ್ಪಿಕೊಂಡಿದೆ.

* ಇದಲ್ಲದೆ, ಸಚಿವರ ನಿವಾಸದ ಬದಲು ಕಾನ್ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ಮಾತುಕತೆ ನಡೆಸುವ ಸಿಜೆಪಿ ಬೇಡಿಕೆಯನ್ನು ಸಹ ಸರ್ಕಾರ ಅಂಗೀಕರಿಸಿದೆ.

 3ನೇ ಬೇಡಿಕೆ ಎಂದರೆ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡುವುದು. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೇಡಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಶನಿವಾರ ಮಧ್ಯಾಹ್ನದೊಳಗೆ ತನ್ನ ನಿರ್ಧಾರ ತಿಳಿಸುವುದಾಗಿ ಹೇಳಿದೆ ಎಂದು ತಿಳಿಸಿದ್ದಾರೆ. ಹೀಗಾಗಿ ಇಂದು ಮಧ್ಯಾಹ್ನ ನಡೆಯುವ ಸಭೆಯ ಬಳಿಕ ಕೇಂದ್ರ ಸರ್ಕಾರ ಯಾವ ನಿರ್ಧಾರ ಕೈಗೊಳ್ಳಲಿದೆ? ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುತ್ತಾರೆಯೇ? ಎಂಬ ಕುತೂಹಲ ಮೂಡಿದೆ.