Home News Chandrashekar Siddhi: ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ್ ಸಿದ್ದಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ !!

Chandrashekar Siddhi: ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ್ ಸಿದ್ದಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ !!

Hindu neighbor gifts plot of land

Hindu neighbour gifts land to Muslim journalist

Chandrashekar Siddhi: ಕಾಮಿಡಿ ಕಿಲಾಡಿಗಳು ಖ್ಯಾತಿಯ ಕಲಾವಿದ ಚಂದ್ರಶೇಖರ್ ಸಿದ್ದಿ ಖಿನ್ನತೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹೌದು, ಜೀ ಕನ್ನಡದ ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ಧಿ ಯಲ್ಲಾಪುರದ ಕಟ್ಟಿಗೆ ಗ್ರಾಮದ ಸಮೀಪದ ಅರಣ್ಯದಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಅವರು ಮಾನಸಿಕ ಒತ್ತಡದಿಂದ ಬಳಲುತ್ತಿದ್ದರು ಎನ್ನಲಾಗಿದೆ. ನಿನ್ನೆ ಮಗನಿಗೆ ನಾನಿನ್ನು ಬರುವುದಿಲ್ಲ ಮಗನೇ ಎಂದು ಹೇಳಿದವನು ಕಾಡಿನಲ್ಲಿ ಸಾವಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ವಜ್ರಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚಿಮನಳ್ಳಿಯ ಸಿದ್ದಿ ಜನಾಂಗದ ಯುವಕ, ಈ ಹಿಂದೆ ಝೀ ಕನ್ನಡದ ಕಾಮಡಿ ಕಿಲಾಡಿಗಳು ಎಂಬ ರಿಯಾಲಿಟಿ ಶೋ ಮೂಲಕ ರಾಜ್ಯಕ್ಕೆ ಪರಿಚಯವಾಗಿದ್ದರು. ನಿನಾಸಂನಲ್ಲಿ ನಾಟಕ ತರಬೇತಿ ಪಡೆದಿದ್ದ ಈತ ಉತ್ತಮ ಯೋಗಪಟು ಕೂಡ. ಅವರು ಕೆಲ ಧಾರಾವಾಹಿಗಳಲ್ಲಿ ಅಭಿನಯಿಸಿದ್ದಾರೆ. ಆದರೆ, ಹಾಸ್ಯತ್ಮಕ ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಂಡು ಜನಮನ ಗೆದ್ದರೂ, ಅವರು ಜೀವನದಲ್ಲಿ ಆರ್ಥಿಕವಾಗಿ ಸ್ಥಿರತೆ ಕಂಡಿರಲಿಲ್ಲ.

ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಆಪ್ತರು ಚಂದ್ರಶೇಖರ್ ಸಿದ್ಧಿ ಅಗಲಿಕೆಗೆ ಕಂಬನಿ ಮಿಡಿಯುತ್ತಿದ್ದಾರೆ.