Home Breaking Entertainment News Kannada Chinnaswamy Stadium: ಚಿನ್ನಸ್ವಾಮಿ ಸ್ಟೇಡಿಯಂಗೆ ಹರಿದು ಬಂದ ಜನಸಾಗರ: ಕಾಲ್ತುಳಿತಕ್ಕೆ 11 ಜನ RCB ಅಭಿಮಾನಿಗಳು...

Chinnaswamy Stadium: ಚಿನ್ನಸ್ವಾಮಿ ಸ್ಟೇಡಿಯಂಗೆ ಹರಿದು ಬಂದ ಜನಸಾಗರ: ಕಾಲ್ತುಳಿತಕ್ಕೆ 11 ಜನ RCB ಅಭಿಮಾನಿಗಳು ಸಾವು

Hindu neighbor gifts plot of land

Hindu neighbour gifts land to Muslim journalist

Chinnaswamy Stadium: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ಘಟನೆಯಲ್ಲಿ ಸಾವನ್ನಪ್ಪಿದ್ದವರ ಸಂಖ್ಯೆ 10 ಕ್ಕೆ ಏರಿದೆ. ಹಲವರ ಸ್ಥಿತಿ ಗಂಭೀರವಾಗಿದೆ.

ಆರ್‌ಸಿಬಿ 18 ವರ್ಷಗಳ ಬಳಿಕ ಐಪಿಎಲ್‌ ಟ್ರೋಫಿ ಗೆದ್ದಿದ್ದು, ಈ ಹಿನ್ನೆಲೆಯಲ್ಲಿ ಚಿನ್ನಸ್ವಾಮಿ ಸ್ಟೇಡಿಯಂ ಬಲ್ಲಿ ಇಂದು ವಿಜಯೋತ್ಸವ ಹಮ್ಮಿಕೊಳ್ಳಲಾಗಿತ್ತು. ತಮ್ಮ ನೆಚ್ಚಿನ ಆಟಗಾರರ ಸಂಭ್ರಮಾಚರಣೆ ನೋಡಲು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಜನಸಾಗರ ಬಂದಿದೆ. ಜನರನ್ನು ನಿಯಂತ್ರಣ ಮಾಡಲು ಪೊಲೀಸರು ಹರಸಾಹಸ ಪಟ್ಟಿದ್ದು, ಆದರೆ ಜನರು ಸ್ಟೇಡಿಯಂನತ್ತ ಪ್ರವಾಹದಂತೆ ನುಗ್ಗಿದ್ದಾರೆ. ಗೇಟುಗಳನ್ನು ಮುರಿದು ಒಳನುಗ್ಗಿದ್ದರಿಂದ ಭಾರೀ ನೂಕುನುಗ್ಗಲು ಉಂಟಾಗಿದೆ. ಇದರಿಂದ ಭೀಕರ ಕಾಲ್ತುಳಿತ ಸಂಭವಿಸಿದ್ದು, ಇಲ್ಲಿಯವರೆಗೆ ಈ ದುರಂತದಲ್ಲಿ 11 ಜನ ಸಾವಿಗೀಡಾಗಿದ್ದಾರೆ.

ನಾಲ್ವರು ವೈದೇಹಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ಆರು ಮಂದಿ ಗಾಯಾಳುಗಳು ಬೌರಿಂಗ್‌ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. 15 ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದು ಆಸ್ಪತ್ರೆ ಸೇರಿದ್ದಾರೆ. ಹಲವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.