# ಫೀಸ್ ಕಟ್ಟಲು ಕಾಲೇಜಿನಿಂದ ಕಿರುಕುಳ  ನೀಡಿದ್ದಕ್ಕಾಗಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು.

- Link: https://hosakannada.com/news/college-student-suicide-for-fees/
- Published: 2021-10-07T09:35:58+00:00
- Author: ಕೆ. ಎಸ್. ರೂಪಾ

ಮಂಗಳೂರು: ಕೊಲೊಸೊ ಆಸ್ಪತ್ರೆಯ ಹಾಸ್ಟೇಲ್ ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ
ಫಲಕಾರಿಯಾಗದೆ ನಿನ್ನೆ ಸಾವನ್ನಪ್ಪಿದ್ದಾಳೆ. ಕಾಲೇಜಿನಿಂದ ಫೀಸ್ ಕಟ್ಟಲು ಒತ್ತಡ ಹಾಕುತ್ತಿದ್ದಕ್ಕೆ
ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೇಲ್ನೋಟಕ್ಕೆ ತಿಳಿದಿದೆ.

Sponsored

ಕೇರಳದ ಕಾಸರಗೋಡು ಮೂಲದ ವಿದ್ಯಾರ್ಥಿನಿ ಮಂಗಳೂರಿನ ಕದ್ರಿ ಬಳಿಯ ಕೊಲಾಸೊ ಕಾಲೇಜಿನಲ್ಲಿ ನರ್ಸಿಂಗ್
ಓದುತ್ತಿದ್ದಳು. ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟು, ಮಂಗಳವಾರ ಹಾಸ್ಟೆಲ್ ನ ಬಾತ್ ರೂಮ್ ನಲ್ಲಿ
ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಳು. ಬಳಿಕ ವಿದ್ಯಾರ್ಥಿನಿಯನ್ನು ರಕ್ಷಿಸಿ, ಮಂಗಳೂರಿನ ಸಿಟಿ
ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸಾವನ್ನಪ್ಪಿದ್ದಾಳೆ.

Advertisement

Advertisement

ಕಾಲೇಜಿನಲ್ಲಿ ಫೀಸ್ ಕಟ್ಟಲು ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ
ಎನ್ನಲಾಗಿದೆ. ಫೀಸ್ ಕಟ್ಟುವ ವಿಚಾರದಲ್ಲಿ ಕಾಲೇಜಿನಿಂದ ಕಿರುಕುಳ ನೀಡಲಾಗುತ್ತಿತ್ತು ಎಂಬ ಶಂಕೆ ಸಹ
ವ್ಯಕ್ತವಾಗಿದೆ. ಈ ಕುರಿತು ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ಪೊಲೀಸರು
ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.

Advertisement
