Home News Covid: ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣ: ಕೊರೋನಾ ಸಹಾಯವಾಣಿ ಪ್ರಾರಂಭ ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ!

Covid: ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣ: ಕೊರೋನಾ ಸಹಾಯವಾಣಿ ಪ್ರಾರಂಭ ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ!

Hindu neighbor gifts plot of land

Hindu neighbour gifts land to Muslim journalist

Covid: ರಾಜ್ಯದಲ್ಲಿ ಕೋವಿಡ್ (Covid) ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೊರೋನಾ ಸಹಾಯವಾಣಿ ಪ್ರಾರಂಭಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಸೋಮವಾರ ನಗರದಲ್ಲಿರುವ ಕಾವೇರಿ ನಿವಾಸದಲ್ಲಿ ಕೋವಿಡ್ ಸಂಬಂಧಿಸಿದಂತೆ ಪರಿಸ್ಥಿತಿ ಅವಲೋಕಿಸಲು ಆಯೋಜಿಸಿದ್ದ ಆರೋಗ್ಯ ಶಿಕ್ಷಣ ಇಲಾಖೆ ಸಚಿವ ಮತ್ತು ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ಜನವರಿಯಿಂದಲೂ ಕೊರೊನಾ ಪ್ರಕರಣಗಳು ಅಲ್ಲಲ್ಲಿ ಒಂದೆರಡು ಕಾಣಬರುತ್ತಿದ್ದು ಮೇ ತಿಂಗಳಲ್ಲಿ ಉಲ್ಬಣವಾಗಿದೆ. ಸದ್ಯಕ್ಕೆ ಆತಂಕ ಪಡುವ ಅಗತ್ಯವಿಲ್ಲ. ಆದರೆ, ಮುಂಚಿತವಾಗಿಯೇ ಮುಂದೆ ಸಂಭವಿಸಬಹುದಾದ ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯವಾದ ಎಲ್ಲ ಸವಲತ್ತು, ಸಲಕರಣೆಗಳನ್ನು ಸಜ್ಜುಗೊಳಿಸಿಟ್ಟುಕೊಳ್ಳಬೇಕು ಎಂದು ಅವರು ತಿಳಿಸಿದರು.