Home latest ರೀಲ್ಸ್ ವ್ಯಾಮೋಹದಿಂದ ಒಂದೇ ಕುಟುಂಬದ ಮೂವರು ಸಾವು!

ರೀಲ್ಸ್ ವ್ಯಾಮೋಹದಿಂದ ಒಂದೇ ಕುಟುಂಬದ ಮೂವರು ಸಾವು!

Hindu neighbor gifts plot of land

Hindu neighbour gifts land to Muslim journalist

ಚಿಕ್ಕಬಳ್ಳಾಪುರ:ಒಂದೇ ಕುಟುಂಬದ ಮೂವರು ಬಸ್ ನಡಿಗೆ ಬಿದ್ದು ಮೃತ ಪಟ್ಟಿರುವ ಹೃದಯವಿದ್ರಾಯಕ ಘಟನೆ ಚಿಕ್ಕಬಳ್ಳಾಪುರದಲ್ಲಿ ಇಂದು ಬೆಳಗ್ಗೆ ನಡೆದಿದೆ.

ಬೆಂಗಳೂರಿನ ಗೌಸ್ ಹಾಗೂ ಅವರ ಪತ್ನಿ ಅಮ್ಮಾಜಾನ್ ಹಾಗೂ ಮಗ ರಿಯಾನ್ ಮೃತ ಪಟ್ಟವರೆಂದು ತಿಳಿದು ಬಂದಿದೆ.ಅಪ್ಪ, ಅಮ್ಮ ಮತ್ತು ಮಗನನ್ನು ಬಸ್‌ವೊಂದು ಬಲಿ ಪಡೆದ ಭಾರಿ ಅಪಘಾತದ ಕಾರಣ ಬಹಿರಂಗಗೊಂಡಿದ್ದು, ರೀಲ್ಸ್‌ ವಿಡಿಯೋದ ವ್ಯಾಮೋಹವೇ ಇದಕ್ಕೆ ಕಾರಣ ಎಂದು ತಿಳಿದುಬಂದಿದೆ.

ಬೆಂಗಳೂರಿನಲ್ಲಿ ಸೆಕೆಂಡ್ ಹ್ಯಾಂಡ್ ಬೈಕ್ ಮಾರಾಟ ಮಾಡೋ ಕೆಲಸದಲ್ಲಿರುವ ಗೌಸ್,ಸ್ಕೂಟಿಯಲ್ಲಿ ಪತ್ನಿ ಹಾಗೂ ಮಗನ ಜೊತೆಗೆ ಪತ್ನಿಯ ತವರೂರು ಆಂಧ್ರಪ್ರದೇಶದ ಕದಿರಿಗೆ ಹೋಗುತ್ತಿದ್ದರು.ಮಾರ್ಗಮಧ್ಯೆ ಫೋಟೋಸ್ ತೆಗೆದುಕೊಂಡು, ರೀಲ್ಸ್ ಮಾಡಿಕೊಂಡು ಸ್ಕೂಟಿಯಲ್ಲಿ ಜಾಲಿಟ್ರಿಪ್ ಮಾಡುತ್ತಿದ್ದರು.

ಚಿಕ್ಕಬಳ್ಳಾಪುರ ತಾಲೂಕಿನ ಹೊನ್ನೇನಹಳ್ಳಿ ಬಳಿ ಬೆಂಗಳೂರು ಕಡೆಯಿಂದ ಬರುತ್ತಿದ್ದವರು ತಿಂಡಿ ತಿನ್ನಲು ರಸ್ತೆ ಬದಿಯಲ್ಲಿರುವ ಹೋಟೆಲ್‍ಗೆ ಬೈಕ್ ತಿರುಗಿಸಿದ್ದಾರೆ. ಹೋಟೆಲ್‍ನಲ್ಲಿ ತಿಂಡಿ ತಿಂದು ಮರಳಿ ಬಾಗೇಪಲ್ಲಿ ಕಡೆಗೆ ಯೂಟರ್ನ್ ತೆಗೆದುಕೊಂಡಿದ್ದಾರೆ. ಆದರೆ ಅಷ್ಟರಲ್ಲೇ ಬಾಗೇಪಲ್ಲಿ ಕಡೆಯಿಂದ ಬಂದ ಖಾಸಗಿ ಬಸ್ ಸ್ಕೂಟಿ ಮೇಲೆ ಎರಗಿದೆ.

ಇದರ ಪರಿಣಾಮ ಸ್ಕೂಟಿ ಬಸ್ ಕೆಳಗೆ ಸಿಲುಕಿ ನಜ್ಜುಗುಜ್ಜಾಗಿ ಬಸ್ ಡಿವೈಡರ್ ಮೇಲೆ ಹತ್ತಿದೆ.ಮಗ ರಿಯಾನ್ ಮೇಲೆ ಚಕ್ರ ಹರಿದಿದ್ದು,ಪತ್ನಿ ರಸ್ತೆಗೆ ಬಿದ್ದ ಪರಿಣಾಮ ತಲೆಗೆ ಗಂಭೀರ ಗಾಯವಾಗಿದ್ದು,ಬಸ್ ಕೆಳಗೆ ಸಿಲುಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ಕುರಿತು ಚಿಕ್ಕಬಳ್ಳಾಪುರ ಸಂಚಾರಿ ಠಾಣಾ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ, ಮೃತದೇಹಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.

ಅಪಘಾತ ನಂತರ ಬಸ್ ಸ್ಥಳದಲ್ಲೇ ಬಿಟ್ಟು ಚಾಲಕ ಎಸ್ಕೇಪ್ ಆಗಿದ್ದಾನೆ.ಚಿಕ್ಕಬಳ್ಳಾಪುರ ಸಂಚಾರಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.