Home News Belthangady: ಕೇರಳದಿಂದ ನಕ್ಸಲರನ್ನು ವಶಕ್ಕೆ ಪಡೆದ ದಕ್ಷಿಣ ಕನ್ನಡ ಪೊಲೀಸ್!

Belthangady: ಕೇರಳದಿಂದ ನಕ್ಸಲರನ್ನು ವಶಕ್ಕೆ ಪಡೆದ ದಕ್ಷಿಣ ಕನ್ನಡ ಪೊಲೀಸ್!

Hindu neighbor gifts plot of land

Hindu neighbour gifts land to Muslim journalist

Belthangady: ಮೂರು ನಕ್ಸಲ್ ಚಟುವಟಿಕೆ ಪ್ರಕರಣ ದಾಖಲಾದ ಸಂಬಂಧ ಇಬ್ಬರು ನಕ್ಸಲ್ ನಾಯಕರನ್ನು ಬೆಳ್ತಂಗಡಿ (Belthangady) ಪೊಲೀಸರು ಕೇರಳ ಜೈಲಿನಿಂದ ಬಾಡಿ ವಾರೆಂಟ್ ಮೂಲಕ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬೆಳ್ತಂಗಡಿ ಪೊಲೀಸರು ಇಬ್ಬರು ನಕ್ಸಲರನ್ನು ಎರಡು ದಿನ ಕಸ್ಟಡಿಗೆ ಪಡೆದು ಮೂರು ಪ್ರಕರಣಗಳ ಬಗ್ಗೆ ತನಿಖೆ ನಡೆಸಲಿದ್ದಾರೆ‌. 8-11-2021 ರಂದು ಕೇರಳ ರಾಜ್ಯದ ಪೊಲೀಸರು ಮೋಸ್ಟ್ ವಾಟೆಂಡ್ ನಕ್ಸಲ್ ನಾಯಕರಾದ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ನಿವಾಸಿ ಪಶ್ಚಿಮ ಘಟ್ಟದ ವಿಶೇಷ ಸಮಿತಿಯ ಕಾರ್ಯದರ್ಶಿಯಾಗಿದ್ದ ಬಿ.ಜಿ.ಕೃಷ್ಣಮೂರ್ತಿ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕಳಸ ನಿವಾಸಿ ಸಾವಿತ್ರಿಯನ್ನು ಬಂಧಿಸಿದ್ದರು. ನಂತರ ಬಂಧಿತರನ್ನು ತ್ರಿಶೂರ್ ಜೈಲಿನಲ್ಲಿರಿಸಲಾಗಿತ್ತು. ಕರ್ನಾಟಕ, ಕೇರಳ, ತಮಿಳುನಾಡಿನಲ್ಲಿ ಬಿ.ಜಿ.ಕೃಷ್ಣಮೂರ್ತಿ ವಿರುದ್ಧ 53 ಪ್ರಕರಣ, ಸಾವಿತ್ರಿ ವಿರುದ್ಧ 22 ಪ್ರಕರಣ ತನಿಖೆಯಲ್ಲಿದೆ.

ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಮಚಂದ್ರ ಭಟ್ ಎಂಬವರ ಮನೆಯ ಅಂಗಳದಲ್ಲಿದ್ದ ಕಾರು, ಬೈಕ್​ಗೆ 2012-2013 ರಲ್ಲಿ ಬೆಂಕಿ ಹಚ್ಚಿದ ಪ್ರಕರಣ, ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಕಾರ್ಯತಡ್ಕ ಗ್ರಾಮದಲ್ಲಿ ನಕ್ಸಲ್ ಬೆಂಬಲಿತ ಬ್ಯಾನರ್ ಹಾಕಿದ ಪ್ರಕರಣ, ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮಲವಂತಿಗೆ ಗ್ರಾಮದಲ್ಲಿ ಭಾರಿ ಸ್ಫೋಟಕ ಪತ್ತೆ ಪ್ರಕರಣದಲ್ಲಿ ಇಬ್ಬರನ್ನು ಬಾಡಿ ವಾರೆಂಟ್ ಮೂಲಕ ಕೇರಳ ರಾಜ್ಯದ ತ್ರಿಶೂರ್ ಜೈಲಿನಿಂದ ಭದ್ರತೆಯಲ್ಲಿ ಕರೆದುಕೊಂಡು ಬಂದಿದ್ದಾರೆ.