Home News Cyclone: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ – ರಾಜ್ಯದ ಈ ಭಾಗಗಳಲ್ಲಿ ಮಳೆ!!

Cyclone: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ – ರಾಜ್ಯದ ಈ ಭಾಗಗಳಲ್ಲಿ ಮಳೆ!!

Monsoon Rain

Hindu neighbor gifts plot of land

Hindu neighbour gifts land to Muslim journalist

Cyclone: ರಾಜ್ಯಾದ್ಯಂತ ಇದೀಗ ಚಳಿಯ ಆರ್ಭಟ ಜೋರಾಗಿದೆ. ಮೈ ಕೊರೆಯುವ ಚಳಿಗೆ ಜನರು ಮನೆಯಿಂದ ಹೊರಬರಲು ಕೂಡ ಹಿಂದೆ ಮುಂದೆ ಯೋಚಿಸುತ್ತಿದ್ದಾರೆ. ಈ ನಡುವೆ ಮಳೆಯ ಆರ್ಭಟ ಕೂಡ ಜೋರಾಗುತ್ತದೆ ಎನ್ನಲಾಗಿದೆ. ಯಾಕೆಂದರೆ ಇದೀಗ ಬಂಗಾಳಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ ಉಂಟಾಗಲಿದ್ದು ರಾಜ್ಯದ ಈ ಭಾಗಗಳಲ್ಲಿ ಸಿಕ್ಕಾಪಟ್ಟೆ ಮಳೆ ಆಗುವ ಸಾಧ್ಯತೆ ಇದೆ.

ಹೌದು, ಇದೇ ನವೆಂಬರ್‌ 22ರಂದು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಹವಾಮಾನ ಕೇಂದ್ರ ನೀಡಿರುವ ಮಾಹಿತಿ ಪ್ರಕಾರ, ನೈಋತ್ಯ ಬಂಗಾಳಕೊಲ್ಲಿ ಮತ್ತು ಶ್ರೀಲಂಕಾ ಕರಾವಳಿಯಲ್ಲಿದ್ದ ವಾಯುಭಾರ ಕುಸಿತವು ಪ್ರಸ್ತುತ ಕೊಮೊರಿಯನ್ ಪ್ರದೇಶದ ಮೇಲೆ ಕೇಂದ್ರೀಕೃತವಾಗಿದೆ. ಹೀಗಾಗಿ ದಕ್ಷಿಣ ಒಳನಾಡಿನಲ್ಲಿ ನವೆಂಬರ್ 22ರ ವರೆಗೆ ಮಳೆಯಾಗಲಿದೆ ಎಂದು ತಿಳಿಸಿದೆ.

ನವೆಂಬರ್‌ 22, 23 ಮತ್ತು 24ರಂದು ವಾಯುಭಾರ ಕುಸಿತದ ಪ್ರಭಾವದಿಂದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಒಂದೆರಡು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ನವೆಂಬರ್‌ 22ರ ವರೆಗೆ ಮಳೆಯಾಗಲಿದ್ದು, ರಾತ್ರಿ ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