Home News KAS reexamination: ಕೆಎಎಸ್‌ ಮರುಪರೀಕ್ಷೆ ಸಿಎಂ ಸಿದ್ದರಾಮಯ್ಯ ಆದೇಶ!

KAS reexamination: ಕೆಎಎಸ್‌ ಮರುಪರೀಕ್ಷೆ ಸಿಎಂ ಸಿದ್ದರಾಮಯ್ಯ ಆದೇಶ!

Cm Siddaramaiah

Hindu neighbor gifts plot of land

Hindu neighbour gifts land to Muslim journalist

KAS reexamination: ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪರೀಕ್ಷಾರ್ಥಿಗಳ ಹಿತದೃಷ್ಟಿ, ಮತ್ತು ಎಲ್ಲರಿಗೂ ನ್ಯಾಯ ಒದಗಿಸುವ ದೃಷ್ಟಿಯಿಂದ ಕೆಎಎಸ್‌ ಮರುಪರೀಕ್ಷೆಗೆ (KAS reexamination) ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಈಗಾಗಲೇ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಆ.27ರಂದು ನಡೆದ ಪೂರ್ವಭಾವಿ ಪರೀಕ್ಷೆಯಲ್ಲಿ ಭಾಷಾಂತರ ಲೋಪ ಪತ್ತೆಯಾದ ಹಿನ್ನೆಲೆಯಲ್ಲಿ ಮರುಪರೀಕ್ಷೆ ನಡೆಸುವಂತೆ ಅಭ್ಯರ್ಥಿಗಳು, ಸಾಹಿತ್ಯಿಕ ವಲಯ ಮತ್ತು ಕನ್ನಡಪರ ಸಂಘಟನೆಗಳು ನಡೆಸಿದ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ ಮರುಪರೀಕ್ಷೆ ನಡೆಸಲು ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ)ಕ್ಕೆ ನಿರ್ದೇಶನ ನೀಡಿದೆ.

ಅಲ್ಲದೆ ಈ ಕುರಿತು ಮಾನ್ಯ ಮುಖ್ಯಮಂತ್ರಿಗಳು ‘ಕನ್ನಡ ಭಾಷಾಂತರದಲ್ಲಿ ಅನೇಕ ಲೋಪದೋಷಗಳು ಕಂಡುಬಂದಿರುವ ಹಿನ್ನಲೆ, ಎಲ್ಲಾ ಪರೀಕ್ಷಾರ್ಥಿಗಳಿಗೂ ನ್ಯಾಯ ಒದಗಿಸುವ ದೃಷ್ಟಿಯಿಂದ ಎರಡು ತಿಂಗಳೊಳಗೆ ಮರುಪರೀಕ್ಷೆ ನಡೆಸುವಂತೆ ಕೆಪಿಎಸ್‌ಸಿಗೆ ಸೂಚನೆ ನೀಡಿದ್ದೇನೆ. ಇನ್ನು ಪರೀಕ್ಷೆ ವಿಷಯದಲ್ಲಿ ತಪ್ಪು ಮಾಡಿದವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ನೇಮಕ ಪ್ರಕ್ರಿಯೆಯನ್ನು ನ್ಯಾಯಬದ್ಧವಾಗಿ ನಡೆಸಲು ಬದ್ಧರಾಗಿರುತ್ತೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.

ಆ.27ರಂದು 200 ಅಂಕಗಳ ಎರಡು ಪರೀಕ್ಷೆಗಳು ನಡೆದಿದ್ದವು. ಭಾಷಾಂತರ ಲೋಪದೋಷ, ವಾಸ್ತವಾಂಶ ತಪ್ಪುಗಳು, ಇಸವಿಯಲ್ಲಿ ತಪ್ಪುಗಳು ಕಂಡು ಬಂದಿದ್ದವು. ಎರಡೂ ಪ್ರಶ್ನೆಪತ್ರಿಕೆಗಳಲ್ಲಿ 50ಕ್ಕೂ ಹೆಚ್ಚು ತಪ್ಪುಗಳಾಗಿದ್ದ ಕಾರಣ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ಅಭ್ಯರ್ಥಿಗಳು, ಮರು ಪರೀಕ್ಷೆಗೆ ಆಗ್ರಹಿಸಿದ್ದರು. ಅಭ್ಯರ್ಥಿಗಳ ಮನವಿಯನ್ನು ಹಲವು ಚಿಂತಕರು, ಸಾಹಿತಿಗಳು ಬೆಂಬಲಿಸಿದ್ದರು. ರಾಜ್ಯದ ಅನೇಕ ಕೋಚಿಂಗ್ ಸೆಂಟರ್‌ಗಳು ಕೂಡ ಅಭ್ಯರ್ಥಿಗಳ ಮರುಪರೀಕ್ಷೆ ಮನವಿಗೆ ಬೆಂಬಲಿಸಿದ್ದವು. ಒಟ್ಟಿನಲ್ಲಿ ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷಾರ್ಥಿಗಳ ಹಿತದೃಷ್ಟಿ, ಎಲ್ಲರಿಗೂ ನ್ಯಾಯ ಒದಗಿಸುವ ದೃಷ್ಟಿಯಿಂದ ಮರುಪರೀಕ್ಷೆಗೆ ಆದೇಶಿಸಲಾಗಿದೆ. ಮುಂದೆ ನಡೆಸಲಾಗುವ ಪರೀಕ್ಷೆ ನ್ಯಾಯಬದ್ಧವಾಗಿರುವಂತೆ ನೋಡಿಕೊಳ್ಳಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.