ಸೋಮವಾರ, 26 ಅಕ್ಟೋಬರ್ 2026
Trending

ದ.ಕ: ಭಾರೀ ಮಳೆ ಹಿನ್ನೆಲೆ: ನಾಳೆ ಶಾಲಾ ಕಾಲೇಜಿಗೆ ರಜೆ ಘೋಷಣೆ

Advertisement

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಹವಾಮಾನ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿಯು ಮುಂದುವರಿಯುವ ಸೂಚನೆಯಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.

Sponsored

ಜಿಲ್ಲೆಯಲ್ಲಿ ಈ ಕೆಳಗಿನ ಎಲ್ಲಾ ಸಂಸ್ಥೆಗಳಿಗೆ ದಿನಾಂಕ 01.08.2026 ರಂದು ರಜೆಯನ್ನು ಘೋಷಿಸಲಾಗಿದೆ ಹಾಗೂ ಇದನ್ನು ಉಲ್ಲಂಘಿಸಿದವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ, 2005 ರ ಪ್ರಕಾರ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು.

Advertisement
Advertisement

ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಜಿಲ್ಲೆಯ ಎಲ್ಲಾ ಸರ್ಕಾರಿ ಅನುದಾನಿತ ಹಾಗು ಖಾಸಗಿ ಶಾಲೆಗಳು (ಎಲ್ಲಾ ವಸತಿ ಶಾಲೆಗಳೂ ಸೇರಿದಂತೆ)ಜಿಲ್ಲೆಯ ಎಲ್ಲಾ ಪದವಿ ಪೂರ್ವ ಕಾಲೇಜುಗಳು 12ನೇ ತರಗತಿಯವರಿಗೆ (ಎಲ್ಲಾ ವಸತಿ ಕಾಲೇಜುಗಳೂ ಸೇರಿದಂತೆ), ಜಿಲ್ಲೆಯ ಎಲ್ಲಾ ITI ಮತ್ತು Diploma ಕಾಲೇಜುಗಳು (ಎಲ್ಲಾ ವಸತಿ ಕಾಲೇಜುಗಳೂ ಸೇರಿದಂತೆ) ರಜೆ ಘೋಷಣೆ ಮಾಡಲಾಗಿದೆ.

ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು.

ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ.

Advertisement
div class="ere-sticky">