ಶನಿವಾರ, 24 ಅಕ್ಟೋಬರ್ 2026

ದೇಶದಲ್ಲಿ ಮತ್ತೆ ಕೋವಿಡ್ ಆತಂಕ – ಇಬ್ಬರು ಸಾವು, 8 ಮಂದಿಗೆ ಪಾಸಿಟಿವ್‌

ಕರೋನ ಮಹಾಮಾರಿ ಕಣ್ಮರೆಯಾಗಿದೆ, ಇನ್ನು ಅದರ ಆತಂಕವಿಲ್ಲ  ಎಂದು ಜನರು ಭಾವಿಸುತ್ತಿರುವ ಹೊತ್ತಿನಲ್ಲಿಯೇ ಆಂಧ್ರ ಪ್ರದೇಶದಲ್ಲಿ ಕೋವಿಡ್‌ 19 ಮತ್ತೆ ಆತಂಕ ಸೃಷ್ಟಿಸಿದೆ. ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ 8 ಕೊರೊನಾ ವೈರಸ್‌ ಪ್ರಕರಣಗಳು ವರದಿಯಾಗಿದೆ.  ಅಲ್ಲದೆ ಈ ಹೆಮ್ಮಾರಿ ಇಬ್ಬರನ್ನು ಬಲಿ ಪಡೆದಿದೆ.

ಕೋವಿಡ್‌ ಪಾಸಿಟಿವ್‌ ಬಂದವರಲ್ಲಿ ಒಬ್ಬರು ಕಡಪದ ರಾಜಂಪೇಟೆ ಪ್ರದೇಶದ 52 ವರ್ಷದ ವ್ಯಕ್ತಿಯಾಗಿದ್ದಾರೆ. ಆರಂಭದಲ್ಲಿ ಜ್ವರ ಮತ್ತು ಕೆಮ್ಮು ಕಾಣಿಸಿಕೊಂಡಿದ್ದು, ಬಳಿಕ ಕೋವಿಡ್‌-19 ಸೋಂಕು ದೃಢಪಟ್ಟಿದೆ. ವೆಲ್ಲೂರಿನ ಕ್ರಿಶ್ಚಿಯನ್‌ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಅವರು ನಿಧನರಾಗಿದ್ದಾರೆ ಎನ್ನಲಾಗಿದೆ.

ಮತ್ತೊಬ್ಬರು ಕಡಪ ಮೂಲದ 43 ವರ್ಷದ ವ್ಯಕ್ತಿಯೊಬ್ಬರು ಆರೋಗ್ಯ ಸಮಸ್ಯೆಗಳಿಂದಾಗಿ ಸರ್ಕಾರಿ ಜನರಲ್‌ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಅವರಿಗೆ ಕೊರೊನಾ ವೈರಸ್‌ ಸೋಂಕು ತಗುಲಿರುವುದು ದೃಢಪಟ್ಟಿದೆ. ಆದ್ದರಿಂದ ಕೋವಿಡ್ -19 ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಅವರು ನಿಧನರಾದರು ಎಂದು ವರದಿಯಾಗಿದೆ.

ಅಲ್ಲದೇ ಕಡಪ ವೈದ್ಯಕೀಯ ಕಾಲೇಜಿನ 25 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಗೂ ಕೋವಿಡ್‌ ಪಾಸಿಟಿವ್‌ ಬಂದಿದ್ದು, ಪ್ರಸ್ತುತ ಚಿಕಿತ್ಸೆ ಪಡೆದು, ಮನೆಯಲ್ಲಿಯೇ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.