ಸೋಮವಾರ, 26 ಅಕ್ಟೋಬರ್ 2026
Trending

ದ.ಕ: ಜು.24 ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಶುಕ್ರವಾರ (ಜು.24) ರಂದು ಜಿಲ್ಲೆಯಾದ್ಯಂತ ಎಲ್ಲಾ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಹೆಚ್‌ ವಿ ದರ್ಶನ್‌ ಆದೇಶ ಹೊರಡಿಸಿದ್ದಾರೆ.

Sponsored

ಜಿಲ್ಲಾಧಿಕಾರಿಗಳ ಆದೇಶದಂತೆ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಪದವಿಪೂರ್ವ (ಪಿಯು) ಕಾಲೇಜುಗಳಿಗೆ ರಜೆ ಅನ್ವಯವಾಗಲಿದೆ.