Home Karnataka State Politics Updates ಶಿವಾಜಿ ಊಟದಲ್ಲಿ ವಿಷ ಹಾಕಿದ್ದಕ್ಕೆ ಬ್ರಿಟಿಷರು ಸಂಭಾಜಿಯನ್ನು ಹತ್ಯೆ ಮಾಡಿದರು | ಸತೀಶ್ ಜಾರಕಿಹೊಳಿ ಹೊಸ...

ಶಿವಾಜಿ ಊಟದಲ್ಲಿ ವಿಷ ಹಾಕಿದ್ದಕ್ಕೆ ಬ್ರಿಟಿಷರು ಸಂಭಾಜಿಯನ್ನು ಹತ್ಯೆ ಮಾಡಿದರು | ಸತೀಶ್ ಜಾರಕಿಹೊಳಿ ಹೊಸ ಬಾಂಬ್

Hindu neighbor gifts plot of land

Hindu neighbour gifts land to Muslim journalist

ಇತ್ತೀಚೆಗಷ್ಟೇ ವಿವಾದಾತ್ಮಕ ಹೇಳಿಕೆ ನೀಡಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದ ಸತೀಶ್ ಜಾರಕಿಹೊಳಿ ಮತ್ತೊಂದು ಹೇಳಿಕೆ ನೀಡಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ನಿಪ್ಪಾಣಿಯಲ್ಲಿ ಮಾನವ ಬಂಧುತ್ವ ವೇದಿಕೆಯ ಕಾರ್ಯಕ್ರಮದಲ್ಲಿ ಸತೀಶ್ ಜಾರಕಿಹೊಳಿ ಮತ್ತೊಂದು ಎಡವಟ್ಟು ಮಾಡಿ ನಾಲಿಗೆ ಹರಿಬಿಟ್ಟಿದ್ದಾರೆ.

ಬೆಳಗಾವಿಯ ನಿಪ್ಪಾಣಿಯಲ್ಲಿ ನವೆಂಬರ್ 6ರಂದು ನಡೆದ ಮಾನವ ಬಂಧುತ್ವ ವೇದಿಕೆಯ ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ (Sathish Jarakiholi) ನೀಡಿದ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದ್ದು, ಹೇಳಿಕೆಯ ವಿಡಿಯೋ ವೈರಲ್ (Video viral) ಆಗುತ್ತಿದ್ದು, ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಇತ್ತೀಚೆಗೆ ನಡೆದ ವೇದಿಕೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ, ಧರ್ಮವೀರ ಸಂಭಾಜಿ ಮಹಾರಾಜರನ್ನು ಬ್ರಿಟಿಷರು ಹಿಡಿದು ಹತ್ಯೆ ಮಾಡಿದರು ಎಂದಿದ್ದಾರೆ. ಇಷ್ಟು ಸಾಲದು ಎಂಬಂತೆ ಧರ್ಮವೀರ ಮಹಾರಾಜರನ್ನು ಏಕೆ ಹತ್ಯೆ ಮಾಡಿದರು? ಎಂಬ ಪ್ರಶ್ನೆಗೆ ಶಿವಾಜಿಯವರು ಮಹಾರಾಜರ ಊಟದಲ್ಲಿ ವಿಷ ಹಾಕಿದ್ದರು. ಹಾಗಾಗಿ, ಅವರನ್ನು ಹಿಡಿದು ಬ್ರಿಟಿಷರು ಹವಾಲೆ ಮಾಡಿದ್ದಾರೆ ಎಂದಿದ್ದಾರೆ.

ಹೀಗಿದ್ದೂ ಅವರಿಗೆ ಧರ್ಮವೀರ ಸಂಭಾಜಿ ಎಂಬ ಹೆಸರು ನೀಡಿ ಇತಿಹಾಸ ಬರೆದಿದ್ದಾರೆ ಎನ್ನುವ ಮೂಲಕ ವಿವಾದ ಮೈ ಮೇಲೆ ಎಳೆದುಕೊಂಡಿದ್ದಾರೆ. ಅಲ್ಲದೆ ಈ ದೇಶದ ಇತಿಹಾಸ ಬಗ್ಗೆ ಚಕಾರ ಎತ್ತಿದ ಶತೀಶ್ ಜಾರಕಿಹೊಳಿ, ಈ ದೇಶದ ಇತಿಹಾಸ ಬಹಳ ವಿಚಿತ್ರವಾಗಿದೆ. ಇಂಥ ಇತಿಹಾಸ ತಿಳಿಯಲು ಬಹಳ ಸಮಯ ಬೇಕು ಎಂದು ಕೂಡ ಹೇಳಿದ್ದಾರೆ.

ಸದ್ಯ ಸತೀಶ್ ಜಾರಕಿಹೊಳಿ ನೀಡಿದ ವಿವಾದಾತ್ಮಕ ಹೇಳಿಕೆಯ 42 ಸೆಕೆಂಡ್​ಗಳುಳ್ಳ ಈ ವಿಡಿಯೋ ವೈರಲ್ ಆಗುತ್ತಿದ್ದು, ಭಾಷಣದ ವಿಡಿಯೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ ಅವರು ಈ ರೀತಿಯ ನಾನ್‌ಸೆನ್ಸ್‌ ಹೇಳಿಕೆಯನ್ನು ನೀವು ಒಪ್ಪುತ್ತೀರಾ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿಗೆ ಪ್ರಶ್ನೆ ಮಾಡಿದ್ದಾರೆ.

ಕಾಂಗ್ರೆಸ್‌ನ ಎಂಎಲ್‌ಎ ಒಬ್ಬರು ಈ ರೀತಿ ಮಹಾನ್‌ ನಾಯಕ ಸಂಭಾಜಿ ಮಹಾರಾಜರ ಬಗ್ಗೆ ಹೇಳುವುದನ್ನು ನೀವು ಒಪ್ಪುತ್ತೀರಾ? ಎಂದು ಪ್ರಶ್ನಿಸಿದ್ದಾರೆ. ಜೊತೆಗೆ ಸಂಭಾಜಿ ಮಹಾರಾಜರ ಬಗ್ಗೆ ತಪ್ಪು ಮಾಹಿತಿ ನೀಡುವ, ದಾರಿ ತಪ್ಪಿಸುವ, ಅವಮಾನ ಮಾಡುವ ಹೇಳಿಕೆ ಇದು ಎಂದು ಟ್ವೀಟ್ ಕೂಡ ಮಾಡಿದ್ದಾರೆ. ಅಲ್ಲದೆ ಇದು ನಿಮ್ಮ ಕಾಂಗ್ರೆಸ್‌ ಪಕ್ಷದ ಅಧಿಕೃತ ಹೇಳಿಕೆಯೇ ಮಿಸ್ಟರ್‌ ರಾಹುಲ್‌ ಎಂದು ಮಾತಿನಲ್ಲೇ ಚಾಟಿ ಬೀಸಿದ್ದಾರೆ.

ಜೊತೆಗೆ ಮಹಾರಾಷ್ಟ್ರವು ಇದನ್ನು ಒಪ್ಪುವುದಿಲ್ಲ ಎಂದು ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ. ಮಾತು ಬಲ್ಲವನಿಗೆ ಜಗಳವಿಲ್ಲ ಊಟ ಬಲ್ಲವನಿಗೆ ರೋಗವಿಲ್ಲ.. ಎಂಬ ಮಾತು ಬಹುಶಃ ಇಂತಹವರನ್ನು ನೋಡಿಯೇ ಹೇಳಿರಬೇಕೆನೋ!!