ನವದೆಹಲಿ: ʼಕಾಕ್ರೋಚ್ ಜನತಾ ಪಾರ್ಟಿʼ ಮತ್ತೆ ಯುವ ಪ್ರತಿಭಟನಾ ಮೆರವಣಿಗೆಗೆ ಕರೆ ನೀಡಿದೆ. ಸೆ.5ರಂದು ಇಂಡಿಯಾ ಗೇಟ್‌ನಿಂದ ನವದೆಹಲಿಯ ಪೊಲೀಸ್ ಪ್ರಧಾನ ಕಚೇರಿಯವರೆಗೆ ಮೆರವಣಿಗೆ ನಡೆಸುವುದಾಗಿ ಪಕ್ಷ ಸೋಮವಾರ ಘೋಷಿಸಿದೆ.
Sponsoredಜು.25 ರಂದು ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಹಿಂಪಡೆಯುವ ಸಂದರ್ಭದಲ್ಲಿ ಕೇಂದ್ರ ಸರಕಾರ ನೀಡಿದ್ದ ಭರವಸೆಯನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಸಿಜೆಪಿ ಆರೋಪಿಸಿದ್ದು, ವಿಶ್ವಾಸಘಾತ ಖಂಡಿಸಿ ಪ್ರತಿಭಟನೆ ಮಾಡುವುದಾಗಿ ತಿಳಿಸಿದೆ.
ಈ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಸಿಜೆಪಿ ವಕ್ತಾರ ಸೌರವ್ ದಾಸ್ ಮೆರವಣಿಗೆ ಶಾಂತಿಯುತವಾಗಿರಲಿದೆ ಎಂದು ತಿಳಿಸಿದ್ದಾರೆ.




