

Tala Kaveri: ತಲಕಾವೇರಿಯಲ್ಲಿ ಜರುಗುವ ಪವಿತ್ರ ಕಾವೇರಿ ತೀರ್ಥೋದ್ಭವ ಸಂಬಂಧ ಎಲ್ಲಾ ರೀತಿಯ ಪೂರ್ವ ತಯಾರಿ ಮಾಡಿಕೊಳ್ಳವಂತೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್. ಭೋಸರಾಜು ಸೂಚಿಸಿದ್ದಾರೆ.
ಭಾಗಮಂಡಲ ‘ಶ್ರೀ ಭಗಂಡೇಶ್ವರ ದೇವಾ ಲಯದ ಹಳೆ ಮುಡಿಕೆಡ್ ಕಟ್ಟಡದ ಸಧಾಂಗ ದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಸಚಿವರು ಮಾತನಾಡಿದರು. ಪವಿತ್ರ ತೀರ್ಥೋ ಧೃವ ಸಂಬಂಧ ತಲಕಾವೇರಿಯಲ್ಲಿ ಭಕ್ತಾಧಿ ಗಳಿಗೆ ಯಾವುದೇ ರೀತಿ ಕಿರಿಕಿರಿ ಉಂಟಾ ಗದಂತೆ ಅಧಿಕಾರಿಗಳು ಗಮನಹರಿಸು ವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಈ ಬಾರಿ ಅಕ್ಟೋಬರ್, 17 ರಂದು ಮಧ್ಯಾಹ್ನ 1.44 ಗಂಟೆಗೆ ಸಲ್ಲುವ ಮಕರ ಲಗ್ನದಲ್ಲಿ ಪವಿತ್ರ ತೀರ್ಥೋದ್ಭವ ಸಂಭವಿಸುವುದರಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸಾಧ್ಯತೆ ಇದ್ದು, ಆದ್ದರಿಂದ ಅಗತ್ಯ ಕ್ರಮ ವಹಿಸುವಂತೆ ಸಚಿವರು ಸೂಚಿಸಿದರು. ಪೊಲೀಸ್ ಇಲಾಖೆ ಪವಿತ್ರ ತೀರ್ಥೋದ್ಭವ ಸಂಬಂಧ ಅಗತ್ಯ ಬಂದೋಬಸ್ತ್ ಮಾಡಬೇಕು. ಸಾರಿಗೆ ಇಲಾಖೆ ಅಧಿಕಾರಿ ಗಳು ಅಗತ್ಯ ಬಸ್ ಸೌಲಭ್ಯ ಒದಗಿಸುವುದು, ಕಾವೇರಿ ನೀರಾವರಿ ನಿಗಮ, ಸೆಸ್ಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿವಿಧ ಇಲಾಖೆ ಅಧಿಕಾರಿಗಳು ತಮ್ಮ ತಮ್ಮ ಹಂತದಲ್ಲಿ ಅಗತ್ಯ ತಯಾರಿ ಮಾಡಿಕೊ ಳ್ಳುವಂತೆ ಸಚಿವರು ಸೂಚಿಸಿದರು.
ಸೆಪ್ಟೆಂಬರ್, 26 ರಿಂದ ವಿವಿಧ ಪೂಜಾ ಕಾರ್ಯಕ್ರಮಗಳು ಆರಂಭವಾಗಲಿದೆ. ಸಮಸ್ಯೆಗಳು ಇದ್ದಲ್ಲಿ ಜಿಲ್ಲಾಧಿಕಾರಿ ಅವರ ಗಮನಕ್ಕೆ ತರಬೇಕು. ಜೊತೆಗೆ ಶಾಸಕರ ಗಮನಕ್ಕೂ ತಂದಲ್ಲಿ ಸಮಸ್ಯೆಗಳನ್ನು ಇತ್ಯರ್ಥ ಪಡಿಸಲಾಗುವುದು ಎಂದು ತಿಳಿಸಿದರು. ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ ಭಕ್ತಾದಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸುವಂತೆ ಸೂಚಿಸಿದರು.
ಇದನ್ನೂ ಓದಿ:School: ವಿದ್ಯಾರ್ಥಿಗೆ ಮನ ಬಂದಂತೆ ಥಳಿಸಿದ ಶಿಕ್ಷಕಿ – ಮೂರ್ಛೆ ತಪ್ಪಿ ಆಸ್ಪತ್ರೆ ಸೇರಿದ ಬಾಲಕ
ಈ ವೇಳೆ ಶಾಸಕರು, ಸಮಾಜದ ಮುಖಂ ಡರು ಮತ್ತು ಕಾವೇರಿ ತೀರ್ಥೋ ದ್ಭವ ಸಮಿತಿಯ ಪದಾಧಿಕಾರಿಗಳು ಉಪ್ಪಸ್ಥಿತರಿದ್ದು, ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು.













