Home latest ಮುರುಘಾಶ್ರೀ ಮಾಡಿರುವುದು ಅಕ್ಷಮ್ಯ ಅಪರಾಧ | ಮುರುಘಾ ಮಠದ ಶ್ರೀಗಳಿಗೆ ತಕ್ಕ ಶಿಕ್ಷೆಯಾಗಬೇಕು – ಮಾಜಿ...

ಮುರುಘಾಶ್ರೀ ಮಾಡಿರುವುದು ಅಕ್ಷಮ್ಯ ಅಪರಾಧ | ಮುರುಘಾ ಮಠದ ಶ್ರೀಗಳಿಗೆ ತಕ್ಕ ಶಿಕ್ಷೆಯಾಗಬೇಕು – ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ

Hindu neighbor gifts plot of land

Hindu neighbour gifts land to Muslim journalist

ಎಲ್ಲೆಡೆ ಸಂಚಲನ ಮೂಡಿಸಿದ್ದ ಮುರುಘಾ ಶ್ರೀ ಗಳ ವಿರುದ್ಧ ಇಬ್ಬರು ಬಾಲಕಿಯರು ದೂರು ನೀಡಿದ್ದ ಪರಿಣಾಮ ಪೋಲಿಸ್ ದೂರು ದಾಖಲಾಗಿ ಶ್ರೀಗಳನ್ನು ಬಂಧಿಸಿ ತನಿಖೆ ಭಾಗಶಃ ಪೂರ್ಣಗೊಂಡಿದೆ.

ಏನೂ ಅರಿಯದ ಅಪ್ರಾಪ್ತ ಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬಂಧನಕ್ಕೆ ಒಳಗಾಗಿರುವ ಮುರುಘಾಶ್ರೀ ಶಿವಮೂರ್ತಿ ಸ್ವಾಮೀಜಿ ವಿರುದ್ಧ ಇದೀಗ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೇ ಉಡುಪಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಕೂಡ ಶ್ರೀಗಳ ನಡೆಯನ್ನು ಖಂಡಿಸಿದ್ದಾರೆ.

ಚಿತ್ರದುರ್ಗದ ಮುರುಘಾ ಶರಣರ (Shivamurthy Murugha Sharanaru) ವಿರುದ್ಧ ಪೋಕ್ಸೋ ಪ್ರಕರಣ ವಿಚಾರವನ್ನು ಪ್ರಸ್ತಾಪಿಸಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ (bs yediyurappa) ಅವರು ಮುರುಘಾಶ್ರೀ ಕ್ಷಮಿಸಲಾರದ ಅಪರಾಧ ಮಾಡಿದ್ದಾರೆ.

ಅಲ್ಲದೆ, ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಅಂತಾ ನಿರೀಕ್ಷೆ ಮಾಡಿರಲಿಲ್ಲ. ಇದನ್ನು ಎಲ್ಲರೂ ಖಂಡಿಸಬೇಕು. ಚಿತ್ರದುರ್ಗ ಮುರುಘಾ ಮಠದ ಶ್ರೀಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಮುರುಘಾಶ್ರೀ ವಿರುದ್ಧ ಯಡಿಯೂರಪ್ಪ ರವರು ಪ್ರತಿಕ್ರಿಯೆ ನೀಡಿದ್ದಾರೆ.