Home Crime Dakshina Kannada: ಕಡಬದ ಸರಕಾರಿ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳಿಗೆ ಆಸಿಡ್‌ ದಾಳಿ; ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು

Dakshina Kannada: ಕಡಬದ ಸರಕಾರಿ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳಿಗೆ ಆಸಿಡ್‌ ದಾಳಿ; ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು

Dakshina Kannada

Hindu neighbor gifts plot of land

Hindu neighbour gifts land to Muslim journalist

Kadaba: ಇಲ್ಲಿನ ಪದವಿಪೂರ್ವ ಕಾಲೇಜಿನ ಆವರಣದೊಳಗೆ ವಿದ್ಯಾರ್ಥಿಗಳಿಗೆ ಆಸಿಡ್‌ ಎರಚಿರುವ ಘಟನೆಯೊಂದು ನಡೆದಿದ್ದು, ಸುತ್ತಮುತ್ತಲಿನ ಜನರು ಬೆಚ್ಚಿ ಬಿದ್ದಿದ್ದಾರೆ.

ಇದನ್ನೂ ಓದಿ: Samanta Ruth prabhu: ಬಾತ್ ರೂಂ ಫೋಟೋಸ್ ಶೇರ್ ಮಾಡಿದ ನಟಿ ಸಮಂತಾ !!

ಮುಸುಕುಧಾರಿಯೊಬ್ಬ ಬಂದು ವಿದ್ಯಾರ್ಥಿಗಳಿಗೆ ಆಸಿಡ್‌ ದಾಳಿ ನಡೆಸಿರುವ ಕುರಿತು ವರದಿಯಾಗಿದೆ. ಅಲಿನ ಸಿಬಿ, ಅರ್ಚನ, ಅಮೃತ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾಗಿದ್ದು, ಇವರಿಗೆ ಗಂಭೀರ ಗಾಯವಾಗಿರುವ ಮಾಹಿತಿ ಲಭಿಸಿದೆ. ಗಾಯಾಳುಗಳನ್ನು ಆಸ್ಪತ್ರಗೆ ದಾಖಲು ಮಾಡಲಾಗಿದೆ ಎಂದು ವರದಿಯಾಗಿದೆ. ಪೊಲೀಸರು ಯುವಕನನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ. ಆಸ್ಪತ್ರೆಯ ಆವರಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಜಮಾಯಿಸಿರುವ ಕುರಿತು ವರದಿಯಾಗಿದೆ.

ಆರೋಪಿ ಕೇರಳ ಮೂಲದವ ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದು ಬಂದಿದೆ. ಮಾಸ್ಕ್‌, ಹ್ಯಾಟ್‌ ಹಾಕಿಕೊಂಡು ಬಂದು ವಿದ್ಯಾರ್ಥಿನಿಯರ ಮೇಲೆ ಆಸಿಡ್‌ ದಾಳಿ ಮಾಡಿದ್ದಾನೆ. ವಿದ್ಯಾರ್ಥಿನಿಯರಿಗೆ ಕಡಬ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕೊಂಡೊಯ್ಯಲಾಗುತ್ತಿದೆ.

ಆಸಿಡ್‌ ಹಾಕಿದ ಆರೋಪಿ ಅಬೀಬ್‌ ಎಂದು ತಿಳಿದು ಬಂದಿದ್ದು, ಆತ ಪರಾರಿಯಾಗಲು ಯತ್ನ ಮಾಡಿದ್ದ. ಕೂಡಲೇ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ. ಯಾಕಾಗಿ ಈ ಕೃತ್ಯ ಎಸಗಿದ್ದಾನೆ ಎನ್ನುವುದು ಇನ್ನಷ್ಟೇ ತಿಳಿದು ಬರಬೇಕಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ಮಾಡುತ್ತಿದ್ದಾರೆ.

ವಿದ್ಯಾರ್ಥಿನಿಯರ ಪೋಷಕರು ಈ ಘಟನೆಯಿಂದ ಕಂಗಾಲಾಗಿದ್ದಾರೆ. ಇತರೆ ವಿದ್ಯಾರ್ಥಿನಿಯರು ಆಸಿಡ್‌ ದಾಳಿಯಿಂದ ಆತಂಕಕ್ಕೊಳಗಾಗಿದ್ದಾರೆ.

ಮೇಲ್ನೋಟಕ್ಕೆ ಇದು ಪ್ರೇಮವೈಫಲ್ಯದ ಕೃತ್ಯ ಎಂದು ತಿಳಿದು ಬಂದಿದೆ. ಆರೋಪಿ ಮತ್ತು ಆಸಿಡ್‌ ದಾಳಿಗೊಳಗಾದ ವಿದ್ಯಾರ್ಥಿನಿ ಒಂದೇ ಕೋಮಿನವರು ಎಂದು ತಿಳಿದು ಬಂದಿದೆ. ಘಟನೆಯ ಸಂದರ್ಭ ವಿದ್ಯಾರ್ಥಿನಿಯ ಪಕ್ಕದಲ್ಲಿದ್ದ ಇಬ್ಬರು ವಿದ್ಯಾರ್ಥಿನಿಗೂ ಆಸಿಡ್‌ ತಗುಲಿ, ಸಣ್ಣ ಪ್ರಮಾಣದ ಗಾಯಗಳಾಗಿದೆ.