# ಮಂಗಳೂರು: ಪ್ರತಿಷ್ಟಿತ ಕಾಲೇಜಿನ ವಿದ್ಯಾರ್ಥಿನಿ ಲಾಡ್ಜ್ ನಲ್ಲಿ ಆತ್ಮಹತ್ಯೆ!! ಸಾವಿನ ಸುತ್ತ ಹಲವು ಅನುಮಾನ-ಮುಂದುವರಿದ ತನಿಖೆ!!

- Link: https://hosakannada.com/news/college-student-susuid-and-death-manglore-loadge-pcr/
- Published: 2022-09-26T23:12:43+00:00
- Author: ಕೆ. ಎಸ್. ರೂಪಾ

ಮಂಗಳೂರು: ನಗರದ ಪ್ರತಿಷ್ಟಿತ ಕಾಲೇಜಿನಲ್ಲಿ ಉನ್ನತ ವ್ಯಾಸಂಗ ನಡೆಸುತ್ತಿದ್ದ ವಿದ್ಯಾರ್ಥಿನಿಯೋರ್ವಳು
ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆಯೊಂದು ಬೆಳಕಿಗೆ ಬಂದಿದ್ದು, ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Sponsored

ಮೃತ ವಿದ್ಯಾರ್ಥಿನಿಯನ್ನು ಕಾಸರಗೋಡು ಮೂಲದ ಅಮೃತ(27)ಎಂದು ಗುರುತಿಸಲಾಗಿದೆ. ಈಕೆ ನಗರದ ಖಾಸಗಿ ಕಾಲೇಜಿನಲ್ಲಿ
ಸ್ನಾತಕೋತ್ತರ ವಿದ್ಯಾರ್ಥಿನಿಯಾಗಿದ್ದು, ವಿವಾಹವಾಗಿ ಪತಿ ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ.

Advertisement

Advertisement

ಮೃತ ಅಮೃತ ಕಳೆದ ಕೆಲ ಸಮಯದಿಂದ ತೀವ್ರ ಖಿನ್ನತೆಗೆ ಒಳಗಾಗಿದ್ದು, ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಆತ್ಮಹತ್ಯೆಯ ನಿರ್ಧಾರಕ್ಕೆ ಬಂದು ನಗರದ ಲಾಡ್ಜ್ ಒಂದರಲ್ಲಿ ರೂಮ್ ಬಾಡಿಗೆ ಪಡೆದಿದ್ದು,
ಆತ್ಮಹತ್ಯೆಗೂ ಮುನ್ನ ತನ್ನ ಗೆಳತಿಗೆ ಸಂದೇಶ ರವಾನಿಸಿದ್ದರು ಎನ್ನಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಗೆಳತಿ ಹಾಗೂ ಇನ್ನಿತರರು ಲಾಡ್ಜ್ ಗೆ ಆಗಮಿಸಿದ್ದು, ಅದಾಗಲೇ ಅಮೃತ ಆತ್ಮಹತ್ಯೆಗೆ
ಶರಣಾಗಿದ್ದಳು ಎಂದು ತಿಳಿದುಬಂದಿದೆ. ಈ ಬಗ್ಗೆ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,
ಆತ್ಮಹತ್ಯೆಯ ಬಗ್ಗೆ ತನಿಖೆ ಮುಂದುವರಿದಿದೆ.

Advertisement
