Home latest ನಿರ್ಮಾಣ ಹಂತದಲ್ಲಿರುವ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಮೂವರು ಸಾವು!

ನಿರ್ಮಾಣ ಹಂತದಲ್ಲಿರುವ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಮೂವರು ಸಾವು!

Hindu neighbor gifts plot of land

Hindu neighbour gifts land to Muslim journalist

ನವದೆಹಲಿ: ನಿರ್ಮಾಣ ಹಂತದಲ್ಲಿರುವ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಮೂವರು ಸಾವನ್ನಪ್ಪಿರುವ ಘಟನೆ ಇಂದು ಆಜಾದ್ ಮಾರ್ಕೆಟ್ ಪ್ರದೇಶದಲ್ಲಿ ನಡೆದಿದೆ.

ಕಟ್ಟಡದಲ್ಲಿ ಕೆಲಸ ನಡೆಯುತ್ತಿದ್ದ ವೇಳೆ ಬೆಳಿಗ್ಗೆ ೮:೫೦ ರ ಸುಮಾರಿಗೆ ಕಟ್ಟಡವು ಇದ್ದಕ್ಕಿದ್ದಂತೆ ಕುಸಿದಿದೆ. ಈ ಅವಘಡದಲ್ಲಿ ಇಬ್ಬರು ಕಾರ್ಮಿಕರು ಗಾಯಗೊಂಡಿದ್ದು, ಕನಿಷ್ಠ ಐದು ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದೆ.

ಸ್ಥಳಕ್ಕೆ ನಾಲ್ಕು ಅಗ್ನಿಶಾಮಕ ಸಿಬ್ಬಂದಿ ರವಾನಿಸಲಾಗಿದ್ದು, ರಕ್ಷಣಾ ಪ್ರಯತ್ನಗಳು ನಡೆಯುತ್ತಿವೆ. ಎಷ್ಟು ಕಾರ್ಮಿಕರು ಕಟ್ಟದಲ್ಲಿ ಕೆಲಸ ನಡೆಸುತ್ತಿದ್ದರು ಎಂಬುದರ ಬಗ್ಗೆ ವರದಿಯಾಗಿಲ್ಲ.