Home Karnataka State Politics Updates ಸಿದ್ದರಾಮಯ್ಯ ಪತ್ನಿಯೇ 56 ಕೋಟಿ ಫಲಾನುಭವಿ, ತನಿಖೆ ಬೇಕು ಎನ್ನಲು ಹೈಕೋರ್ಟ್ ಕೊಡ್ತು 4 ಪ್ರಬಲ...

ಸಿದ್ದರಾಮಯ್ಯ ಪತ್ನಿಯೇ 56 ಕೋಟಿ ಫಲಾನುಭವಿ, ತನಿಖೆ ಬೇಕು ಎನ್ನಲು ಹೈಕೋರ್ಟ್ ಕೊಡ್ತು 4 ಪ್ರಬಲ ಕಾರಣ !

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರ್ಜಿ ವಜಾ ಆಗಿದೆ. ಸಿದ್ದರಾಮಯ್ಯ ಪತ್ನಿಯೇ ಫಲಾನುಭವಿಯಾಗಿರುವ ಕಾರಣ ಮುಡಾ ನಿವೇಶನ ಹಂಚಿಕೆ ಹಗರಣದ ತನಿಖೆಯ ಅಗತ್ಯವನ್ನು ಕರ್ನಾಟಕ ಹೈಕೋರ್ಟ್ ಒತ್ತಿ ಹೇಳಿದೆ, ಒಂದು ವೇಳೆ ಅರ್ಜಿದಾರರು ಅಧಿಕಾರದ ಸ್ಥಾನದಲ್ಲಿಲ್ಲದಿದ್ದರೆ ಹೋಗಿದ್ದರೆ ಅಂತಹ ದೊಡ್ಡ ಪ್ರಯೋಜನ ಪಡೆಯಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ.

 

ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ರ ತಮ್ಮ ಮೇಲೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿದ್ದರು ನ್ಯಾಯಮೂರ್ತಿ ಎಂ. ನಾಗಪ್ರಸನ್ನ. ಅವರು ಈ ಕೇಸಿನ ಅದರ ತೀರ್ಪು ಕಾಯ್ದಿರಿಸಿದ್ದರು. ಇಂದು ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ತನಿಖೆಯನ್ನು ತಡೆಹಿಡಿಯುವ ಅರ್ಜಿಯನ್ನು ವಜಾಗೊಳಿಸಿ ತೀರ್ಪು ನೀಡಿದ್ದು, ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17 ಎ ಅಡಿ ರಾಜ್ಯಪಾಲರು ನೀಡಿರುವ ಅನುಮತಿಯನ್ನು ಅವರು ಎತ್ತಿಹಿಡಿದಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಯ ಅಗತ್ಯ ಯಾಕಿದೆ ಅನ್ನುವ ಬಗ್ಗೆ ಹೈಕೋರ್ಟ್ ಕಾರಣಗಳನ್ನು ನೀಡಿದ್ದು, ರಾಜ್ಯಪಾಲರ ಆದೇಶ ಏಕೆ ಸರಿಯಾಗಿದೆ ಎಂಬುದಕ್ಕೂ ಕೋರ್ಟು ವಿವರಣೆ ನೀಡಿದೆ. ಕೋರ್ಟು ಹೇಳಿದ ಕಂಪ್ಲೀಟ್ ಮಾಹಿತಿ ಇಲ್ಲಿದೆ.

 

ಕಾರಣ 1: ಅರ್ಜಿದಾರರು (ಸಿದ್ದರಾಮಯ್ಯ) ಒಂದು ವೇಳೆ ಅಧಿಕಾರದ ಚುಕ್ಕಾಣಿ ಹಿಡಿದ ಕಾರಣದಿಂದ ನ್ಯಾಯವಲ್ಲದ ಲಾಭ ಆಗಿದೆ. ಈ ಕಾರಣಕ್ಕಾಗಿ ಕನಿಷ್ಠ ತನಿಖೆಯ ಅಗತ್ಯವಿರುತ್ತದೆ. ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 7 ಸಿ ಯ ಅಡಿ ಸಿದ್ದರಾಮಯ್ಯ ವಿರುದ್ಧ ಆರೋಪವಿದೆ. ಈ ಸೆಕ್ಷನ್ ಹೇಳುವ ಪ್ರಕಾರ ಸಾರ್ವಜನಿಕ ಸೇವಕನಾದವನು ತನಗಾಗಲೀ ಅಥವಾ ಇತರರಿಗಾಗಲೀ ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ನ್ಯಾಯವಲ್ಲದ ಲಾಭ ಪಡೆದರೆ ಅದು ಅಪರಾಧವಾಗುತ್ತದೆ ಎಂದು ಹೈಕೋರ್ಟ್ ಹೇಳಿದೆ. ಹಾಗಾಗಿ ಪ್ರಾಸಿಕ್ಯೂಷನ್ ಅಗತ್ಯ ಎಂದಿದೆ ಕೋರ್ಟು.

