ಮಂಗಳೂರು: ರಾಜ್ಯ ಮಾನ್ಯತೆ ಪಡೆದಿರುವ, ಇತಿಹಾಸ ಪ್ರಸಿದ್ಧ ಜಾನಪದ ಕ್ರೀಡೆ ಕಂಬಳ ಅಭಿವೃದ್ಧಿ ಹಾಗೂ ಪ್ರೋತ್ಸಾಹಕ್ಕಾಗಿ ಮುಂದಿನ ಬಜೆಟ್‌ನಲ್ಲಿ 5ಕೋ. ರೂ. ವಿಶೇಷ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ.


ಕಂಬಳದ ಮಹಾ ಪೋಷಕ ಹಾಗೂ ಕಂಬಳ ಕ್ರೀಡೆಗೆ ನಿರಂತರ ಪ್ರೋತ್ಸಾಹ ನೀಡುತ್ತಿರುವ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಅವರ ನಿಯೋಗವು ಶುಕ್ರವಾರ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
ರಾಜ್ಯದಲ್ಲಿ ನಡೆಯುವ 27 ಕಂಬಳಗಳ ಆಯೋಜನೆಗೆ 5 ಕೋಟಿ ರೂ.ವಿಶೇಷ ಅನುದಾನ ಒದಗಿಸುವಂತೆ ಹಾಗೂ ಈ ಕುರಿತು ಸೆ.18 ರಂದು ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಮಂಡಿಸುವಂತೆ ನಿಯೋಗ ಮನವಿ ಮಾಡಿತು. ಡಿ.ಕೆ.ಶಿವಕುಮಾರ್ ಇದಕ್ಕೆ ಸ್ಪಂದಿಸಿದ್ದು, ಅನುದಾನ ನೀಡುವ ಭರವಸೆ ನೀಡಿದರು.