ಕ್ರಿಪ್ಟೋ ಕರೆನ್ಸಿ ಹಗರಣ: ಹ್ಯಾಕರ್ ಶ್ರೀಕಿಗೆ ಹೈಕೋರ್ಟ್‌ನಿಂದ ಜಾಮೀನು
ಬೆಂಗಳೂರು: ಕ್ರಿಪ್ಟೋಕರೆನ್ಸಿ ಹಗರಣಕ್ಕೆ ಕುರಿತಂತೆ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಪ್ರಕರಣದಲ್ಲಿ ಹ್ಯಾಕರ್ ಶ್ರೀಕೃಷ್ಣ ರಮೇಶ್ ಅಲಿಯಾಸ್ ಶ್ರೀಕಿ ಮತ್ತು ಆತನ ಅಕೌಂಟೆಂಟ್ ರಾಬಿನ್ ಖಂಡೇಲ್‌ವಾಲ್‌ಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಪಿಎಂಎಲ್‌ಎ ಕಾಯ್ದೆಯ ಸೆಕ್ಷನ್ 3 ಮತ್ತು 4 ರ ಅಡಿಯಲ್ಲಿ ಆರೋಪ ಎದುರಿಸುತ್ತಿರುವ ಇಬ್ಬರು ಆರೋಪಿಗಳು ನಿಯಮಿತ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಪುರಸ್ಕರಿಸಿ ನ್ಯಾಯಾಲಯ ಈ ಆದೇಶ ನೀಡಿದೆ.
Sponsored



