Home News Annapoorna Devi: ‘ಧರ್ಮಸ್ಥಳ ಅಪರಾಧ’ ಕೃತ್ಯಗಳ ಬಗ್ಗೆ ವಿಸ್ತೃತ ತನಿಖೆ ನಡೆಸಿ – ರಾಜ್ಯ ಸರ್ಕಾರಕ್ಕೆ...

Annapoorna Devi: ‘ಧರ್ಮಸ್ಥಳ ಅಪರಾಧ’ ಕೃತ್ಯಗಳ ಬಗ್ಗೆ ವಿಸ್ತೃತ ತನಿಖೆ ನಡೆಸಿ – ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವೆ ಅನ್ನಪೂರ್ಣ ದೇವಿ ಆಗ್ರಹ!!

Hindu neighbor gifts plot of land

Hindu neighbour gifts land to Muslim journalist

Annapoorna Devi: ಧರ್ಮಸ್ಥಳ ಸುತ್ತಮುತ್ತ ನಡೆದ ಹತ್ತಾರು ಅತ್ಯಾಚಾರ ಕೊಲೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಆ ಹೆಣಗಳನ್ನು ತಾನೇ ಹೂತು ಹಾಕಿದ್ದು ಎಂದು ಹೇಳಿದ್ದ ಅನಾಮಿಕ ವ್ಯಕ್ತಿ ಇಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಸಧ್ಯ ಪ್ರಕರಣ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಈ ಬೆನ್ನಲ್ಲೇ ಧರ್ಮಸ್ಥಳ ಗ್ರಾಮದ ಅಪರಾಧ ಕೃತ್ಯಗಳ ಬಗ್ಗೆ ವಿಸ್ತೃತ ತನಿಖೆ ಮಾಡಿ, ಅನಾಮಧೇಯ ವ್ಯಕ್ತಿಗೆ ರಕ್ಷಣೆ ನೀಡಿ ಎಂದು ಕೇಂದ್ರ ಮಕ್ಕಳ ಮತ್ತು ಮಹಿಳಾ ಕಲ್ಯಾಣ ಸಚಿವೆ ಅನ್ನಪೂರ್ಣ ದೇವಿ ಕರ್ನಾಟಕ ಸರಕಾರವನ್ನು ಆಗ್ರಹಿಸಿದ್ದಾರೆ.

 

ಹೌದು, ಅನಾಮಿತ ವ್ಯಕ್ತಿಯೊಬ್ಬ ಧರ್ಮಸ್ಥಳದ ಅಪರಾಧಗಳ ಕುರಿತು ಪತ್ರ ಬರೆದು ಸಂಚಲನ ಸೃಷ್ಟಿಸಿದ್ರು. ಈ ಕುರಿತು TimesNow ಸುದ್ದಿ ವಾಹಿನಿಯ ಜೊತೆ ಮಾತನಾಡಿದ ಸಚಿವೆ ಅನ್ನಪೂರ್ಣ ದೇವಿ ಅವರು, ಧರ್ಮಸ್ಥಳದಲ್ಲಿ 1995 ರಿಂದ 2014 ರವರೆಗೆ ಈ ರೀತಿಯ ಘಟನೆಗಳು ದೀರ್ಘಕಾಲದವರೆಗೆ ನಡೆದಿರುವುದು ಅಚ್ಚರಿ ತಂದಿದೆ. ಇದುವರೆಗೆ ಯಾರಿಗೂ ಈ ಬಗ್ಗೆ ತಿಳಿಯದಿರುವುದು ನಿಜಕ್ಕೂ ಗಂಭೀರವಾದ ವಿಷಯ ಎಂದು ಅವರು ಹೇಳಿದ್ದಾರೆ.

 

ಅಲ್ಲದೆ ಈಗ ಅನಾಮಧೇಯ ವ್ಯಕ್ತಿ ಈ ಕುರಿತ ಮಾಹಿತಿ ಬಹಿರಂಗಗೊಳಿಸಿದ್ದಾರೆ. ಕರ್ನಾಟಕ ಸರಕಾರವು ಮಾಹಿತಿ ನೀಡಿದ ಸಾಕ್ಷಿಗೆ ರಕ್ಷಣೆ ನೀಡಬೇಕು. ಈ ವಿಷಯದ ಬಗ್ಗೆ ಸಂಪೂರ್ಣ ಮತ್ತು ವಿಸ್ತೃತವಾದ ತನಿಖೆ ನಡೆಸಬೇಕು. ತಕ್ಷಣ ತನಿಖೆ ಕೈಗೊಳ್ಳಬೇಕು ಎಂದು ಅವರು ಕರ್ನಾಟಕ ಸರಕಾವರನ್ನು ಆಗ್ರಹಿಸಿದ್ದಾರೆ.