ಸೋಮವಾರ, 26 ಅಕ್ಟೋಬರ್ 2026
Trending

ಸೌಜನ್ಯ ಪ್ರಕರಣ ಮರು ತನಿಖೆ- ಶ್ರೀ ಕ್ಷೇತ್ರ ಧರ್ಮಸ್ಥಳ ಸ್ವಾಗತ

ಬೆಳ್ತಂಗಡಿ: ಸರ್ವೋಚ್ಛ ನ್ಯಾಯಾಲಯ ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಪ್ಪಿಸಿರುವ ನಿರ್ಧಾರ ಕುರಿತು ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ನಾವು ಮುಕ್ತ ಮನಸ್ಸಿನಿಂದ ಸ್ವಾಗತಿಸುತ್ತೇವೆ. ಕುಮಾರಿ ಸೌಜನ್ಯಳಿಗೆ ನ್ಯಾಯ ದೊರೆಯಬೇಕು ಎನ್ನುವುದು ಶ್ರೀ ಕ್ಷೇತ್ರದ ಆಶಯ. ಈ ಆದೇಶಿಸಲಾಗಿರುವ ಮರು ತನಿಖೆಯು ಸಂಪೂರ್ಣ ನಿಷ್ಪಕ್ಷಪಾತವಾಗಿ ಹಾಗೂ ಪಾರದರ್ಶಕವಾಗಿ ನಡೆಯಲಿ ಮತ್ತು ಈ ಮೂಲಕ ಪ್ರಕರಣಕ್ಕೆ ತಾರ್ಕಿಕ ಅಂತ್ಯ ದೊರೆಯಲಿ ಎಂದು ನಾವು ಆಶಿಸುತ್ತೇವೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳದ ದೇವಾಲಯ ಕಚೇರಿಯ ವ್ಯವಸ್ಥಾಪಕ ಪಾರ್ಶ್ವನಾಥ್‌ ಜೈನ್‌ ತಿಳಿಸಿದ್ದಾರೆ.

Sponsored
Advertisement
Advertisement
Advertisement