 

ಕಾರಣ 2: ಅಲ್ಲದೆ ತಮಗೆ ಅನುಕೂಲವಾಗುವಂತೆ ಜರೂರಾಗಿ ನಿಯಮ ರೂಪಿಸಿ, ಜನಸಾಮಾನ್ಯರೊಬ್ಬರು ಇಷ್ಟು ತ್ವರಿತಗತಿಯಲ್ಲಿ ಈ ಸೌಲಭ್ಯಗಳನ್ನು ಪಡೆಯುವುದು ಹಿಂದೆಂದೂ ಕಂಡರಿಯದ ಸಂಗತಿಯಾಗಿದೆ ಎಂದು ಕೋರ್ಟು ಆದೇಶದಲ್ಲಿ ಹೇಳಿದೆ.

ಕಾರಣ 3: ಇದೀಗ ಬಂದ ಮುಡಾ ಸೈಟು ಪ್ರಕರಣದ ವಾಸ್ತವಾಂಶಗಳನ್ನು ಗಮನಿಸಿದರೆ ಮೇಲ್ನೋಟಕ್ಕೆ ಸಿಎಂ ಸಿದ್ದರಾಮಯ್ಯ ಕುಟುಂಬ ನ್ಯಾಯವಲ್ಲದ ಲಾಭ ಪಡೆದಿರುವುದು ಸ್ಪಷ್ಟವಾಗಿದೆ. 40 ಕಿಲೋ ಮೀಟರ್ ದೂರದ ಜಮೀನು ಬಿಟ್ಟುಕೊಟ್ಟು ಅದರ ಬದಲಿಗೆ ಮೈಸೂರಿನ ಹೃದಯ ಭಾಗದ ನಿವೇಶನಗಳನ್ನು ಪಡೆದಿದ್ದಾರೆ. ಸಾರ್ವಜನಿಕ ಸೇವಕ ತನ್ನ ಕುಟುಂಬದವರಿಗಾಗಿ ಪ್ರಭಾವ ಬಳಸಿರುವುದಕ್ಕೆ ಇದು ಸಾಕ್ಷ್ಯ ಸಿಕ್ಕ ಹಾಗಾಗುತ್ತದೆ. ಹೀಗೆ ಪ್ರಭಾವ ಬಳಸಲು ಸಾರ್ವಜನಿಕ ಸೇವಕರಾದವರು ಯಾವುದೇ ಶಿಫಾರಸು ಅಥವಾ ಆದೇಶ ಮಾಡಬೇಕಿಲ್ಲ. ಪತ್ನಿಗೆ ಲಾಭ ಆಗುವುದರ ಹಿಂದೆ ನಿಸ್ಸಂದೇಹವಾಗಿ ಸಿದ್ದರಾಮಯ್ಯನವರು ಇದ್ದಾರೆ. ಸಿದ್ದರಾಮಯ್ಯ ಅವರಿಗಿರುವ ಅಧಿಕಾರದ ಬಲದಿಂದಲೇ ಅವರ ಕುಟುಂಬ ಅನುಕೂಲ ಪಡೆದಿದೆ ಎಂದು ತೀರ್ಪಿನಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

 

ಕಾರಣ 4: ಸಿಎಂ ಪುತ್ರ ಭಾಗಿಯಾಗಿದ್ದ ಸಭೆಯಲ್ಲಿ 50-50 ನಿವೇಶನ ಹಂಚಿಕೆ ಬಗ್ಗೆ ತೀರ್ಮಾನವಾಗಿದೆ. 50-50 ಹಂಚಿಕೆ ಕಾನೂನುಬಾಹಿರವೆಂದು ರದ್ದಾಗಿದ್ದರೆ ಆಗ ಸಿಎಂ ಸಿದ್ದರಾಮಯ್ಯ ಪತ್ನಿಗೆ ದೊರಕಿದ 14 ನಿವೇಶನಗಳಿಗೆ ಏನಾಗಲಿದೆ ಎಂಬ ಬಗ್ಗೆ ತನಿಖೆಯಾಗಬೇಕಿದೆ. ಸಾಮಾನ್ಯ ನಾಗರಿಕನಾಗಿದ್ದರೆ ತನಿಖೆಗೆ ನಾಚುತ್ತಿರಲಿಲ್ಲ. ಮುಖ್ಯಮಂತ್ರಿ ಇಬ್ಬರು ದಿನಗೂಲಿಯವರು, ಜನಸಾಮಾನ್ಯರ ನಾಯಕನಾಗಿ ತನಿಖೆಗೆ ಹಿಂಜರಿಯಬಾರದು. ಸಿದ್ದರಾಮಯ್ಯ ಕುಟುಂಬದ ವಿರುದ್ಧ 56 ಕೋಟಿಯ ಅಕ್ರಮ ಲಾಭ ಪಡೆದ ಆರೋಪ, ಅನುಮಾನಗಳಿರುವಾಗ ತನಿಖೆ ಅತ್ಯಗತ್ಯವೆಂದು ಭಾವಿಸುತ್ತೇನೆ. ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿದೆ. ಸಿದ್ದರಾಮಯ್ಯರಿಗೆ ಕಷ್ಟಕಾಲ ಶುರುವಾಗಿದೆ.