Home News BJP: ಸರ್ಕಾರಕ್ಕೆ ವಂಚನೆ: ಬಿಜೆಪಿ ನಾಯಕಿಗೆ 1 ವರ್ಷ ಜೈಲು, 5 ಸಾವಿರ ರೂ. ದಂಡ

BJP: ಸರ್ಕಾರಕ್ಕೆ ವಂಚನೆ: ಬಿಜೆಪಿ ನಾಯಕಿಗೆ 1 ವರ್ಷ ಜೈಲು, 5 ಸಾವಿರ ರೂ. ದಂಡ

Hindu neighbor gifts plot of land

Hindu neighbour gifts land to Muslim journalist

BJP: ಸರ್ಕಾರಕ್ಕೆ ವಂಚನೆ ಮಾಡಿ, ಭ್ರಷ್ಟಾಚಾರದ ಪ್ರಕರಣದಲ್ಲಿ ಶಿರಸಿ (Sirsi) ಗ್ರಾಮೀಣ ಬಿಜೆಪಿ (BJP) ಘಟಕದ ಅಧ್ಯಕ್ಷೆ ಹಾಗೂ ಉತ್ತರ ಕನ್ನಡ (Uttara Kannada) ಜಿಲ್ಲಾ ಬಿಜೆಪಿ ಮಾಜಿ ಪ್ರಧಾನ ಕಾರ್ಯದರ್ಶಿ ಉಷಾ ಹೆಗಡೆಗೆ (Usha Hegde) ಕಾರವಾರದ ಲೋಕಾಯುಕ್ತ ನ್ಯಾಯಾಲಯ (Lokayuktha Court) ಶಿಕ್ಷೆ ವಿಧಿಸಿದ್ದು, ಶಿಕ್ಷೆಯಲ್ಲಿ ಒಂದು ವರ್ಷ ಜೈಲು ಹಾಗೂ 5 ಸಾವಿರ ರೂ. ದಂಡ ವಿಧಿಸಿದೆ.

ಮಾಹಿತಿ ಪ್ರಕಾರ, ಉಷಾ ಹೆಗಡೆ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಅಧಿಕಾರದಲ್ಲಿದ್ದಾಗ ಜ.2011 ರಿಂದ ನ.2012 ರವರೆಗೆ ಅಂಗನವಾಡಿ ಕಾರ್ಯಕರ್ತೆಯೆಂದು ನಿರೂಪಿಸಿ ಸರ್ಕಾರದಿಂದ ಗೌರವಧನ 88,630 ರೂ. ಪಡೆದುಕೊಂಡಿದ್ದಾರೆ. ಆದರೆ ಒಂದೇ ಸಮಯದಲ್ಲಿ ಒಟ್ಟು ಎರಡು ಹುದ್ದೆಗಳನ್ನು ಹೊಂದಿದ್ದು, ಜನಪ್ರತಿನಿಧಿಯಾದ ನಂತರವೂ ಅಂಗನವಾಡಿ ಕಾರ್ಯಕರ್ತೆಯೆಂದು ಗೌರವಧನ ಪಡೆದು, ಸರ್ಕಾರಕ್ಕೆ ವಂಚನೆ ಮಾಡಿದ್ದಾಗಿ ಆರೋಪಿಸಲಾಗಿತ್ತು.

ಉಷಾ ರವೀಂದ್ರ ಹೆಗಡೆ ಏಕಕಾಲದಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಜಿಲ್ಲಾ ಪಂಚಾಯತ್ ಸದಸ್ಯೆಯಾಗಿ ಕಾರ್ಯನಿರ್ವಹಿಸಿದ್ದ ಹಿನ್ನಲೆ ಭಾರತೀಯ ದಂಡ ಸಹಿತ ಕಲಂ 468ರ ಮೇರೆಗೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕೋರ್ಟ್ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.

ಈ ಬಗ್ಗೆ ಇಬ್ರಾಹಿಂ ನಬಿಸಾಬ್ ದೂರು ನೀಡಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಡಿಯಲ್ಲಿ ಎರಡು ಹುದ್ದೆ ಮಾಡಲು ಬರುವುದಿಲ್ಲ. ಸರ್ಕಾರದ ಆದೇಶದಂತೆ ಒಂದು ಹುದ್ದೆಗೆ ರಾಜೀನಾಮೆ ನೀಡಿ ಎಂದು ಮೌಖಿಕವಾಗಿ ಹಾಗೂ ಲಿಖಿತವಾಗಿ ಸೂಚಿಸಲಾಗಿತ್ತು. ಆದರೂ ಉಷಾ ಹೆಗಡೆ ಇಲಾಖೆಯ ಆದೇಶ ಹಾಗೂ ಧಾರವಾಡ ಹೈಕೋರ್ಟ್ ಸಂಚಾರಿ ಪೀಠ ನೀಡಿದ ಆದೇಶವನ್ನು ಧಿಕ್ಕರಿಸಿದ್ದರು. ಇದೀಗ ಈ ಅಂಶಗಳನ್ನು ಗಮನದಲ್ಲಿಟ್ಟು ಜಿಲ್ಲಾ ಪ್ರಧಾನ ಸೆಷನ್ಸ್ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ಸೋಮವಾರ ತೀರ್ಪು ಪ್ರಕಟಿಸಿದ್ದಾರೆ.