Home News Chennai: ಕಾಲ್ತುಳಿತ ದುರಂತ: ನಾಲ್ಕು FIR ದಾಖಲು, ಮದ್ರಾಸ್‌ ಹೈಕೋರ್ಟ್‌ ಮೆಟ್ಟಿಲೇರಿದ ನಟ ವಿಜಯ್‌ ನೇತೃತ್ವದ...

Chennai: ಕಾಲ್ತುಳಿತ ದುರಂತ: ನಾಲ್ಕು FIR ದಾಖಲು, ಮದ್ರಾಸ್‌ ಹೈಕೋರ್ಟ್‌ ಮೆಟ್ಟಿಲೇರಿದ ನಟ ವಿಜಯ್‌ ನೇತೃತ್ವದ ಟಿವಿಕೆ ಪಕ್ಷ

Hindu neighbor gifts plot of land

Hindu neighbour gifts land to Muslim journalist

Chennai: ಕರೂರಿನಲ್ಲಿ ನಟ, ತಮಿಳಿಕ ವೆಟ್ರಿ ಕಳಗಂ ಪಕ್ಷದ ಮುಖ್ಯಸ್ಥ ವಿಜಯ್‌ ರ್ಯಾಲಿ ಸಮಯದಲ್ಲಿ ಭೀಕರ ಕಾಲ್ತುಳಿತ ಸಂಭವಿಸಿ 40 ಜನರು ಮೃತಪಟ್ಟಿದ್ದು, ನೂರಾರು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಕುರಿತು ನಾಲ್ಕು ಎಫ್‌ಐಆರ್‌ ದಾಖಲಾಗಿದೆ. ಟಿವಿಕೆ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ್‌, ಜಿಲ್ಲಾ ಕಾರ್ಯದರ್ಶಿ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಇದರ ನಡುವೆ ನಟ ವಿಜಯ್‌ ನೇತೃತ್ವದ ತಮಿಳಿಗ ವೆಟ್ರಿ ಕಳಗಂ ಪಕ್ಷ ಮದ್ರಾಸ್‌ ಹೈಕೋರ್ಟ್‌ ಮೆಟ್ಟಿಲೇರಿದೆ. ಕಾಲ್ತುಳಿತ ಪ್ರಕರಣದ ಕುರಿತು ಸ್ವತಂತ್ರವಾಗಿ ತನಿಖೆ ನಡೆಯಬೇಕು. ಸಿಬಿಐ ತನಿಖೆ ಮಾಡಬೇಕು ಎಂದು ಆಗ್ರಹಿಸಿ ಅರ್ಜಿ ಸಲ್ಲಿಸಿದೆ.

ರ್ಯಾಲಿ ಸಂದರ್ಭದಲ್ಲಿ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದು, ಪೊಲೀಸರು ಲಾಠಿ ಚಾರ್ಜ್‌ ಮಾಡಿದ್ದಾರೆ. ಇದರಿಂದ ನೂಕುನುಗ್ಗಲು ಉಂಟಾಗಿದೆ. ಕಾಲ್ತುಳಿತ ನಡೆದಿದೆ. ಕಾಲ್ತುಳಿತ ದುರಂತದ ಹಿಂದೆ ಷಡ್ಯಂತ್ರ ನಡೆದಿದೆ. ಈ ಕುರಿತು ಸಿಬಿಐ ಅಥವಾ ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಟಿವಿಕೆ ಪಕ್ಷ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನಾಳೆ ಮದ್ರಾಸ್‌ ಹೈಕೋರ್ಟ್‌ನಲ್ಲಿ ನಾಳೆ ವಿಚಾರಣೆ ನಡೆಯಲಿದೆ.

ಈ ದುರಂತದ ಕುರಿತು ವಿಜಯ್‌ ಪ್ರತಿಕ್ರಿಯೆ ನೀಡಿದ್ದು, ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಅಲ್ಲದೇ ತಲಾ 20 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಗಾಯಗೊಂಡವರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಹೇಳಿದ್ದಾರೆ. ಇದನ್ನು ಅವರು ಟಿವಿಕೆ ಪಕ್ಷದ ಸೋಶಿಯಲ್‌ ಮೀಡಿಯಾ ಖಾತೆ ಮೂಲಕ ಪೋಸ್ಟ್‌ ಮಾಡಿದ್ದಾರೆ.