Home News Puttur: ಪುತ್ತೂರು:ವಿವಾಹದ ಆಮೀಷವೊಡ್ಡಿ ಲೈಂಗಿಕವಾಗಿ ಬಳಸಿ ಮಗು ಹುಟ್ಟಿದ ಪ್ರಕರಣ: ಸಂತ್ರಸ್ತೆ ಮಗು ಹಾಗೂ ಆರೋಪಿಯ...

Puttur: ಪುತ್ತೂರು:ವಿವಾಹದ ಆಮೀಷವೊಡ್ಡಿ ಲೈಂಗಿಕವಾಗಿ ಬಳಸಿ ಮಗು ಹುಟ್ಟಿದ ಪ್ರಕರಣ: ಸಂತ್ರಸ್ತೆ ಮಗು ಹಾಗೂ ಆರೋಪಿಯ ಡಿ ಎನ್ ಎ ಪರೀಕ್ಷೆ!

Hindu neighbor gifts plot of land

Hindu neighbour gifts land to Muslim journalist

Puttur: ಯುವತಿಗೆ ವಿವಾಹದ ಆಮೀಷವೊಡ್ಡಿ ಲೈಂಗಿಕವಾಗಿ ಬಳಸಿಕೊಂಡು, ಮಗು ಆದ ಬಳಿಕ ಮದುವೆಯಾಗಲು ನಿರಾಕರಿಸಿದ ಪ್ರಕರಣದಲ್ಲಿ, ಬಿಜೆಪಿ ಮುಖಂಡನ ಪುತ್ರ ಶ್ರೀಕೃಷ್ಣ ಜೆ.ರಾವ್‌ ವಿರುದ್ಧ ಮಹತ್ವದ ಬೆಳವಣಿಗೆ ನಡೆದಿದೆ.

ಸಂತ್ರಸ್ತೆ ಜೂನ್ 27ರಂದು ಗಂಡು ಮಗುವಿಗೆ ಜನ್ಮನೀಡಿದ್ದ ಹಿನ್ನೆಲೆಯಲ್ಲಿ, ಮಗು 50 ದಿನಗಳಾದ ನಂತರ ಆ.19 ರಂದು ಪುತ್ತೂರಿನ ನ್ಯಾಯಾಲಯದಲ್ಲಿ ಸಂತ್ರಸ್ತೆ, ಮಗು ಹಾಗೂ ಆರೋಪಿ ಮೂವರ ಡಿಎನ್‌ಎ ಪರೀಕ್ಷೆ ನಡೆಯಿತು.

ಮಂಗಳೂರಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಯನ್ನು ಪೊಲೀಸರು ಮಧ್ಯಾಹ್ನ ನ್ಯಾಯಾಲಯಕ್ಕೆ ಕರೆ ತಂದರು. ಈ ಸಂದರ್ಭದಲ್ಲಿ ಸಂತ್ರಸ್ತೆ ಯುವತಿ, ಮಗು ಮತ್ತು ಯುವತಿಯ ತಾಯಿ ಹಾಜರಿದ್ದರು. ನ್ಯಾಯಾಧೀಶರ ಸಮ್ಮುಖದಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಯ ವೈದ್ಯರ ನೇತೃತ್ವದಲ್ಲಿ ವಿಧಿವಿಜ್ಞಾನ ಇಲಾಖೆಯ ಸಿಬ್ಬಂದಿ ಮೂವರ ರಕ್ತದ ಮಾದರಿಗಳನ್ನು ಸಂಗ್ರಹಿಸಿದರು.

ಸಂಗ್ರಹಿಸಿದ ಮಾದರಿಗಳನ್ನು ಡಿ.ಎನ್‌ಎ ಪರೀಕ್ಷೆಗಾಗಿ ಬೆಂಗಳೂರು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಮಹಿಳಾ ಠಾಣೆಯ ಪೊಲೀಸ್‌ ಸಿಬ್ಬಂದಿ ಬಸ್ ಮೂಲಕ ಅವುಗಳನ್ನು ಬೆಂಗಳೂರಿಗೆ ಸಾಗಿಸಿದರು. ಸಂತ್ರಸ್ತೆಯ ತಾಯಿಯೂ ಮಾದರಿಗಳ ಭದ್ರತೆಗಾಗಿ ಅವರೊಂದಿಗೆ ತೆರಳಿದ್ದಾರೆ ಎನ್ನಲಾಗಿದೆ.

Udupi: ಕಾಪು ಮಾರಿಯಮ್ಮ ದೇವಸ್ಥಾನಕ್ಕೆ ನಟಿ ರಕ್ಷಿತಾ ಭೇಟಿ!