Home News Daksina Kannada: ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆಯಲ್ಲಿ ಸ್ಪರ್ಧೆ – ಪಕ್ಷ ವಿರೋಧಿ ಚಟುವಟಿಕೆ ಎಂದು...

Daksina Kannada: ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆಯಲ್ಲಿ ಸ್ಪರ್ಧೆ – ಪಕ್ಷ ವಿರೋಧಿ ಚಟುವಟಿಕೆ ಎಂದು ಇಬ್ಬರು ಬಿಜೆಪಿ ಮುಖಂಡರ ಉಚ್ಛಾಟನೆ !!

Hindu neighbor gifts plot of land

Hindu neighbour gifts land to Muslim journalist

Dakshina Kannada: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ(ಕೆಎಂಎಫ್) ಚುನಾವಣೆಯಲ್ಲಿ ಇಬ್ಬರು ಬಿಜೆಪಿ ಮುಖಂಡರು ಸ್ಪರ್ಧಿಸುತ್ತಿದ್ದು, ಇದು ಪಕ್ಷ ವಿರೋಧಿ ಚಟುವಟಿಕೆ ಎಂದು ಜಿಲ್ಲಾ ಬಿಜೆಪಿಯು ಮುಂದಿನ 6 ವರ್ಷಗಳಿಗೆ ಅನ್ವಯವಾಗುವಂತೆ ಆ ಇಬ್ಬರು ನಾಯಕರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದೆ.

ಹೌದು, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಕಾರ್ಕಳದ ಉದಯ ಕೋಟ್ಯಾನ್‌ ಹಾಗೂ ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ಪೇತ್ರಿ ಕನ್ನಾರು ಕಮಲಾಕ್ಷ ಹೆಬ್ಬಾರ್‌ ಅವರು ಕೆಎಂಎಫ್ ಚುನಾವಣೆಯಲ್ಲಿ ಪಕ್ಷದ ತೀರ್ಮಾನಕ್ಕೆ ವಿರುದ್ಧವಾಗಿ ಸ್ಪರ್ಧೆ ಮಾಡುತ್ತಿರುವುದರಿಂದ ತತ್‌ಕ್ಷಣದಿಂದ ಜಾರಿಗೆ ಬರುವಂತೆ ಅವರನ್ನು ಮುಂದಿನ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್‌ ಕುಮಾರ್‌ ಕುಂದಾಪುರ ತಿಳಿಸಿದ್ದಾರೆ.