

ಮೈಸೂರು: ಮುಡಾ ಹಗರಣ ವಿಚಾರದಲ್ಲಿ ನ್ಯಾಯ ಸಿಗುತ್ತೆ ಎದೆಗುಂದಬೇಡಿ ಎಂದು ಕಾಂಗ್ರೆಸ್‌ನವರು ಹೇಳಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ.
ಜನಪ್ರತಿನಿಧಿ ನ್ಯಾಯಾಲಯದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಹಾಕುತ್ತೇನೆ. ನನ್ನ ಜೊತೆ ಈಗಲೂ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿಯ ಬಹಳಷ್ಟು ಜನ ಸಂಪರ್ಕದಲ್ಲಿದ್ದಾರೆ. ಅವರೆಲ್ಲ ಎದೆಗುಂದ ಬೇಡಿ ನ್ಯಾಯ ಸಿಕ್ಕೇ ಸಿಗುತ್ತದೆ ಎಂದು ದೈರ್ಯ ತುಂಬಿದ್ದಾರೆ ಎಂದು ಮಾಧ್ಯಮಕ್ಕೆ ಹೇಳಿದ್ದಾರೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ನೀಡಿದ್ದ ʼಬಿ ರಿಪೋರ್ಟ್ʼ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಒಪ್ಪಿದೆ. ಇದರ ಜೊತೆಗೆ ಸಿದ್ದರಾಮಯ್ಯ ಅವರು ಕಳಂಕಮುಕ್ತರಾಗಿದ್ದು, ಕಾನೂನು ಹೋರಾಟಕ್ಕೆ ದೊಡ್ಡ ಜಯ ದೊರಕಿದಂತಾಗಿದೆ.
ಹಗರಣದ ಆರೋಪಿಗಳಾಗಿದ್ದ ಸಿದ್ದರಾಮಯ್ಯ (ಎ1), ಪಾರ್ವತಿ (ಎ2), ಮಲ್ಲಿಕಾರ್ಜುನ ಸ್ವಾಮಿ (ಎ3), ದೇವರಾಜು (A4) ಅವರಿಗೆ ಬಿಗ್ ರಿಲೀಫ್ ದೊರಕಿದೆ. ಉಳಿದ ಆರೋಪಿಗಳ ವಿರುದ್ಧ ತನಿಖೆ ಮುಂದುವರಿಸುವಂತೆ ಕೋರ್ಟ್ ಜ.28 ರಂದು ಆದೇಶ ನೀಡಿತ್ತು.













