Home News Rohit : ಕಾಟೇರ ಸಿನಿಮಾದ ಬಾಲ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ರೋಹಿತ್ ಕಾರು ಭೀಕರ...

Rohit : ಕಾಟೇರ ಸಿನಿಮಾದ ಬಾಲ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ರೋಹಿತ್ ಕಾರು ಭೀಕರ ಅಪಘಾತ – ಸ್ಥಿತಿ ಗಂಭೀರ!!

Hindu neighbor gifts plot of land

Hindu neighbour gifts land to Muslim journalist

Rohit : ಕನ್ನಡ ಚಿತ್ರರಂಗದಲ್ಲಿ ದಾಖಲೆ ನಿರ್ಮಿಸಿದ ಸಿನಿಮಾ ಕಾಟೇರ ಚಿತ್ರದಲ್ಲಿ ಬಾಲನಟನಾಗಿ ಅಭಿನಯಿಸಿದ್ದ ರಾಷ್ಟ್ರಪ್ರಶಸ್ತಿ ವಿಜೇತ ಬಾಲನಟ ರೋಹಿತ್‌(Rohith ) ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಲ್ಲದೆ ನಾಲ್ವರಿಗೆ ಗಂಭೀರ ಗಾಯಳಾಗಿವೆ.

ಶ್ರೀರಂಗಪಟ್ಟಣದಿಂದ ಬೆಂಗಳೂರಿಗೆ ಬರುವ ಹಾದಿಯಲ್ಲಿ ಈ ಅಪಘಾತ ಸಂಭವಿಸಿದೆ. ಕೇರಳದ ಬಸ್‌ವೊಂದು ರೋಹಿತ್ ಅವರಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಕಾರಿನಲ್ಲಿ ಇದ್ದ ರೋಹಿತ್ ಹಾಗೂ ಅವರ ತಾಯಿಗೂ ಗಾಯಗಳಾಗಿವೆ. ಸದ್ಯ ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ರೋಹಿತ್.

ಅಷ್ಟಕ್ಕೂ ಆಗಿದ್ದೇನು?
ಶನಿವಾರ ಸಂಜೆ ಹೊಸಹಳ್ಳಿ ಸಮೀಪದ ಆರಾಧನಾ ಕಾಲೇಜಿನಲ್ಲಿ ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಪಾಂಡವಪುರದಿಂದ ರೋಹಿತ್, ತಾಯಿ ಮತ್ತು ಸ್ನೇಹಿತರನ್ನು‌ ಕಾಲೇಜು ಮುಖ್ಯಸ್ಥ ಯೋಗಣ್ಣ ಅವರ ಕಾರಿನಲ್ಲಿ ಕರೆದೊಯ್ಯುತ್ತಿದ್ದರು. ಶ್ರೀರಂಗಪಟ್ಟಣದ ಪಾಲಹಳ್ಳಿ ಬಳಿ ಕಾರು ಅಪಘಾತಕ್ಕೀಡಾಗಿದೆ. ಕೇರಳದ ಪ್ರವಾಸಿ ಬಸ್ಸೊಂದಕ್ಕೆ ಕಾರು ಮುಖಾಮುಖಿ ಡಿಕ್ಕಿ ಆಗಿದ್ದರಿಂದ ಕಾರಿನಲ್ಲಿದ್ದವರು ಗಂಭೀರ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ರೋಹಿತ್ ಅವರ ತಾಯಿ ಛಾಯಾಲಕ್ಷ್ಮಿ ಅವರ ಒಂದು‌ ಕೈ ಮತ್ತು ಒಂದು ಕಾಲು ಮುರಿದಿದೆ. ಕಾರಿನಲ್ಲಿದ್ದ ಸ್ನೇಹಿತ ಯಶಸ್, ಆರಾಧನಾ ಕಾಲೇಜಿನ ಉಪನ್ಯಾಸಕ ಕೇಶವ್​ ಮತ್ತು ಶ್ರೀಕಾಂತ್​ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಈಗಾಗಲೇ ವೈದ್ಯರು ಪರೀಕ್ಷಿಸಿದ್ದು ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ರೋಹಿತ್ ಅವರ ತಲೆ ಬುರುಡೆಗೆ ತೀವ್ರ ಪೆಟ್ಟಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಜೊತೆಗೆ ರೋಹಿತ್‌ ಅವರ ವಸಡು ಒಡೆದು ಹೋಗಿದ್ದು ಅವರಿಗೀಗ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೆ ರೋಹಿತ್ ತಾಯಿಗೂ ಎರಡೂ ಕಾಲುಗಳಿಗೆ ಪೆಟ್ಟಾಗಿದ್ದು ಮೂಳೆ ಮುರಿದಿವೆ ಎನ್ನಲಾಗುತ್ತಿದೆ.

ಮಾಸ್ಟರ್‌ ರೋಹಿತ್ ಕನ್ನಡದಲ್ಲಿ ಹಲವಾರು ಸಿನಿಮಾಗಳಲ್ಲಿ ಬಾಲ ನಟರಾಗಿದ್ದಾರೆ. ಇವರ ಅಭಿನಯಕ್ಕೆ ಹಲವಾರು ಪ್ರಶಸ್ತಿಗಳು ಲಭಿಸಿವೆ. ಜೊತೆಗೆ ಕಾಟೇರ ಸಿನಿಮಾದಲ್ಲೂ ರೋಹಿತ್ ನಟನೆ ಮಾಡಿದ್ದು ರಾಷ್ಟ್ರಪ್ರಶಸ್ತಿಯನ್ನೂ ಪಡೆದುಕೊಂಡಿದ್ದಾರೆ. ಅಲ್ಲದೆ ಕಾಟೇರಾ ಸಿನಿಮಾದಲ್ಲಿ ರೋಹಿತ್‌ ನಟನೆಯನ್ನು ಕಂಡು ನಟ ದರ್ಶನ್ ಅವರೂ ಕೂಡ ಹೊಗಳಿದ್ದರು.