ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಟ್ರೆಂಡ್ ಆಗುತ್ತಿರುವ 80ರ ದಶಕದ ಫೋಟೋ ಎಡಿಟಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೈಬರ್ ಕ್ರೈಂ ಅಧಿಕಾರಿಗಳು ಮತ್ತು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.


80ರ ದಶಕದ ಫೋಟೋಗಳ ಮಾದರಿಯಲ್ಲಿ ತಮ್ಮ ಫೋಟೋಗಳನ್ನ ಎಡಿಟ್ ಮಾಡಿಸಿಕೊಳ್ಳಲು ಸಾರ್ವಜನಿಕರು ವಿವಿಧ ಆ್ಯಪ್ಗಳು ಹಾಗೂ ಆನ್ಲೈನ್ ಲಿಂಕ್ಗಳನ್ನು ಬಳಸುತ್ತಿದ್ದಾರೆ. ಆದರೆ, ಇಂತಹ ಸಂದರ್ಭದಲ್ಲಿ ಅಪರಿಚಿತ ಆ್ಯಪ್ಗಳನ್ನು ಡೌನ್ಲೋಡ್ ಮಾಡುವುದು ಅಥವಾ ಅನುಮಾನಾಸ್ಪದ ಲಿಂಕ್ಗಳನ್ನು ತೆರೆಯುವುದರಿಂದ ಸೈಬರ್ ವಂಚನೆಗೆ ಒಳಗಾಗುವ ಸಾಧ್ಯತೆ ಇದೆ. ಹೀಗಾಗಿ ಫೋಟೋ ಎಡಿಟಿಂಗ್ ಹೆಸರಿನಲ್ಲಿ ಸೈಬರ್ ವಂಚಕರು ಸಾರ್ವಜನಿಕರನ್ನ ವಂಚಿಸುವ ಸಾಧ್ಯತೆ ಇರುವುದರಿಂದ ಎಚ್ಚರಿಕೆಯಿಂದ ಇರುವಂತೆ ಪೊಲೀಸರು ಜನಜಾಗೃತಿ ಮೂಡಿಸಿದ್ದಾರೆ
ಹೀಗಾಗಿ ಅಪರಿಚಿತ ಆ್ಯಪ್ಗಳನ್ನ ಇನ್ಸ್ಟಾಲ್ ಮಾಡದಂತೆ ಹಾಗೂ ಅನುಮಾನಾಸ್ಪದ ಲಿಂಕ್ಗಳ ಮೇಲೆ ಕ್ಲಿಕ್ ಮಾಡದಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ. ಯಾವುದೇ ಆನ್ಲೈನ್ ಸೇವೆ ಬಳಸುವ ಮುನ್ನ ಅದರ ವಿಶ್ವಾಸಾರ್ಹತೆ ಪರಿಶೀಲಿಸುವಂತೆ ಪೊಲೀಸರು ತಿಳಿವಳಿಕೆ ನೀಡಿದ್ದಾರೆ.
ಅಲ್ಲದೆ ಯುವತಿಯರು ಹೆಚ್ಚು ಈ ಬಗ್ಗೆ ಜಾಗೃತಿ ವಹಿಸುವಂತೆ ಅವರು ಸೂಚಿಸಿದ್ದು ತಮ್ಮ ಫೋಟೋಗಳನ್ನು ಬೆಳೆಸಿಕೊಂಡು ಅಷ್ಟೇ ಇಲ್ಲ ವಿಡಿಯೋಗಳನ್ನು ಸೃಷ್ಟಿಸುವ ಸಾಧ್ಯತೆಗಳು ಹೆಚ್ಚಿರುತ್ತದೆ. ಅಲ್ಲದೆ ಡಿ ಫೇಕ್ ವಿಡಿಯೋಗಳನ್ನು ಮಾಡಿಯೂ ನಿಮ್ಮಿಂದ ಸುಲಿಗೆ ಮಾಡಬಹುದು ಎಂದು ಎಚ್ಚರಿಕೆ ನೀಡಿದ್ದಾರೆ

